ಪಂಜ: ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆ

ಪಂಜ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಆ.29ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್. ಹಾಗೂ ಕಾರ್ಯದರ್ಶಿ ಕೆ. ಪದ್ಮಯ್ಯ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದು, ಗ್ರಾಮ ಪಂಚಾಯತ್ ಆಡಳಿತ...

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸುಳ್ಯ ಇದರ ಸದಸ್ಯರುಗಳ ಮಕ್ಕಳು 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ 17.09.2020 ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಿದ್ದು, ಸಂಬಂಧಪಟ್ಟ ಸದಸ್ಯರುಗಳ ಮಕ್ಕಳು 10-09-2022 ರ ಮೊದಲು ಸಂಘದ ಪ್ರಧಾನ ಕಛೇರಿ ಅಥವಾ ನಿಮ್ಮ...
Ad Widget

ವಿನೋಬನಗರ: ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯ ಬಾಲಕಿಯರು ಜಿಲ್ಲಾಮಟ್ಟಕ್ಕೆ ಆಯ್ಕೆ

ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ವಿವೇಕಾನಂದ ಶಾಲಾ ದೈಹಿಕ ಶಿಕ್ಷಕಿ...

ತೆಕ್ಕಿಲ್ ಶಾಲೆಗೆ ಸುಳ್ಯ ತಾಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಪುಸ್ತಕ ದೇಣಿಗೆ.

ತೆಕ್ಕಿಲ್ ಶಾಲೆಗೆ ಸುಳ್ಯ ತಾಲ್ಲೂಕು ನಿವೃತ್ತ ನೌಕರರ ಸಂಘದ ವತಿಯಿಂದ ಉಚಿತ ಪುಸ್ತಕ ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಮತ್ತು ಕೊಡಗು ಜಿಲ್ಲೆಯ ನಿವೃತ್ತ ಆರೋಗ್ಯಾಧಿಕಾರಿ ಡಾ. ರಂಗಯ್ಯ ಹಾಗೂ ಸಂಘದ ಉಪಾಧ್ಯಕ್ಷ ಮತ್ತು ಅರಂತೋಡು ಎನ್ನೆಂಪಿಯಸಿಯ ನಿವೃತ್ತ ಉಪನ್ಯಾಸಕರು ಅಬ್ದುಲ್ ಮಾಸ್ತರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಹಾಗೂ ಎನ್ನೆಂಸಿ...

ಸುಳ್ಯ ಸೈಂಟ್ ಜೋಸೆಫ್ ಶಾಲೆ ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಂಪಾಜೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ...

ಐವರ್ನಾಡು ಜೂನಿಯರ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಭರದ ಸಿದ್ಧತೆ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ಸೆ.09 ಕ್ಕೆ ಐವರ್ನಾಡು ಜೂನಿಯರ್ ಕಾಲೇಜಿನಲ್ಲಿ ನಡೆಯಲಿದ್ದು ಪಂದ್ಯಾಟಕ್ಕೆ ಭರದ ಸಿದ್ಧತೆಗಳು ನಡೆಯುತ್ತಿದೆ. ಏಳು ತಾಲೂಕಿನ ಶಾಲೆಯ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದು ಸುಮಾರು 450 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. 14 ವರ್ಷ ವಯೋಮಾನದ ವಿದ್ಯಾರ್ಥಿಗಳ 14 ಟೀಮ್ ಮತ್ತು 17 ವರ್ಷ ವಯೋಮಾನ 14 ಟೀಮ್ ಗಳಿಗೆ ಪಂದ್ಯಾಟ ನಡೆಯಲಿದೆ....

ಎಲಿಮಲೆ : ಸ್ವಚ್ಚತಾ ಸಪ್ತಾಹ ದಿನಾಚರಣೆ

ಸರಕಾರಿ ಪ್ರೌಢಶಾಲೆ ಎಲಿಮಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಸಪ್ತಾಹ ದಿನವನ್ನು ಸೆ.1 ರಂದು ಎಲಿಮಲೆಯ ಪರಿಸರದಲ್ಲಿ ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಶೈಲೇಶ್ ಅಂಬೆಕಲ್ಲು ಪರಿಸರ ಸ್ವಚ್ಛತೆ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಕಾರ್ಯಕ್ರಮಕ್ಕೆ ಶುಭ...

ಐವರ್ನಾಡು : ಟಿಪ್ಪರ್ ಪಲ್ಟಿ – ಅಪಾಯದಿಂದ ಪಾರು

ಐವರ್ನಾಡು ಸಮೀಪ ಮರುವತ್ತಡ್ಕದಲ್ಲಿ ಟಿಪ್ಪರ್ ಪಲ್ಟಿಯಾಗಿದ್ದು ಅಪಾಯದಿಂದ ಪಾರಾದ ಘಟನೆ ಇಂದು ನಡೆದಿದೆ. ಮರುವತ್ತಡ್ಕ ಸಮೀಪ ರಸ್ತೆಗೆ ಜಲ್ಲಿ ಹೇರಿಕೊಂಡು ಹೋಗುತ್ತಿದ್ದ ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದಿದ್ದು ಟಿಪ್ಪರ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ಎನ್ನೆಂಸಿ: ಯುವ ರೆಡ್ ಕ್ರಾಸ್ ಘಟಕದಿಂದ ಜಿನೇವಾ ಒಪ್ಪಂದ ದಿನಾಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ರೆಡ್ ಕ್ರಾಸ್ ನ ಮಹತ್ವದ ಕಾರ್ಯಕ್ರಮಗಳಲ್ಲಿ ಒಂದಾದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಜಿನೇವಾ ಒಪ್ಪಂದ ದಿನಾಚರಣೆಯ ಮಹತ್ವವನ್ನು ವಿವರಿಸುವುದರೊಂದಿಗೆ ರೆಡ್ ಕ್ರಾಸ್ ಸಂಸ್ಥೆಯ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಆಚರಿಸಲಾಯಿತು. ರೆಡ್ ಕ್ರಾಸ್...

ಕರಂಗಲ್ಲು :- ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಗಣೇಶೋತ್ಸವ ಸಮಿತಿ ಕರಂಗಲ್ಲು, ಶಾಲಾಭಿವೃದ್ಧಿ ಸಮಿತಿ ಕರಂಗಲ್ಲು ಹಾಗೂ ಪ್ರಾಥಮಿಕ ಶಾಲೆ ಕರಂಗಲ್ಲು ಇವುಗಳ ಸಹಕಾರದಿಂದ 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಆ.31 ರಂದು ಕರಂಗಲ್ಲು ಶಾಲೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯವರು, ಶಾಲಾಭಿವೃದ್ಧಿ ಸಮಿತಿಯವರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಕರಂಗಲ್ಲು ಅಂಗನವಾಡಿ ಕಾರ್ಯಕರ್ತೆಯರು...
Loading posts...

All posts loaded

No more posts

error: Content is protected !!