- Thursday
- October 1st, 2026
ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಾವು ಸ್ವಾತಂತ್ರ್ಯದ ಅಮೃತಮಹೋತ್ಸವದಲ್ಲಿದ್ದೇವೆ 75 ಸಂವತ್ಸರಗಳನ್ನು ಪೂರೈಸಿದ್ದೇವೆ ಈ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾನೀಯರು ವೀರವನಿತೆಯರು ವೀರ ಪುರುಷರು ತಮ್ಮ ಜೀವವನ್ನು, ತಮ್ಮ ಕುಟುಂಬವನ್ನು ಬಲಿಕೊಟ್ಟು, ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನವಾಗಿ ನೀಡಿದ್ದಾರೆ. ಬಿಸಿ ರಕ್ತವನ್ನು ನಮಗಾಗಿ ನಮ್ಮ ದೇಶಕ್ಕಾಗಿ ಅರ್ಪಿಸಿದ್ದಾರೆ ಅದರ ಮೌಲ್ಯವನ್ನು ನಾವಿಂದು ವಿಮರ್ಶೆ ಮಾಡಬೇಕಿದೆ ಇಂದು ನಾವೆತ್ತ ಈ ಸ್ವಾತಂತ್ರ್ಯವನ್ನು ಕೊಂಡೊಯ್ಯುತ್ತೇವೆ...
ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ನಡೆದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವಿಭಾಗದ ಯೂತ್ ರೆಡ್ ಕ್ರಾಸ್ ಘಟಕ ಆ.12 ರಂದು ಉದ್ಘಾಟನೆಗೊಂಡಿತು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕಿನ ಸಭಾಪತಿ ಪಿ.ಬಿ ಸುಧಾಕರ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ...
ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ ಸುಳ್ಯ ಇವರ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ವಿವಿಧ ವಿದ್ಯಾಲಯಗಳಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನದ ಸಮಾರೋಪ ಮತ್ತು ಸನ್ಮಾನ ಸಮಾರಂಭ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...
ಅಜ್ಜಾವರದ ಧನಲಕ್ಷ್ಮೀ ಮಹಿಳಾ ಮಂಡಲದ ಆಶ್ರಯದಲ್ಲಿ ಇತ್ತೀಚೆಗೆ ಆಟಿ ಆಚರಣೆ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಜ್ಞಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಬಸವನಪಾದೆ ರವರು ಚೆನ್ನಮಣೆ ಆಡುವುದರ ಮೂಲಕ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಧನಲಕ್ಷ್ಮಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿಭಟ್ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಧರ್ಮದರ್ಶಿ ಎ ಭಾಸ್ಕರ ರಾವ್ ಬಯಂಬು,...
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿ/ವಿದ್ಯಾರ್ಥಿನಿಯರು 2021 -22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 98 ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 95 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾವಾರು ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸ್ವ ವಿವರ, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಭಾವಚಿತ್ರ...
ಭಾರತದ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಸರಕಾರದ ವತಿಯಿಂದ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಂದರ್ಭದಲ್ಲಿ ನಗರ ಪಂಚಾಯತ್ ಸುಳ್ಯ ಇದರ ನಿರ್ದೇಶನದಂತೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ, ಆ. 13 ರಂದು ಬೆಳಿಗೆ 9 ಗಂಟೆಯಿಂದ 9.30ರ ವರೆಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ - ಬೋಧಕೇತರ ಸಿಬ್ಬಂದಿ ವರ್ಗದವರು...
ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆ.13 ರಂದು ಧ್ವಜಾರೋಹಣವನ್ನು ಅಧ್ಯಕ್ಷೆ ಹಾಜಿರಾ ಗಫೂರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಪವಿತ್ರ ಕುದ್ವ, ಮೀನಾಕ್ಷಿ ಕೆ, ಹರೀಶ್ ಮಾಳಪ್ಪಮಕ್ಕಿ, ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ ಕೆ, ಹಾಲು ಉತ್ಪಾದಕರ ಸಂಘ ಪಡ್ಪಿನಂಗಡಿ ಇದರ ಅಧ್ಯಕ್ಷರಾದ ಕಾರ್ಯಪ್ಪ ಗೌಡ ಆಕ್ರಿಕಟ್ಟೆ, ಕಾರ್ಯದರ್ಶಿ...
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಆ.12 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಇತ್ತೀಚೆಗೆ ಬರೆ ಜರಿದು ಮನೆ ಕಳೆದುಕೊಂಡ ತೇಜಕುಮಾರ್ ಕಜ್ಜೋಡಿ ಮನೆಯವರಿಗೆ ಲಯನ್ಸ್ ಕ್ಲಬ್ ವತಿಯಿಂದ ಸಹಾಯಧನ ವಿತರಿಸಲಾಯಿತು. ತಾರಾಮತಿ ಕಜ್ಜೋಡಿ ಅವರು ಸಹಾಯಧನ ಸ್ವೀಕರಿಸಿದರು. ಹಾಗೂ ಆ.02 ರಂದು ಹರಿಹರ ಪಲ್ಲತ್ತಡ್ಕದ ಸೇತುವೆಯಲ್ಲಿ ಸಿಲುಕಿದ...
ಮಳೆಯಿಂದಾಗಿ ಹರಿಹರ ಪಲ್ಲತಡ್ಕದಲ್ಲಿ ಹಾನಿ ಉಂಟಾಗಿದ್ದು ಆ.2ರಂದು ಸೇತುವೆಗೆ ತಡೆಯಾಗಿ ಬಿದ್ದಂತಹ ಮರಗಳ ತೆರವು ಗೊಳಿಸುವ ವೇಳೆಯಲ್ಲಿ ಕ್ರೇನ್ ಚಾಲಕ ಶರೀಫ್ ಎಂಬುವರು ನೀರಿಗೆ ಬಿದ್ದಿದ್ದು ಅವರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ ಸೋಮಶೇಖರ ಕಟ್ಟೆಮನೆ ಅವರನ್ನು ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ರಮಾನಾಥ ರೈ ಅವರು ಆ.11 ರಂದು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು...
Loading posts...
All posts loaded
No more posts
