- Sunday
- March 8th, 2026
ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ ಜ.26 ರಂದು ನಡೆಯಿತು. ಧ್ವಜಾರೋಹಣವನ್ನು ನಿವೃತ ಸಿ.ಆರ್.ಪಿ.ಎಫ್ ಯೋಧರಾದ ವಿದ್ಯಾಧರ.ಎನ್ ಪಟ್ಟೆ ಇವರು ನೆರವೇರಿಸಿ ಗಣರಾಜ್ಯೋತ್ಸವ ಸಂದೇಶವನ್ನು ನೀಡಿದರು. ವೇದಿಕೆಯಲ್ಲಿ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ ಶಾಲಾ ಉಪಾಧ್ಯಕ್ಷರಾದ ಪ್ರವೀಣ್ ಜಯನಗರ ಉಪಸ್ಥಿತರಿದ್ದು, ಸಂದರ್ಭೋಚಿತವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಸ್ಕೌಟ್ಸ್ ತಂಡ ರಾಜ್ಯಮಟ್ಟದ...
ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಪುತ್ತೂರು, ಮೂಡಬಿದ್ರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ “ರಿಪಬ್ಲಿಕ್ ಸೇಲ್” ಜನವರಿ 22ರಿಂದ 26ರವರೆಗೆ ಆಯೋಜಿಸಲಾಗಿದ್ದು, ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯು ಭಾರೀ ಏರಿಕೆ ಕಂಡಿದ್ದು ಜಿ.ಎಲ್ ರಿಪಬ್ಲಿಕ್ ಸೇಲ್‌ನಿಂದಾಗಿ ಮೇಕಿಂಗ್ ಚಾರ್ಜಸ್‌ನ ಮೇಲೆ ವಿಶೇಷ ರಿಯಾಯಿತಿ ದರವು...
ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೂತನ ಶಾಖೆಯು ಬೆಳ್ಳಾರೆಯ ಮುಖ್ಯರಸ್ತೆಯ ಅಮ್ಮು ರೈ ಕಾಂಪ್ಲೆಕ್ಸ್ ನಲ್ಲಿ ಜ 26 ರಂದು ಉದ್ಘಾಟನೆಗೊಂಡಿತು.ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು.ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಶುಭ ಹಾರೈಸಿದರು.ಉದ್ಘಾಟನಾ ಸಮಾರಂಭದಲ್ಲಿ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಎಂಬಲ್ಲಿ ಜ.27ರಂದು ಪುರುಷ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು.ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಶ್ರೀ ದೈವದ ಗಂಧ-ಪ್ರಸಾದ ಸ್ವೀಕರಿಸಿದರು. ನಂತರ ಅನ್ನಸಂತರ್ಪಣೆ ನಡೆಯಿತು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.24ರಿಂದ ಫೆ.09 ರವರೆಗೆ ವರ್ಷಾವಧಿ ಜಾತ್ರೋತ್ಸವ ನಡೆಯುತ್ತಿದ್ದು, ಜ.24ರಂದು ಗೊನೆ ಮುಹೂರ್ತ ನೆರವೇರಿತು.ಫೆ.01ರಂದು ಪೂರ್ವಾಹ್ನ 9:00 ರಿಂದ ವೇದ ಪಾರಾಯಣ ಆರಂಭ, ಮದ್ಯಾಹ್ನ 12:30ಕ್ಕೆ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆದು ಸಂಜೆ 6:00 ಗಂಟೆಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ಸಂಜೆ 7:00 ಗಂಟೆಗೆ ಧ್ವಜಾರೋಹಣ, ಮಹಾಪೂಜೆ...
ಸುಳ್ಯ ಗಾಂಧಿನಗರ ತರ್ಬಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಮತ್ತು ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ವತಿಯಿಂದ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಮುಹಿಯ್ಯದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಕೆಎಂಎಸ್ ಮಹಮ್ಮದ್ ಧ್ವಜಾರೋಹಣ ಗೈದರು.ಗಾಂಧಿನಗರ ಮದ್ರಸ ಮುಖ್ಯ ಶಿಕ್ಷಕರಾದ ಸಿರಾಜುದ್ದೀನ್ ಸಖಾಫಿ ಉದ್ಘಾಟನೆ ಮಾಡಿ ಮಾತನಾಡಿ "ಮಾನವೀಯತೆಯ ಗುಣಗಳು ಜೀವನದಲ್ಲಿ ಅಳವಡಿಸಿ...
ಬೆಳ್ಳಾರೆ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮವು ಫೆ.01ರಂದು ಜರುಗಲಿದ್ದು, ಇದರ ಪೂರ್ವಭಾವಿ ಸಭೆಯು ಜ.25 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಬೆಳ್ಳಾರೆ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಈ ಮಂಡಲದ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಲಾಯಿತು. ಹಿಂದೂ ಸಮಾಜದ ಪ್ರಮುಖರಿಗೆ, ಸಮಾಜಕ್ಕೆ ಸೇವಾ ಮನೋಭಾವದಲ್ಲಿ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲು...
ವೆಸ್ಟ್ ಬೆಂಗಾಲ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಜಾಲ್ಲೂರು ಗ್ರಾಮದ ಅಡ್ಕಾರು ಶರತ್ ಅಡ್ಕಾರ್ ಹಾಗೂ ಶೋಭಾ ದಂಪತಿಗಳ ಪುತ್ರಿ ಕು.ಸೋನಾ ಅಡ್ಕಾರು ಜ.26ರಂದು ಸಂಜೆ ಸುಳ್ಯಕ್ಕೆ ಆಗಮಿಸಿದ ಸಂದರ್ಭ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಅವರನ್ನು ಸುಳ್ಯ ಗೌಡರ ಯುವ ಸೇವಾ ಸಂಘ, ನಗರ ಘಟಕ, ಮಹಿಳಾ...
ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮಂಗಳೂರು ಮಹಾನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಭಿಷೇಕ ಮಂದಿರದ ಸಭಾಂಗಣದಲ್ಲಿ ಸಾಹಿತ್ಯ ವೈಭವ-2026 ಜ 25 ರಂದು ಜರುಗಿತು.ಈ ಸಮಾರಂಭದಲ್ಲಿ ಹಿರಿಯ ಕವಿ ಎನ್.ಸುಬ್ರಾಯ ಭಟ್ ಅಧ್ಯಕ್ಷತೆಯಲ್ಲಿ ಕನ್ನಡ ಕವಿಗೋಷ್ಠಿ ಹಾಗೂ ಕವಿಯತ್ರಿ ಮತ್ತು ಸಂಘಟಕಿ ಗೀತಾ ಲಕ್ಷ್ಮೀಶ್ ಅಧ್ಯಕ್ಷತೆಯಲ್ಲಿತುಳು ಕವಿಗೋಷ್ಠಿ ನಡೆಯಿತು.ಕನ್ನಡ ಕವಿಗೋಷ್ಠಿಯಲ್ಲಿ ಯುವಕವಿ...
ಸುಬ್ರಹ್ಮಣ್ಯ ಜನವರಿ 26 :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಭಾನುವಾರ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಜಾನೆ 4:30ಕ್ಕೆ ವೆಂಕಟೇಶ ತಂಡದವರೊಂದಿಗೆ ಆರಂಭವಾದ ಭಜನೆ ಕಾರ್ಯಕ್ರಮ ಮೂರು...
Loading posts...
All posts loaded
No more posts
