Ad Widget

ದೇವರಹಳ್ಳಿ : 29ನೇ ವರ್ಷದ ಗಣೇಶೋತ್ಸವ

ಏನೆಕಲ್ಲು ಗ್ರಾಮದ ದೇವರಹಳ್ಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 29ನೇ ವರ್ಷದ  ಗಣೇಶೋತ್ಸವ ಕಾರ್ಯಕ್ರಮ ಆಗಸ್ಟ್ 27ರಂದು ಶ್ರೀಹರಿ ಭಜನಾ ಮಂದಿರದಲ್ಲಿ ನಡೆಯಿತು. ಆಗಸ್ಟ್ 27ರಂದು ಬೆಳಿಗ್ಗೆ ದೇವರ ವಿಗ್ರಹ ಪ್ರತಿಷ್ಠಾಪನೆ ನಂತರ ಭಜನಾ ಕಾರ್ಯಕ್ರಮ, ಗಣಪತಿ ಹೋಮ, ಪೂರ್ಣಾವತಿ, ಮಕ್ಕಳಿಗೆ ವಿದ್ಯಾರಂಭ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಅಪರಾಹ್ನ...

ಹಳೆಗೇಟು : ಸಾಂಸ್ಕೃತಿಕ ಸಂಘದ ಆಶ್ರಯದಲ್ಲಿ 42ನೇ  ಗಣೇಶೋತ್ಸವ

ಸಾಂಸ್ಕೃತಿಕ ಸಂಘ ಹಳೆಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ಚಾಲನೆ ನೀಡಲಾಯಿತು. ಅಗಸ್ಟ್ 27ರಂದು ಬೆಳಿಗ್ಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಿತು. ಸಂಜೆ ದೀಪಾಂಜಲಿ ಮಹಿಳಾ ಭಜನಾ ಮಂಡಳಿ ...
Ad Widget

ಸುಳ್ಯ : ಗಡಿ ಭದ್ರತಾ ಪಡೆಗೆ ಆಯ್ಕೆಯಾದ ಕು.ಸುಶ್ಮಿತಾ ಎಂ.ಎ ವೃತ್ತಿ ಜೀವನ ಯಶಸ್ವಿಗೆ ವಿಘ್ನ ವಿನಾಯಕನಲ್ಲಿ ವಿಶೇಷ ಪ್ರಾರ್ಥನೆ

ಎಸ್.ಎಸ್.ಸಿ.ಜಿ.ಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿರುವ ಅರಂತೋಡು ಗ್ರಾಮದ ಆಡ್ತಲೆಯ ಕು.ಸುಶ್ಮಿತಾ.ಎಂ.ಎ ಇವರ ವೃತ್ತಿ ಜೀವನವು ಯಶಸ್ವಿಯಾಗಲು ವಿಘ್ನ ವಿನಾಯಕ ಆಶೀರ್ವಾದ ನೀಡುವಂತೆ ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ವತಿಯಿಂದ ಆರಾಧಿಸಲ್ಪಡುವ ಶ್ರೀ ಗಣಪತಿ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದವನ್ನು ನೀಡಲಾಯಿತು.‌ ಈ ಸಂದರ್ಭದಲ್ಲಿ ಸಮಿತಿಯ ಕೋಶಾಧಿಕಾರಿ...

ಮೇದಿನಡ್ಕ ಶ್ರೀ ಗಣೇಶ ಚತುರ್ಥಿ ಆಚರಣೆ

ಅಜ್ಜಾವರ: ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಬೆಳಿಗ್ಗೆ ಮಹಾಮಂಗಳಾರತಿ, ವಿಶೇಷ ಪೂಜೆಯೊಂದಿಗೆ ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಅಲಂಕಾರ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಿತು, ಈ ಸಂದರ್ಭದಲ್ಲಿ ಊರ ಭಕ್ತಾದಿಗಳು, ದೇವಸ್ಥಾನದ ಆಡಳಿತ ಸಮಿತಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ಷೇತ್ರದ ಅರ್ಚಕರಾದ ಯೋಗರಾಜ್ ವೈದಿಕ...

ಪಂಜ : ಗಣೇಶೋತ್ಸವ

ಪಂಜ ಪರಿಸರದ ಸಾರ್ವಜನಿಕ ಗಣೇಶೋತ್ಸವ ಅಂಗವಾಗಿ  ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆ.27 ರಂದು ಶ್ರೀ ಗಣಪತಿ ವಿಗ್ರಹ ಪ್ರತಿಷ್ಠಾಪನೆಗೊಂಡಿತು. ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ‌ನಡೆದು ಆ.29 ರಂದು ಭವ್ಯ ಶೋಭಾಯಾತ್ರೆಯೊಂದಿಗೆ ಗಣಪತಿ ವಿಸರ್ಜನೆ ನಡೆಯಲಿದೆ.

ವಳಲಂಬೆ : ಪೋಲೀಸರ ಸೂಚನೆಯಂತೆ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ರದ್ದು – ಬೇಸರ ವ್ಯಕ್ತಪಡಿಸಿದ ಭಕ್ತಾಭಿಮಾನಿಗಳು – ನಾವೂ ಭಾರತದಲ್ಲಿದ್ದೇವೋ ಪಾಕಿಸ್ತಾನದಲ್ಲಿದ್ದೇವೋ ಎಂದು ಗೊತ್ತಿಲ್ಲ – ವೆಂಕಟ್ ವಳಲಂಬೆ

ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಆ.27 ರಾತ್ರಿ ನಡೆದಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ ನಂತರ ನಡೆಸಬಾರದು ಎಂದು ಸರ್ಕಾರದ ಆದೇಶವಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದರು. ಅದಾಗಲೇ 10 ಗಂಟೆ ಆಗಿದ್ದರಿಂದ 30 ನಿಮಿಷಗಳ ಕಾರ್ಯಕ್ರಮ ಬಾಕಿ...

ಸುಳ್ಯ : ನಿರಂತರ ಮಳೆ ಹಿನ್ನೆಲೆ ತಾಲೂಕಿನಾದ್ಯಂತ ಪ್ರಾಥಮಿಕ & ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ಆ.28 ರಂದು ರಜೆ ಘೋಷಿಸಿ ಸುಳ್ಯ ತಹಶೀಲ್ದಾರ್ ಆದೇಶಿಸಿದ್ದಾರೆ.

ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ; ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಯಕರ್ತರು ಭಾಗಿ

ದೇಶದಲ್ಲಿ ಮತ ಕಳ್ಳತನದ ಬಗ್ಗೆ ಜನಜಾಗೃತಿ ಮೂಡಿಸುತ್ತಿರುವ ಮತ್ತು ಬಿಹಾರದಲ್ಲಿ ಮತದಾರ ಅಧಿಕಾರ ಯಾತ್ರೆಗೆ ಬೆಂಬಲವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆ. 25ರಂದು ಸಂಜೆ ಬ್ರಹತ್ ಪಂಜಿನ ಮೆರವಣಿಗೆ ನಡೆಯಿತು.ಮಂಗಳೂರಿನ ನವಭಾರತ್ ಸರ್ಕಲ್ ನಿಂದ ಮಹಾನಗರ ಪಾಲಿಕೆ ಮುಂಭಾಗದವರೆಗೆ ನಡೆದ ಪಂಜಿನ ಮೆರವಣಿಗೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ, ಲೋಕಸಭಾ...

ಸುಳ್ಯ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ : ಕೆ.ಪಿ.ಎಸ್ ಬೆಳ್ಳಾರೆಯ ನಾಲ್ಕು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಸುಳ್ಯ ಮತ್ತು ಕೆಪಿಎಸ್ ಬೆಳ್ಳಾರೆ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14 ಮತ್ತು 17 ವರ್ಷದ ವಯೋಮಾನದ ಬಾಲಕ ಬಾಲಕಿಯರ  ಹ್ಯಾಂಡ್ ಬಾಲ್ ಪಂದ್ಯಾಟವು ಕೆಪಿಎಸ್ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ.ಎಲ್ ರೈ ಉದ್ಘಾಟಿಸಿದರು. ಕೆ.ಪಿ.ಎಸ್ ಬೆಳ್ಳಾರೆಯ ಎಸ್‌.ಡಿ.ಎಂ.ಸಿ...

ಕೊಲ್ಲಮೊಗ್ರು : 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರು ಇದರ ವತಿಯಿಂದ ಇಂದು ಮಯೂರ ಕಲಾ ಮಂದಿರದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠೆ  ಹಾಗೂ 12 ತೆಂಗಿನ ಕಾಯಿ ಗಣಪತಿ ಹವನ ನಡೆಯಿತು. ನಂತರ ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಪ್ರಸಾದ ವಿತರಣೆ ಶ್ರದ್ದಾ ಭಕ್ತಿಯಿಂದ ನಡೆಯಿತು. ಮದ್ಯಾಹ್ನ ನಂತರ ಅಂಗನವಾಡಿ ಮಕ್ಕಳಿಗೆ  ಪುಟಾಣಿಗಳಿಗೆ ಮುದ್ದು...
Loading posts...

All posts loaded

No more posts

error: Content is protected !!