ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಅಣ್ಣಾಮಲೈರವರೊಂದಿಗೆ ವಿದ್ಯಾರ್ಥಿಗಳಿಂದ ಸಂವಾದ

ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ ಯುವಸಂವಾದ ಕಾರ್ಯಕ್ರಮದಲ್ಲಿ ತಮಿಳುನಾಡು ಬಿ.ಜೆ.ಪಿ. ಅಧ್ಯಕ್ಷ ಹಾಗೂ ಐ.ಪಿ.ಎಸ್. ಅಧಿಕಾರಿಯಾಗಿದ್ದ ಅಣ್ಣಾಮಲೈಯವರು ಭಾಗವಹಿಸಿದ್ದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಶೇಷ ಉಪನ್ಯಾಸ ನೀಡಿದ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ,ಬ್ರಿಜೇಶ್ ಚೌಟ, ನೀಲಾಂಬಿಕೆ ನಟರಾಜನ್ ಉಪಸ್ಥಿತರಿದ್ದರು.

ಮಾ.28-30; ಕಲ್ಲುಗುಂಡಿ ಶ್ರೀಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ

ಸಂಪಾಜೆ ಕಲ್ಲುಗುಂಡಿಯ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಮತ್ತು ಪಂಜುರ್ಲಿ ಮತ್ತು ಕಲ್ಲುರ್ಟಿ ಹಾಗೂ ಗುಳಿಗ ದೈವಗಳ ಸಮ್ಮಾನ ಮಾ.28ರಿಂದ 30ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಮಾ.28ರಂದು ಬೆಳಿಗ್ಗೆ ಗಣಹೋಮ,ರಾತ್ರಿ 7.30ಕ್ಕೆ ಭಂಡಾರ ಆಗಮಿಸಿ ಮೇಲೇರಿಗೆ ಅಗ್ನಿಸ್ಪರ್ಶ,ಕುಲ್ಚಾಟ ಹೊರಡುವುದು. ಮಾ.29ರಂದು ಬೆಳಿಗ್ಗೆ 6ಕ್ಕೆ ಅಗ್ನಿಪ್ರವೇಶ ಬಳಿಕ ಪ್ರಸಾದ ವಿತರಣೆ,ಮಾರಿಕಳ ಪ್ರವೇಶ,ನಂತರ ಸುರಿಗೆಗಳನ್ನು...
Ad Widget

ಮತ್ಸ್ಯ ವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆಗೊಳಿಸಿದ ಸಚಿವರಾದ ಎಸ್.ಅಂಗಾರ

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ "ಸ್ವಾವಲಂಬಿ ಬದುಕಿಗಾಗಿ ಸ್ವ-ಉದ್ಯೋಗ" ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯ ವಾಹಿನಿ ತ್ರಿಚಕ್ರ ವಾಹನಗಳನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಲೋಕಾರ್ಪಣೆಗೊಳಿಸಿದರು.ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್...

ಅರಂತೋಡು : ಫ್ಯಾನ್ಸಿ ಅಂಗಡಿಗೆ ಬೆಂಕಿ

ಸುಳ್ಯ ತಾಲೂಕಿನ ಅರಂತೋಡು ಮುಖ್ಯ ರಸ್ತೆಯಲ್ಲಿರುವ ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವನಿತಾ ಫ್ಯಾನ್ಸಿ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವರಿಸಲ್ಪಟ್ಟು ಅಂಗಡಿಯಲ್ಲಿದ್ದ ಬೆಲೆ ಬಾಳುವ ಫ್ಯಾನ್ಸಿ ಐಟಂಗಳು ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ. ಅಪಾರ ನಷ್ಟ ಸಂಭವಿಸಿದ್ದು, ಬೆಂಕಿಯನ್ನು ಸಾರ್ವಜನಿಕರ ಸಹಾಯದಿಂದ ನಂದಿಸಲಾಯಿತು.

ಮಣಿಮಜಲು : ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ – ಅನಾಹುತ ತಪ್ಪಿಸಿದ ಸ್ಥಳೀಯರು

ಕಳಂಜ ಗ್ರಾಮದ ಮಣಿಮಜಲು ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ಗುಡ್ಡಕ್ಕೆ ಬೆಂಕಿ ವ್ಯಾಪಿಸುವ ಸಂಭವ ಎದುರಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕಾರ್ಯ ಪ್ರವೃತ್ತರಾಗಿ ಬೆಂಕಿ ನಂದಿಸುವ ಮೂಲಕ ಮುಂದಾಗಬಹುದಾಗಿದ್ದ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗಾಂಧಿನಗರ ಎಸ್ ವೈ ಎಸ್ ಯುನಿಟ್ ವತಿಯಿಂದ ನಮಾಝಿನ ಖಮೀಸ್ ವಿತರಣೆ ಹಾಗೂ ಅಭಿನಂದನಾ ಸಮಾರಂಭ

ರಂಝಾನ್ ತಿಂಗಳ ಸಾಂತ್ವನದ ಭಾಗವಾಗಿ ಗಾಂಧಿನಗರ ಯುನಿಟ್ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಒಂದಾದ 20 ನಮಾಝ್ ಖಮೀಸ್ ವಿತರಣೆಯನ್ನು ದಿನಾಂಕ 24-03-2023 ನೇ ಶುಕ್ರವಾರ ಅಸರ್ ನಮಾಝಿನ ಬಳಿಕ ಸುನ್ನೀ ಸೆಂಟರ್ ನಲ್ಲಿ ನಡೆಯಿತು,ಯುನಿಟ್ ಉಪಾಧ್ಯಕ್ಷರಾದ ಸಯ್ಯಿದ್ ತ್ವಾಹಿರ್ ತಂಙಳ್ ಸಅದಿ ಸುಳ್ಯ ರವರ ದುವಾದೊಂದಿಗೆ ಆರಂಬಿಸಿ , ಸಯ್ಯಿದ್ ಝೈನುಲ್ ಆಬಿದ್ ತಂಙಳ್...

ಗೂನಡ್ಕ : ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಗೂನಡ್ಕ ಸಮೀಪ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಇಂದು ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ -ಮತ್ಸ್ಯ ಸಂಪದ ಯೋಜನೆಯಡಿ ಸ್ವ ಉದ್ಯೋಗಕ್ಕೆ ಅವಕಾಶ

ಕೇಂದ್ರ ಸರಕಾರದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 'ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ' ಎಂಬ ಕಲ್ಪನೆಯೊಂದಿಗೆ ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಮೈದಾನದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ...

ಅರಂತೋಡು ; ಅಮೃತ ಉದ್ಯಾನವನ, ಮುಕ್ತಿ ಧಾಮ ಹಾಗೂ ಸಭಾಂಗಣ ಉದ್ಘಾಟನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಸುಳ್ಯಅರಂತೋಡು ಗ್ರಾಮ ಪಂಚಾಯತ್ (ಅಮೃತ ಗ್ರಾಮ ಪಂಚಾಯತ್ ಹಾಗೂ ಗಾಂಧಿ ಗ್ರಾಮ ಪುರಸ್ಕೃತ) ಸಹಯೋಗದಲ್ಲಿ ಅರಂತೋಡು ಗ್ರಾ.ಪಂ. ವತಿಯಿಂದ ನಿರ್ಮಿಸಲಾದ ಅಮೃತ ಉದ್ಯಾನವನ, ಅಮೃತ ಮುಕ್ತಿ ಧಾಮ ಹಾಗೂ ಅಮೃತ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...

ಕನಕಮಜಲು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಸಚಿವ ಅಂಗಾರ ಭೇಟಿ

ಕನಕಮಜಲು - ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀವಿಷ್ಣುಮೂರ್ತಿ ದೈವಸ್ಥಾನದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಘಟಕರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!