- Wednesday
- September 16th, 2026
ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು, ಸದಸ್ಯರಾದ ಪೃಥ್ವಿಚಂದ್ರ ಮುಂಡಾಜೆ, ಬಿಂದು.ಪಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಕಟ್ಟ ಧ್ವಜಾರೋಹಣವನ್ನು ನೆರವೇರಿಸಿದರು, ಬಂಗ್ಲೆಗುಡ್ಡೆ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ನಾಯಕ ಗುರುಕಿರಣ್ ಹಾಗೂ ವಿದ್ಯಾರ್ಥಿಗಳು ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಾಧವ ಚಾಂತಾಳ, ಸದಸ್ಯರಾದ ಅಶ್ವಥ್ ಯಳದಾಳು, ಜಯಶ್ರೀ ಚಾಂತಾಳ, ಬಾಲಸುಬ್ರಹ್ಮಣ್ಯ...
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವೈದ್ಯಾಧಿಕಾರಿಗಳಾದ ಡಾ| ಕುಲದೀಪ್.ಎಂ.ಡಿ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ(ಬಿ.ಎಂ.ಎಸ್ ಸಂಯೋಜಿತ) ವತಿಯಿಂದ ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ವನ್ನು ಮಾಜಿ ಸೈನಿಕ ಚಾರ್ಲ್ಸ್ ಹೆರಾಲ್ಡ್ ಡಿಸೋಜಾ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಸಂಘದ ಮಾಜಿ ಅಧ್ಯಕ್ಷರಾದ ಪಿ ಗೋಪಾಲಕೃಷ್ಣ ಭಟ್ ಪೈಚಾರ್, ರಾಧಾಕೃಷ್ಣ ಬೈತಡ್ಕ, ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್ ಈ ಸಂದರ್ಭದಲ್ಲಿ ಮಾತಾಡಿದರು. ಸಿಂಧೂರ ವಿಜಯದ...
ಗುತ್ತಿಗಾರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರಾ ಮೂಕಮಲೆ ನೆರವೇರಿಸಿ ಶುಭಹಾರೈಸಿದರು. ಗ್ರಾ.ಪಂ.ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ವೆಂಕಟ್ ವಳಲಂಬೆ ಮಾತನಾಡಿ "ನಮ್ಮ ಕರ್ತವ್ಯ ಮತ್ತು ಹಕ್ಕುಗಳು ಹಾಗೂ ಪ್ರಸ್ತುತ ದೇಶದ ಸ್ಥಿತಿಗತಿಗಳ ಬಗ್ಗೆ ಹಾಗೂ ಹೆಚ್ಚೆಚ್ಚು ದೇಶ ಪ್ರೇಮ ಬೆಳೆಸಿಕೊಳ್ಳಬೇಕು" ಎಂದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಭಾರತೀ...
ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯು ಅತ್ಯಂತ ವಿಜ್ರಂಭಣೆಯಿಂದ ನಡೆಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ಧನಂಜಯ ಅಡ್ಪಂಗಾಯ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸ್ವಾತಂತ್ರಕ್ಕೋಸ್ಕರ ಹೋರಾಡಿದ ನಾಯಕರುಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ "ವಿದ್ಯಾರ್ಥಿಗಳು ಮುಂದೆ ಬಲಿಷ್ಠ...
ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರವಿರಾಜ್ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಸಂಘದ ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ಡ್ಯಾನಿ ಯಳದಾಳು, ಮಹಾಲಿಂಗ ನಾಯ್ಕ ಶಿರೂರು, ರೇಗನ್ ಶೆಟ್ಟಿಯಡ್ಕ, ಮೇನಕಾ ಕೊಪ್ಪಡ್ಕ, ವೇದಾವತಿ ಮುಳ್ಳುಬಾಗಿಲು,...
ಮಂಗಳೂರು ವೃತ್ತ ಸುಬ್ರಹ್ಮಣ್ಯ ಉಪವಿಭಾಗ ಪಂಜ ವಲಯ ಅರಣ್ಯ ಕಛೇರಿಯಲ್ಲಿ ಆ.15 ರಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಉಪ ವಲಯ ಅಧಿಕಾರಿಗಳು, ಗಸ್ತು ವನ ಪಾಲಕರು, ಅರಣ್ಯ ವೀಕ್ಷಕರು, ಕಛೇರಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಸುಳ್ಯದ ಮಿಲಿಟರಿ ಗ್ರೌಂಡ್ ನಲ್ಲಿ 79ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಭಾರತೀಯ ಸೇನೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಮಾಜಿ ಸೈನಿಕ ಭವಾನಿಶಂಕರ್ ಕೋಲ್ಚಾರ್ ಇವರು ಧ್ವಜರೋಹಣವನ್ನು ನೆರವೇರಿಸಿ "ಯುವ ಜನಾಂಗದವರು ದೇಶದ ರಕ್ಷಣಾ ಪಡೆಗಳಲ್ಲಿ ಸೈನಿಕರಾಗಿ ಸೇವೆ ಸಲ್ಲಿಸುವಲ್ಲಿ ಹೆಚ್ಚಿನ ಆಸಕ್ತಿ ನೀಡಬೇಕಾಗಿ" ಯುವಕರಿಗೆ ಸ್ಫೂರ್ತಿದಾಯಕ ಮಾತುಗಳಾಡಿ ಶುಭ ಹಾರೈಸಿದರು.ಮಿಲಿಟರಿ...
Loading posts...
All posts loaded
No more posts
