- Tuesday
- March 10th, 2026
ಮಂಡೆಕೋಲು ಗ್ರಾಮದ ಬೊಳುಗಲ್ಲು ಹರೀಶ್ಚಂದ್ರ ರವರು ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ್ದು ಊರವರು ಅದ್ದೂರಿ ಮೆರವಣಿಗೆಯಲ್ಲಿ ಕರೆದೊಯ್ದು ಹಾರಾರ್ಪಣೆ ಮಾಡಿ ಸ್ವಾಗತಿಸಿದರು.ಗ್ರಾಮ ಪಂಚಾಯತ್, ಸಹಕಾರಿ ಸಂಘ ಹಾಗೂ ಊರವರು ಮಾಲಾರ್ಪಣೆಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಉಪಾಧ್ಯಕ್ಷೆ ಪ್ರತಿಮಾ,...
ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಅರಂತೋಡು ಗ್ರಾಮದ ಉಳುವಾರು ಮನೆಯ ಶರತ್.ಯು.ಪಿ ರವರ ಪತ್ನಿ ಶ್ರೀಮತಿ ಸಂಧ್ಯಾ ಶರತ್ ರವರು ತೇರ್ಗಡೆ ಹೊಂದಿದ್ದಾರೆ.ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡು ಇಲ್ಲಿ ಅತಿಥಿ ಶಿಕ್ಷಕರಾಗಿ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸುಳ್ಯದ ಜೂನಿಯರ್ ಕಾಲೇಜ್ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ನಲ್ಲಿ ಆರಂಭಗೊಂಡಿರುವ ನ್ಯೂ ಚೆನ್ನೈ ಶಾಪಿಂಗ್ ನಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷ ಹಾಗೂ ಸುಳ್ಯ ಜಾತ್ರೋತ್ಸವದ ಪ್ರಯಕ್ತ ವಿಶೇಷ ರಿಯಾಯಿತಿ ಮಾರಾಟ ನಡೆಯುತ್ತಿದೆ. ಕೇವಲ ರೂ. 149 ಕ್ಕೆ ಮಕ್ಕಳು, ಮಹಿಳೆಯರು ಮತ್ತು ಪುರುಷರ ಬಟ್ಟೆ ಖರೀದಿಸಬಹುದು.ಇಲ್ಲಿ ಲಾಂಗ್ ಟಾಪ್ಸ್, ವೆಸ್ಟರ್ನ್ ಟಾಪ್ಸ್, ಟಿ-ಶರ್ಟ್, ದುಪ್ಪಟಗಳು,...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಜ.03ರಂದು ಶ್ರೀ ದೇವರಲ್ಲಿ ಪ್ರಾರ್ಥಿಸುವುದರೊಂದಿಗೆ ನಡೆಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಗೌಡ ಬಿಳಿಮಲೆ, ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್...
ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಟ್ಟಡ ಮೇಲಂತಸ್ತಿನಲ್ಲಿ ಮಹಾ ಲಾಭ ಮೇಳ ಜ.4 ರಿಂದ ಆರಂಭವಾಗಲಿದೆ. ಒಂದೇ ಸೂರಿನಡಿ ಬ್ರಾಂಡೆಡ್ ಉತ್ಪನ್ನಗಳು ಆನ್ ಲೈನ್ ದರಕ್ಕಿಂತಲೂ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ. ಸ್ಟೀಲ್ ಐಟಂಗಳು, ಪ್ಲಾಸ್ಟಿಕ್ ಐಟಂ, ಬಟ್ಟೆಬರೆಗಳು, ಚಪ್ಪಲಿ, ಡೆಕೋರೇಶನ್ ಐಟಂ, ಹೂವಿನ ಕುಂಡಗಳು, ದಿನನಿತ್ಯ ಉಪಯೋಗಿಸುವ ವಸ್ತುಗಳು ಸೇರಿದಂತೆ ವಿವಿಧ...
ಅಜ್ಜಾವರ ಗ್ರಾಮದ ಪಡ್ಡಂಬೈಲ್ ಕುಟುಂಬಸ್ಥರ ನೇತೃತ್ವದಲ್ಲಿ ಫೆಬ್ರವರಿ 15 ಮತ್ತು 22 ರಂದು ಗೌಡ ಸಮುದಾಯ ಭವನ ಕೊಡಿಯಾಲಬೈಲು ಸುಳ್ಯ ಇದರ ಕ್ರೀಡಾಂಗಣದಲ್ಲಿ 32 ತಂಡಗಳ ಗೌಡ ಕುಟುಂಬಗಳ ಓವರ್ ಆರ್ಮ್ ಕ್ರಿಕೆಟನ್ನು ನಡೆಯಲಿದೆ. ಪ್ರಥಮ ಬಹುಮಾನವಾಗಿ ರೂ. 30,000 ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ ರೂ. 20,000 ನಗದು ಮತ್ತು ಆಕರ್ಷಕ...
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಮೈಸೂರು ಸಾಂಸ್ಕೃತಿಕ ಉಪ ಸಮಿತಿ ಇದರ ವತಿಯಿಂದ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 22 ರಿಂದ ಜನವರಿ 26(ಗಣ ರಾಜ್ಯೋತ್ಸವ ದಿನಾಚರಣೆ) ವರೆಗೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಂಡ ಭಾರತೀಯ ಸಂವಿಧಾನ ಪೀಠಿಕೆ ಗಾಯನ ಅಭಿಯಾನದ ಪರ್ಯಟನೆ ಮಾಲಿಕೆಯನ್ನು ಸುಳ್ಯ ಗ್ರೀನ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಯಿತು.ನ್ಯಾಯಾಂಗ...
ಬೆಳ್ಳಾರೆ ಗ್ರಾಮದ ಗೌರಿಹೊಳೆಯ ಹತ್ತಿರ ಹಿಂದೂ ರುದ್ರಭೂಮಿ ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಜ.5 ರಂದು ಬೆಳಿಗ್ಗೆ 9:30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ್ ಇವರಿಂದ ಶಿವಪೂಜೆ ಮತ್ತು ಧಾರ್ಮಿಕ ವಿಧಿ ವಿಧಾನದ ಮೂಲಕ ರುದ್ರಭೂಮಿ ಲೋಕಾರ್ಪಣೆಗೊಳ್ಳಲಿದ್ದು, ಈ ಪುಣ್ಯ ಕಾರ್ಯದಲ್ಲಿ ಊರಿನವರು, ಸಂಘ-ಸಂಸ್ಥೆಯವರು,...
ಜಾಲ್ಸೂರು ಗ್ರಾಮದ ಹುಲಿಮನೆಯವರಾದ ವೆಂಕಟ್ರಮಣ ಗೌಡರು ಬೇಂಗಮಲೆಯಲ್ಲಿ ನೆಲೆಸಿದ್ದರು. ಅಲ್ಪಕಾಲದ ಅಸೌಖ್ಯದಿಂದ ಜ.1 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 89 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ , ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
Loading posts...
All posts loaded
No more posts
