ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ; “ವಿದ್ಯಾರ್ಥಿಗಳಿಂದಲೇ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ” : ಸದಾನಂದ ಮಾವಾಜಿ

ಸುಬ್ರಹ್ಮಣ್ಯ ಸೆಪ್ಟಂಬರ್ 16 : "ಕರ್ನಾಟಕ ರಾಜ್ಯ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಳೆದ ಐದು ವರ್ಷಗಳಿಂದ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಅವರಿಗೆ ವಾರ್ತೆ...

ಸುಶ್ಮಿತಾ ಬೆದ್ರುಪಣೆ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ – ಸನ್ಮಾನ

ಭಾರತೀಯ ಗಡಿಭದ್ರತಾ ಪಡೆಗೆ ಆಯ್ಕೆಯಾದ  ಅರಂತೋಡು ಗ್ರಾಮದ ಬೆದ್ರುಪಣೆ ನಿವಾಸಿ  ಕು.ಸುಶ್ಮಿತಾ ಮೇಲಡ್ತಲೆ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿಗ್ರಾಮ ಪಂಚಾಯತಿ ಅಧ್ಯಕ್ಷರಾದ ಕೇಶವ ಅಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಅರಂತೋಡು ಸೊಸೈಟಿಯ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಸತೀಶ್ ನಾಯ್ಕ ಅರಂತೋಡು, ಮಾಜಿ...
Ad Widget

ಸುಳ್ಯ : ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಅರಿವು ಜಾಗೃತಿ ಕಾರ್ಯಕ್ರಮ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯದಲ್ಲಿ ಜೇಸಿಐ ಸುಳ್ಯ ಸಿಟಿ ಇವರ ಜೇಸಿ ಸಪ್ತಾಹ -2025 'ಚೈತನ್ಯತೆಯ ಚಿಗುರು' ಇದರ ಅಂಗವಾಗಿ "ಕಾನೂನು ಅರಿವು ಜಾಗೃತಿ" ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸೆ13 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸತೀಶ್ ಎನ್.ಪಿ ಇವರು ವಹಿಸಿಕೊಂಡಿದ್ದರು.  ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ  ಹರಿ ಕುಕ್ಕುಡೇಲು ಯುವ...

ಮುಳ್ಳುಬಾಗಿಲು : ಸಂಗಮ ನವೋದಯ ಸ್ವ-ಸಹಾಯ ಸಂಘದ ವಾರ್ಷಿಕ ಮಹಾಸಭೆ

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಸಂಗಮ ನವೋದಯ ಸ್ವ-ಸಹಾಯ ಸಂಘದ 22ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಸೆ.15 ರಂದು ಸಂಘದ ಸದಸ್ಯರಾದ ಉಮೇಶ್ ಬಟ್ಟೋಡಿ ಅವರ ಮನೆಯಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ.ಕೆ ಹಾಗೂ ಕಾರ್ಯದರ್ಶಿಯಾಗಿ ವೆಂಕಟ್ರಮಣ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ನಿಕಟಪೂರ್ವ ಅಧ್ಯಕ್ಷರಾದ ಜಯಪ್ರಕಾಶ್ ಕಜ್ಜೋಡಿ ರವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ನಿಕಟಪೂರ್ವ...

ಶೇಣಿ : ಮನೆಯ ಅಂಗಳಕ್ಕೆ ಮಗುಚಿ ಬಿದ್ದ ರಿಕ್ಷಾ

ಶೇಣಿ-ಕುಳ್ಳಾಜೆ ರಸ್ತೆಯ ವೆಂಕಟ್ರಮಣ ಭಟ್ ಎಂಬುವವರ ಮನೆಯ ಅಂಗಳಕ್ಕೆ ರಿಕ್ಷಾ ಒಂದು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ರಿಕ್ಷಾದೊಳಗಿದ್ದ ಭಾಸ್ಕರ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ “ಮಹಿಳಾ ಸಬಲೀಕರಣ ಅರಿವು” ಕಾರ್ಯಕ್ರಮ

ಮಿಷನ್ ಶಕ್ತಿ ಯೋಜನೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ, ಮಂಗಳೂರು ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ “ಮಹಿಳಾ ಸಬಲೀಕರಣ ಅರಿವು” ಕಾರ್ಯಕ್ರಮವು ಸುಳ್ಯದ ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ...

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ – ವಾರ್ಷಿಕ 453 ಕೋಟಿ ರೂ. ವ್ಯವಹಾರ ; 1.56 ಕೋಟಿ ರೂ. ಲಾಭಾಂಶ – ಶೇ.15.5 ಡಿವಿಡೆಂಡ್ ವಿತರಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಕೊಲ್ಲಮೊಗ್ರದ ಶ್ರೀ ಮಯೂರ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರುಗಳಾದ ಡ್ಯಾನಿ ಯಳದಾಳು, ರೇಗನ್ ಶೆಟ್ಟಿಯಡ್ಕ, ಶೇಷಪ್ಪ ಗೌಡ ಕಿರಿಭಾಗ, ಹಿಮ್ಮತ್ ಕಿರಿಭಾಗ, ಕಮಲಾಕ್ಷ...

ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಕು.ಸುಶ್ಮಿತಾ ಅವರಿಗೆ ಅಭಿನಂದನೆ

ಅಂಬೇಡ್ಕರ್ ರಕ್ಷಣಾ ವೇದಿಕೆ ಅರಂತೋಡು ಘಟಕದ ವತಿಯಿಂದ ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು. ಸುಶ್ಮಿತಾ ಬೆದ್ರುಪಣೆ ಅವರಿಗೆ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಅರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ ಶಾಲು ಹೊದಿಸಿ ಹಣ್ಣು ಹಂಪಲು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು, ವೇದಿಕೆಯ ಪ್ರ.ಕಾರ್ಯದರ್ಶಿ. ತಾ.ಕಾರ್ಯದರ್ಶಿ, ತಾಲೂಕು ಮಾಜಿ ಕಾರ್ಯದರ್ಶಿಯವರು ಉಪಸ್ಥಿತರಿದ್ದರು....

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ – ವಾರ್ಷಿಕ 118 ಕೋಟಿ ರೂ. ವ್ಯವಹಾರ ; 40,02,524 ರೂ. ಲಾಭಾಂಶ – ಶೇ.09 ಡಿವಿಡೆಂಡ್ ವಿತರಣೆ

ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.14 ರಂದು ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹೆಚ್.ಎಲ್ ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶ್.ಕೆ.ಎಸ್ ರವರು ವಾರ್ಷಿಕ ವರದಿ ವಾಚಿಸುತ್ತಾ “ಸಂಘವು ವಾರ್ಷಿಕ 118 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, 40,02,524 ರೂಪಾಯಿ...

ಫ್ರೆಂಡ್ಸ್ ಸಮಾಹಾದಿ ಆಶ್ರಯದಲ್ಲಿ ನಡೆಯಲಿರುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಬಿಡುಗಡೆ

ಫ್ರೆಂಡ್ಸ್ ಸಮಾಹಾದಿ ಮುರುಳ್ಯ ಇದರ ಆಶ್ರಯದಲ್ಲಿ ಸೆ.21ರಂದು ನಡೆಯುವ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ಶಾಸಕಿ ಕುಮಾರಿ  ಭಾಗೀರಥಿ ಮುರುಳ್ಯ ಅವರಿಗೆ ನೀಡುವ ಮೂಲಕ  ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಫ್ರೆಂಡ್ಸ್ ಸಮಾಹಾದಿ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!