- Monday
- June 8th, 2026
ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜು ಹಳೆವಿದ್ಯಾರ್ಥಿ ಸಂಘದಿಂದ ಕಾಲೇಜಿಗೆ 65 ಸಾವಿರ ಮೌಲ್ಯದ ಮೈಕ್ ಸೆಟ್ ನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಂ ವೆಂಕಪ್ಪ ಗೌಡ ಕಾಲೇಜು ಪ್ರಾಂಶುಪಾಲರಾದ ಗೋವಿಂದ ಎಸ್ ಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಪಿ ಜಿ ಎಸ್ ಏನ್ ಪ್ರಸಾದ್ ,...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯ ಇದರ ವತಿಯಿಂದ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮವು ಇಂದು ಬೆಳಗ್ಗೆ 9.45 ಕ್ಕೆ ಸರಿಯಾಗಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಹರಿಕೃಷ್ಣ ಇವರು ಬೌದ್ಧಿಕ್ ನೆರವೇರಿಸಿದರು. ಅಧ್ಯಕ್ಷರಾಗಿ ಸೋಮಶೇಖರ್ ನಾಯಕ್ ಮತ್ತು ನಗರ ಕಾರ್ಯದರ್ಶಿ ಇಲೈ ಅರಸ್ ನವರು ಉಪಸ್ಥಿತರಿದ್ದರು....
ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಬಿ.ಎ ಬಳಗದ ಹಿರಿಯ ವಿದ್ಯಾರ್ಥಿವೃಂದದ 5ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಡಿ.26 ರಂದು ಕೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.ಮಧ್ಯಾಹ್ನದ ಭೋಜನದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬಿ.ಎ...
ಶ್ರೀ ಶಾರದಾ ಮಹಿಳಾ ಕಾಲೇಜಿನಿನಲ್ಲಿ ನ. 26 ರಂದು ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2021-22ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ನ.24 ರಂದು ಉದ್ಘಾಟನೆಗೊಂಡಿತು. ಈ ವಿದ್ಯಾರ್ಥಿ ಪರಿಷತ್ ನ್ನು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಉದ್ಘಾಟಿಸಿ, ಆರೋಗ್ಯವಂತ ಶಿಕ್ಷಣ ಹಾಗೂ ಸತತ ಪ್ರಯತ್ನಗಳಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಚೆನ್ನಮ್ಮ.ಪಿ ಇವರು ರಾಷ್ಟ್ರಪತಿ...
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ – ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಪೆರುವಾಜೆಯ ಉಮೇಶ್ ಕೆ. ಎಂ. ಬಿ ಮತ್ತು ಉಪಾಧ್ಯಕ್ಷೆಯಾಗಿ ಶ್ರೀಮತಿ ಜ್ಞಾನೇಶ್ವರಿಯವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸಂಸ್ಥೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಮತ್ತು ಪೋಷಕರು ಶಿಕ್ಷಕ- ರಕ್ಷಕ ಸಂಘದ...
ಜೇಸಿಐ ಪಂಜ ಪಂಚಶ್ರೀ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂತ್ಕುಂಜ ಇದರ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನ.17ರಂದು ಕೂತ್ಕುಂಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವೊಂದು ಸ್ಪರ್ಧೆಗಳನ್ನು ಏರ್ಪಡಿಸಿದ್ದು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಪಂಜ...
ಪೂದೆ ಶ್ರೀ ವಿಷ್ಣು ಮಹಾಗಣಪತಿ ದೇವಸ್ಥಾನ ಮುರುಳ್ಯ ಇಲ್ಲಿ ಇಂದು ನಡೆದ ನಿಧಿ ಕುಂಭ ಶಢಾದರ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದ ವಿದ್ಯಾರ್ಥಿಗಳು ಕುಣಿತ ಭಜನೆ ಸೇವೆ ನಡೆಸಿಕೊಟ್ಟರು. ತಂಡವನ್ನು ಶಿಕ್ಷಕ ಶಿವಪ್ರಸಾದ್.ಜಿ ಹಾಗೂ ಭಜನಾ ತರಬೇತುದಾರ ಸದಾನಂದ ಆಚಾರ್ಯ ಕಾಣಿಯೂರು ಇವರು ನಿರ್ದೇಶಿಸಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಸುಬ್ಬಯ್ಯ.ವೈ.ಬಿ,...
ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...
ಕಳೆದ ಆಗಸ್ಟ್ 22 ರಂದು ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿಪೇಪರ್ 1 ಹಾಗೂ ಪೇಪರ್ 2 ಎರಡರಲ್ಲೂ ಪ್ರಥಮ ಪ್ರಯತ್ನದಲ್ಲಿ ಅರ್ಹತೆಯನ್ನು ಪಡೆದಿದ್ದಾರೆ. ಇವರು ಮರ್ಕಂಜ ಗ್ರಾಮದ ಮುಂಡೋಡಿ ಜನಾರ್ಧನ ಹಾಗೂ ಸರಸ್ವತಿ ದಂಪತಿಗಳ ಪುತ್ರಿ. ಪ್ರಸ್ತುತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Loading posts...
All posts loaded
No more posts
