Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಲಲಿತಕಲಾ ತರಗತಿಗಳ ಉದ್ಘಾಟನೆ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಲಲಿತಕಲಾ ತರಗತಿಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.ಉದ್ಘಾಟನೆಯನ್ನು ಶ್ರೀ ರಾಮಚಂದ್ರ.ಡಿ ಸುಬ್ರಹ್ಮಣ್ಯ ಟಮ್ಕಿ ನುಡಿಸುವುದರ ಮೂಲಕ ಉದ್ಘಾಟಿಸಿದರು.ಲಲಿತ ಕಲೆಗಳಾದ ಭರತನಾಟ್ಯ, ಯಕ್ಷಗಾನ, ಚಿತ್ರಕಲೆ, ಚೆಸ್ ಮುಂತಾದ ತರಗತಿಗಳು ಪ್ರತಿ ಬುಧವಾರ ಸಂಸ್ಥೆಯಲ್ಲಿ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಕುಮಾರಿ ಶ್ರಾವ್ಯ ಹತ್ತನೇ ತರಗತಿ ವಹಿಸಿದ್ದರು.ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ...

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ದಿನಾಚರಣೆ ; ಸನ್ಮಾನ ಕಾರ್ಯಕ್ರಮ

“ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸವಿದೆ” : ವಾಲ್ಟರ್ ನಂದಳಿಕೆ

ಮಂಗಳೂರು ಜು.02 : “ಮುದ್ರಣ ಮಾಧ್ಯಮಗಳ ಮೇಲೆ ಜನರಿಗೆ ಹೆಚ್ಚು ವಿಶ್ವಾಸ ಇನ್ನೂ ಉಳಿದಿದೆ ಎನ್ನುವ ಅಭಿಪ್ರಾಯ ಇದೆ” ಎಂದು ವಾಲ್ಟರ್ ನಂದಳಿಕೆ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಮಂಗಳೂರು ಪತ್ರಿಕಾ ಭವನದಲ್ಲಿ  ಹಮ್ಮಿಕೊಂಡ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ “ಮಾಧ್ಯಮದ ಸವಾಲುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಇವರು “ಇತ್ತೀಚೆಗೆ...
Ad Widget

“ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು” : ಕು| ಭಾಗೀರಥಿ ಮುರುಳ್ಯ

ಪಂಜ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶೌಚಾಲಯ ಉದ್ಘಾಟನೆ

“ನಮ್ಮ ದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ಹಾಗೂ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಉತ್ತಮ ಆರೋಗ್ಯ ಇರುತ್ತದೆ. ಕೇಂದ್ರ ಸರ್ಕಾರವು ಸ್ವಚ್ಛ ಭಾರತ ಯೋಜನೆಯಡಿ ಪ್ರತೀ ಮನೆಗಳಿಗೂ ಕಡ್ಡಾಯವಾಗಿ ಶೌಚಾಲಯವನ್ನು ನಿರ್ಮಿಸಲು ಮುಂದಾಗಿದೆ. ಇದರ ಉದ್ದೇಶ ಮನೆಮಂದಿ ಎಲ್ಲೂ ಬಯಲು ಶೌಚಾಲಯಕ್ಕೆ ಹೋಗದೇ ಮನೆಯಲ್ಲಿರುವ ಶೌಚಾಲಯವನ್ನು ಉಪಯೋಗಿಸಿ ಸ್ವಚ್ಛತೆಯೊಂದಿಗೆ ಆರೋಗ್ಯವನ್ನು ಕೂಡ...

ಚೊಕ್ಕಾಡಿ : ರಸ್ತೆಗೆ ಉರುಳಿಬಿದ್ದ ಮರ

ಸುಳ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಹಲವು ಕಡೆಗಳಲ್ಲಿ ಹಾನಿಯಾಗಿದ್ದು, ಅಲ್ಲಲ್ಲಿ ಮರಗಳು ಉರುಳಿ ಬಿದ್ದಿವೆ. ಚೊಕ್ಕಾಡಿ ಶೇಣಿ ಮುಖ್ಯ ರಸ್ತೆಯಲ್ಲಿ ಮರವೊಂದು ಅಡ್ಡಲಾಗಿ ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ ಲಘು ವಾಹನ ಸಂಚರಿಸುವಷ್ಟು ಮರವನ್ನು ತೆರವುಗೊಳಿಸಲಾಗಿದ್ದು, ಸಂಪೂರ್ಣ ಮರ ತೆರವುಗೊಳಿಸಬೇಕಾಗಿದೆ.

ಪಂಜ : ಗಾಳಿ-ಮಳೆಗೆ ರಸ್ತೆಗೆ ಉರುಳಿದ ಮರ

ಗಾಳಿಕೂಪು ಬಸ್ ನಿಲ್ದಾಣಕ್ಕೆ ಹಾನಿ..!

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪಂಜ ಸಮೀಪದ ಗಾಳಿಕೂಪು ಬಸ್ ನಿಲ್ದಾಣದ ಬಳಿಯಲ್ಲಿರುವ ಮರವೊಂದು ರಸ್ತೆಗೆ ಉರುಳಿಬಿದ್ದು ಬಸ್ ನಿಲ್ದಾಣ ಹಾನಿಗೊಂಡಿದ್ದು, ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು, ಮರ ತೆರವುಗೊಳಿಸಬೇಕಾಗಿದೆ.

ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಧನಂಜಯ ಬಾಳುಗೋಡು ನಿಧನ

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಯೋಧ ಇನ್ನಿಲ್ಲ

ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ಧನಂಜಯ ಬಾಳುಗೋಡು ರವರು ಅಲ್ಪಕಾಲದ ಅಸೌಖ್ಯದಿಂದ ಜು.02 ರಂದು ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.ಭಾರತೀಯ ಭೂಸೇನೆಯಲ್ಲಿ ಸುಮಾರು 18 ವರ್ಷಗಳ ಕಾಲ ಸೇವೆಗೈದು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ್ದ ಇವರು ಪ್ರಸ್ತುತ ಮಂಗಳೂರಿನ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದರು.ಮೃತರು ಪತ್ನಿ ನಿವೃತ್ತ ಸಿ.ಆರ್.ಪಿ.ಎಫ್ ಉದ್ಯೋಗಿ ಯಶೋಧ, ಪುತ್ರರಾದ ಸೃಜನ್, ಹಾರ್ದಿಕ್,...

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಾಲೇಜು ಮಂತ್ರಿಮಂಡಲದ ಉದ್ಘಾಟನಾ ಕಾರ್ಯಕ್ರಮವು ನೇರವೇರಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ನೆಹರೂ ಮೆಮೊರಿಯಲ್ ಕಾಲೇಜು ಸುಳ್ಯ ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ.ಕೆ ಇವರು ದೀಪ ಬೆಳಗಿಸುವ ಮೂಲಕ ಮಂತ್ರಿ ಮಂಡಲದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ "ಚುನಾವಣೆಗಳಿಂದ ದೇಶದ ಅಭಿವೃದ್ಧಿ ಸಾಧ್ಯ. ವಿದ್ಯಾರ್ಥಿಗಳು ಚುನಾವಣೆಗಳ...

ಕುಕ್ಕೆ ಸುಬ್ರಹ್ಮಣ್ಯದ ಪ್ರಾಥಮಿಕ ವೈದ್ಯಕೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಸಚಿವರಿಗೆ ಮನವಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರಿಗೆ ವರ್ಗಾವಣೆ

ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಅವರು ವರ್ಗಾವಣೆಗೊಂಡಿದ್ದು, ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ. ಇವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸುಳ್ಯ-ಆಲೆಟ್ಟಿ-ಬಂದಡ್ಕ ಕಾಸರಗೋಡು, ಕಾಞಂಗಾಡ್  ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಚಿವರಿಗೆ ಮನವಿ – ಭರವಸೆ

ಕೇರಳ ರಾಜ್ಯ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಗಡಿಪ್ರದೇಶ ಬಂದಡ್ಕದ ಮೂಲಕ ಹಾದು ಹೋಗುವ ಅಂತರ್ ರಾಜ್ಯ ಬಸ್ ವ್ಯವಸ್ಥೆಯನ್ನು ಒದಗಿಸುವ ಕುರಿತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.                 ಗಡಿನಾಡು ಕನ್ನಡಿಗರ ಸಂಘದ ಅಧ್ಯಕ್ಷರಾದ ಪುರುಷೋತ್ತಮ ಬೊಡ್ಡನಕೊಚ್ಚಿ, ಗ್ರಾಮ ಗೌಡ ಸಮಿತಿಯ ಅಧ್ಯಕ್ಷರಾದ ವೆಂಕಟ್ರಮಣ ಕೊಯಿಂಗಾಜೆ, ಮಾಜಿ ಅದ್ಯಕ್ಷರಾದ ಅಚ್ಚುತ...
Loading posts...

All posts loaded

No more posts

error: Content is protected !!