ದೇವ : 32 ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

ದೇವಚಳ್ಳ ಗ್ರಾಮದ ದೇವ ಗೆಳೆಯರ ಬಳಗ,ಜ್ಯೋತಿಲಕ್ಷ್ಮಿ ಮಹಿಳಾಮಂಡಲ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ ಇವುಗಳ ಜಂಟಿ ಆಶ್ರಯದಲ್ಲಿ ಆ‌.18 ರಂದು 32 ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ ನಡೆಯಿತು. ಊರಿನ ಹಿರಿಯರಾದ ಅಪ್ಪು ಬೆಳ್ಚಪ್ಪಾಡ ರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು....

ದಿ| ಕುರುಂಜಿಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯ ಸ್ಮರಣೆ

ಅಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಶನ್(ರಿ) ಸುಳ್ಯ ಇದರ ಆಡಳಿತ ಕಛೇರಿಯಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮಪತ್ನಿ ದಿ| ಕುರುಂಜಿಜಾನಕಿ ವೆಂಕಟ್ರಮಣ ಗೌಡರ 10ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ)ನ ಆಡಳಿತ ಕಛೇರಿಯಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್‌ಎಜ್ಯುಕೇಶನ್ (ರಿ) ಸುಳ್ಯ...
Ad Widget

ನಾಗರಿಕರ ದಿನದಂದು ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವಿಶ್ರಾಂತ ಕಾರ್ಯಕರ್ತರಿಗೆ ಸನ್ಮಾನ

ಸುಳ್ಯಮಂಡಲದ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಸಂಘಟನೆಯಲ್ಲಿ ಈ ಹಿಂದೆ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದು ಇದೀಗ ವಿಶ್ರಾಂತ ಜೀವನ ನಡೆಸುತ್ತಿರುವ ಹಿರಿಯರಾದ ಶ್ರೀಮತಿ ಎಂಜಿ ಕಾವೇರಮ್ಮ, ಶ್ರೀ ಮಾಧವ ಗೌಡ ಕಲ್ಲಗದ್ದೆ ಮತ್ತು ಶ್ರೀ ನಿತ್ಯಾನಂದ ಭಂಡಾರಿ ಇವರನ್ನು ಹಿರಿಯ ನಾಗರಿಕರ ದಿನದಂದು ಗೌರವದಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ,...

ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ

ಇತ್ತೀಚೆಗೆ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ 2022 ರ ಗೇಮ್ಸ್ ನಲ್ಲಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ವಿಜೇತರಾದ ತಾಲೂಕಿನ ಕ್ರೀಡಾಪಟುಗಳನ್ನು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್ ನ ಸಭಾಭವನದಲ್ಲಿ ಆ. 19 ರಂದು ಸುಳ್ಯ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಸೋಸಿಯೇಶನ್, ಲಯನ್ಸ್ ಕ್ಲಬ್ ಸುಳ್ಯ ಮತ್ತು ಮಹಿಳಾ ಸಮಾಜ ಇದರ ಸಹಯೋಗದಲ್ಲಿ ಅಭಿನಂದಿಸುವ ಕಾರ್ಯಕ್ರಮ...

ಸೆ. 4ರಂದು ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ- ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸುಳ್ಯದ ಅಂಬಟೆಡ್ಕದಲ್ಲಿರುವ ಮರಾಟಿ ಸಮಾಜ ಸೇವಾ ಸಂಘದ ಗಿರಿದರ್ಶಿನಿ ಸಭಾ ಭವನದಲ್ಲಿ ಸೆ. 4ರಂದು ಪೂ. 10:30 ಕ್ಕೆ ನಡೆಯಲಿದೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸೀತಾನಂದ ಬೇರ್ಪಡ್ಕರವರು ವಹಿಸಲಿದ್ದಾರೆ. ಸಂಘದ ವತಿಯಿಂದ ಕೊಡಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು...

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಮಾಹಿತಿ ಕಾರ್ಯಾಗಾರ

ಬೆಳ್ಳಾರೆ: ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಗ್ರಾ.ಪಂ. ಬೆಳ್ಳಾರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮತ್ತು ಸ್ನೇಹಶ್ರೀ ಮಹಿಳಾ ಮಂಡಲ ಬೆಳ್ಳಾರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ಳಾರೆ, ಮಾಸ್ತಿಕಟ್ಟೆ, ನೆಟ್ಟಾರು, ಪಾಟಾಜೆ,...

ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಗೆ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಆಯ್ಕೆ.

ದೇಲಂಪಾಡಿ: ಸುಳ್ಯದ ಇಂಡಿಯನ್ ಗ್ರಾನೈಟ್ಸ್ & ಟೈಲ್ಸ್ ಮಾಲಕ ಕೃಷಿಕರಾದ ಸಿ.ಹೆಚ್. ಮಹಮ್ಮದ್ ಅಶ್ರಫ್ ಚಂಡಮೂಲೆ ಅವರಿಗೆ ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ಅತ್ಯುತ್ತಮ ಕೃಷಿಕ ಹಾಗೂ ಹೈನುಗಾರಿಕೆ ಪ್ರಶಸ್ತಿಯು ಗ್ರಾಮ ಪಂಚಾಯತ್‌ನಲ್ಲಿ ನಡೆದ ಕೃಷಿ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೂಲತಃ ಪರಪ್ಪೆಯವರಾದ ಅಶ್ರಫ್‌ರವರು ಅತ್ಯುತ್ತಮ ಪ್ರಗತಿ ಪರ ಕೃಷಿಕರು ಹಾಗೂ ಉತ್ತಮ...

ಕರಿಕೆಯ ಸರಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿಯಾಗಿ ಡಾ.ಪಲ್ಲವಿ ಕೆ.ಸಿ. ನೇಮಕ

ಕರ್ನಾಟಕ ಸರ್ಕಾರದ ಆಯುಷ್ ಇಲಾಖೆಗೆ ಕೆಪಿಎಸ್ಸಿ ಮೂಲಕ ನೇಮಕಾತಿ ನಡೆದಿದ್ದು, ಡಾ. ಪಲ್ಲವಿ ಕೆ.ಸಿ.ಯವರು ಮಡಿಕೇರಿ ತಾಲ್ಲೂಕಿನ ಕರಿಕೆ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಕ್ಕೆ ಸೇವೆಗೆ ನೇಮಕಾತಿಗೊಂಡಿದ್ದಾರೆ.ಮೂಲತಃ ಸುಳ್ಯ ತಾಲ್ಲೂಕಿನ ಅರಂತೋಡು ಗ್ರಾಮದ ಕರಿ0ಬಿ ಮನೆ ಚಿನ್ನಪ್ಪ ಗೌಡ ಮತ್ತು ಪುಷ್ಪಾವತಿ ಶಿಕ್ಷಕ ದಂಪತಿಗಳ ಪುತ್ರಿಯಾಗಿರುವ ಇವರು, 2006ರಿಂದ 2021ವರೆಗೆ ಸುದೀರ್ಘ 15 ವರ್ಷಗಳ ಕಾಲ ಕೊಲ್ಲಮೊಗ್ರ...

ಕಾಂಗ್ರೆಸ್ ವತಿಯಿಂದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಜನ್ಮದಿನಾಚರಣೆ

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸುರವರ 107ನೇ ಜನ್ಮದಿನೋತ್ಸವ ಮತ್ತು ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಕೆ.ಪಿ.ಸಿ.ಸಿ ನಿರ್ದೇಶನದಂತೆ ಸುಳ್ಯದಲ್ಲಿ ನಡೆಯಲಿರುವ “ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಸುಳ್ಯದ ಅಡ್ಪಂಗಾಯ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ರಾಜ್ಯ ಕಂಡ ಧೀಮಂತ...

ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಭಕ್ತಿ ಸಂಗೀತ ರಸಮಂಜರಿ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗ ಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಭಕ್ತಿ ಸಂಗೀತ ರಸಮಂಜರಿ ಕಾರ್ಯಕ್ರಮವು ಜರುಗಿತು . ಕಾರ್ಯಕ್ರಮವನ್ನು ಉತ್ತರ ಕರ್ನಾಟಕ ಗೆಳೆಯರ ಬಳಗದ ಅಧ್ಯಕ್ಷರಾದ ಮಂಜುನಾಥ್ ಮೇಸ್ತ್ರಿಯವರು ಉದ್ಘಾಟನೆ ಮಾಡಿದರು. ಘನ ಅಧ್ಯಕ್ಷತೆಯನ್ನು...
Loading posts...

All posts loaded

No more posts

error: Content is protected !!