Ad Widget

ಸಚಿವರೇ ನೀವು ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಹೇಗಿದೆ ನೋಡದೇ ಖಾಸಗಿ ಆಸ್ಪತ್ರೆಗೆ ಭೇಟಿ ನೀಡುವುದು ನ್ಯಾಯ ಸಮ್ಮತವೇ?

ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಲವಾರು ಕೊರೋನಾ ಸೋಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು ಇದರಲ್ಲಿ ಹಲವಾರು ಮಂದಿ ಗುಣಮುಖರಾಗಿ ತೆರಳಿದ್ದಾರೆ. ಬಡವರು ಅಧಿಕ ಹಣವನ್ನು ಚಿಕಿತ್ಸೆಗಾಗಿ ವೆಚ್ಚ ಭರಿಸಲು ಸಾಧ್ಯವಾಗದೆ ಇರುವವರು ಸರ್ಕಾರಿ ಆಸ್ಪತ್ರೆಯನ್ನೇ ನಂಬಿರುತ್ತಾರೆ.ಆದರೆ ನಮ್ಮ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುಚ್ಛಕ್ತಿ ಉತ್ಪಾದನೆಯ ಸೋಲಾರ್ ನೀರಿನ ಟ್ಯಾಂಕ್ ಗಳು ಲಕ್ಷಾಂತರ ರೂಪಾಯಿಯ...

ಸುಳ್ಯ ನ್ಯಾಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ನ್ಯಾಯಲಯದಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯದ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಪುರುಷೋತ್ತಮ, ಕಿರಿಯ ನ್ಯಾಯಧೀಶರಾದ ಯಶವಂತ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಯಂ ವೆಂಕಪ್ಪ ಗೌಡ, ಸಂಘದ ಪದಾದಿಕಾರಿಗಳು, ಹಿರಿಯ ಕಿರಿಯ ಸದಸ್ಯರು, ನ್ಯಾಯಾಲಯದ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು .
Ad Widget

ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ

ಸರಕಾರಿ ಪ್ರೌಢ ಶಾಲೆ ಎಲಿಮಲೆ ಇಲ್ಲಿ 74 ನೆ ಸ್ವಾತಂತ್ರ್ಯ ಉತ್ಸವವನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ್ ನಂದಗೋಕುಲ ಇವರು ದ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಈ ಸಂದರ್ಭ 2019-20 ರ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ತಾಲೂಕಿಗೆ ದ್ವೀತಿಯ ಸ್ಥಾನ ಹಾಗೂ ಸರಕಾರಿ ಪ್ರೌಢ ಶಾಲೆಗಳಲ್ಲಿ ತಾಲೂಕಿಗೆ ಪ್ರಥಮ...

*ತಂಟೆಪ್ಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ*

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತಂಟೆಪ್ಪಾಡಿಯಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ ನಡೆಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಷಪ್ಪ ಕೆ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಗೀತಾ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಪಾರ್ವತಿ ಜಿ ಕೆ ಹಾಗೂ ಪೋಷಕರು ಉಪಸ್ಥಿತರಿದ್ದರು.

*ಬೊಳುಬೈಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ*

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೊಲುಬೈಲು ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲ್ಪಟ್ಟಿತು. 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮುಖ್ಯಶಿಕ್ಷಕಿ ಕೋಮಲ ನೆರವೇರಿಸಿದರು. ಸಹಶಿಕ್ಷಕಿ ರಾಧಮ್ಮ ಸಹಕರಿಸಿದರು.

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಶ್ರೀ ಎನ್ ವೆಂಕಟ್ರಮಣ ಭಟ್ ನೆರವೇರಿಸಿದರು. ಮುಖ್ಯಶಿಕ್ಷಕರಾದ ಶ್ರೀ ಯಶೋಧರ ಎನ್ ಶುಭ ಹಾರೈಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ ಸಂಭ್ರಮ ಇಂದು

ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...

ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕೆ.ಎಸ್.ಆರ್.ಟಿ.ಸಿ ಡಿಪೋದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು.ದ್ವಜಾರೋಹಣವನ್ನು ಹಿರಿಯ ಸಂಚಾರ ನಿಯಂತ್ರಕರಾದ ಗಂಗಾಧರ ಮಾವಂಜಿ ಮಂಡೆಕೋಲು ನೆರವೇರಿಸಿದರು.ದ್ವಜಾರೋಹಣ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕರಾದ ಸುಂದರರಾಜ್, ಭದ್ರತಾಧಿಕಾರಿ ಶಿವಕುಮಾರ್, ಸಹಾಯಕ ಸಂಚಾರ ನಿರೀಕ್ಷಕರಾದ ಕರುಣಾಕರ ಕರ್ಲಪ್ಪಾಡಿ, ಹರಿಶ್ಚಂದ್ರ ಮೇಲಡ್ತಲೆ, ಜಗದೀಶ, ಪ್ರವೀಣ್ ರಾಯಣ್ಣ ಗೌಡ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಜಯನಗರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರಮದಾನ

ಜಯನಗರ 19 ನೇ ವಾರ್ಡಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸ್ಥಳೀಯ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ವಿಕ್ರಮ ಯುವಕ ಮಂಡಲದ ಸದಸ್ಯರುಗಳು ರಸ್ತೆಗಳಲ್ಲಿ ಇರುವ ಗುಂಡಿಗಳಿಗೆ ಮಣ್ಣು ಹಾಕಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ನ ಪಂ ಸದಸ್ಯೆ ಶಿಲ್ಪ ಸುದೇವ್ ಹಾಗೂ ಸುಮಾರು 20ಕ್ಕೂ ಹೆಚ್ಚು ಯುವಕರು ಭಾಗವಹಿಸಿದ್ದರು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಕೊವಿಡ್-19ರ ಕಾರಣ ಸರಳವಾಗಿ ಆಚರಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಧ್ವಜರೋಹಣ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಭಾಗವಹಿಸಿ ದ್ದರು. ಅಕಾಡೆಮಿ...
Loading posts...

All posts loaded

No more posts

error: Content is protected !!