- Monday
- June 8th, 2026
ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ...
ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...
ಬೂಡು ಕೇರ್ಪಳ ಸಂಪರ್ಕಿಸುವ ರಸ್ತೆಯಲ್ಲಿ ದುರ್ಗಾಪರಮೇಶ್ವರಿ ಕಲಾಮಂದಿರ ಎದುರು ಭಾರಿ ಹದಗೆಟ್ಟಿದ್ದು ಮಳೆಗಾಲದಲ್ಲಿ ನಡೆದಾಡಲು ಕಷ್ಟವಾಗಲಿದೆ. ಆದ್ದರಿಂದ ಈ ಕೂಡಲೇ ದುರಸ್ತಿಪಡಿಸಬೇಕೆಂದು ನ.ಪಂ.ಸದಸ್ಯ ರಿಯಾಜ್ ಕಟ್ಟೆಕಾರ್ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಮುಕ್ಕೂರು : ಮಳೆ ಹಾನಿ ಪರಿಹಾರ ಯೋಜನೆಯಡಿ ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸಂಪರ್ಕ ರಸ್ತೆಯ ಕಾಪುಕಾಡು- ಜಾಲ್ಪಣೆ ತನಕ 17 ಲಕ್ಷ ರೂ.ವೆಚ್ಚದಲ್ಲಿ ಮರು ಡಾಮರೀಕರಣಕ್ಕೆ ಮೇ 28 ರಂದು ಚಾಲನೆ ನೀಡಲಾಯಿತು.ಜಿ.ಪಂ.ಸದಸ್ಯ ಎಸ್.ಎನ್. ಮನ್ಮಥ ಕಾಮಗಾರಿಗೆ ಚಾಲನೆ ನೀಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಗ್ರಾ.ಪಂ.ಸದಸ್ಯ ಉಮೇಶ್ ಕೆಎಂಬಿ,ನ್ಯಾಯವಾದಿ ಗಣಪತಿ ಭಟ್...
ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮೇ 27 ರಿಂದ 29 ವರೆಗೆ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ (50-75% ಪ್ರದೇಶಗಳಲ್ಲಿ) ಹಾಗೂ ಮೇ 30 ರಿಂದ ಜೂನ್ 1 ರವರೆಗೆ ವ್ಯಾಪಕವಾಗಿ(75% ಗಿಂತ ಹೆಚ್ಚು ಪ್ರದೇಶಗಳಲ್ಲಿ), ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ರೈತರು ಮುಂಗಾರಿನ ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳನ್ನು ಮಳೆಯ ಆಧಾರದ ಮೇಲೆ ಕೈಗೊಳ್ಳಬಹುದಾಗಿದೆ ಎಂದು...
ಅಜ್ಜಾವರ ಪೆಲತ್ತಡಿ ಎಂಬಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾಗಿದ್ದು ಸ್ಕೂಟಿ ಸವಾರರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅಜ್ಜಾವರದಿಂದ ಅಡ್ಪಂಗಾಯಕ್ಕೆ ಹೋಗುತ್ತಿದ್ದ ಯಾಕುಬ್ ಎಂಬವರ ಕಾರು ಹಾಗೂ ಎದುರಿನಿಂದ ಬಂದ ಸ್ಕೂಟಿ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಬಂಟ್ರಬೈಲಿನ ಶಾನಿಫ್ ಮತ್ತು ಬಾಸಿತ್ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಸರ್ವೆ ಹಾಸ್ಟೆಲ್ ನಲ್ಲಿ ಕಾರಂಟೈನ್ ನಲ್ಲಿದ್ದ ವ್ಯಕ್ತಿಗಳಲ್ಲಿ ಕೊರೊನ ಸೋಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಮುಂಬೈ ನಿಂದ ಕೆಲ ದಿನಗಳ ಹಿಂದೆ ಬಂದ ಇವರನ್ನು ಹಾಸ್ಟೆಲ್ ನಲ್ಲಿ ಕಾರಂಟೈನ್ ಮಾಡಲಾಗಿತ್ತು.ಒಂದೇ ಕುಟುಂಬದಲ್ಲಿ ಸೋಂಕು ದೃಡಪಟ್ಟಿದ್ದರಿಂದ ಗಂಡ ಹೆಂಡತಿ ಮತ್ತು ಮಗಳನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Loading posts...
All posts loaded
No more posts
