- Monday
- March 9th, 2026
ದೇವಚಳ್ಳ ಗ್ರಾಮದ ವಸಂತ ಕುಮಾರ್ ಮುಂಡೋಡಿಯವರ ಪತ್ನಿ ನಿವೃತ್ತ ಉಪ ತಹಶೀಲ್ದಾರ್ ಆಗಿದ್ದ ವೇದಾವತಿ ಅಲ್ಪ ಕಾಲದ ಅಸೌಖ್ಯದಿಂದ ಫೆ.05 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೃತರು ಪತಿ ಹಾಗೂ ಕುಟುಂಬಸ್ಥರು ಮತ್ತು ಬಂಧುಮಿತ್ರರನ್ನು ಅಗಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್(ರಿ.) ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಹಾಗೂ ಶ್ರೀಮತಿ ಹೇಮಾವತಿ ಹೆಗ್ಗಡೆ ಅವರ ಶುಭಾರ್ಶೀವಾದದೊಂದಿಗೆ ಸುಳ್ಯ ತಾಲೂಕಿನಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಾಸಾಶನ ನೀಡುತ್ತಿರುವ ಕುಟುಂಬಗಳಿಗೆ ಶ್ರೀಮತಿ ಹೇಮಾವತಿ ಹೆಗ್ಗಡೆಯವರು ನೀಡಿದ ದಿನನಿತ್ಯ ಬಳಕೆ ಮಾಡುವ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ...
ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಸಂಭ್ರಮದೊಂದಿಗೆ ಜರುಗುತ್ತಿದ್ದು, ಇಂದು ಬೆಳಿಗ್ಗೆ ಶ್ರೀ ದೇವರ ಉತ್ಸವ, ದರ್ಶನಬಲಿ, ಬಟ್ಟಲುಕಾಣಿಕೆ, ಮಧ್ಯಾಹ್ನ ಮಹಾಪೂಜೆ ಜರುಗಿತು.ನಾಳೆ ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ಹಾಗೂ ಕಾಚುಕುಜುಂಬ ದೈವದ ನರ್ತನ ಸೇವೆ, ಶ್ರೀ ದೇವರ ಮಹಾಪೂಜೆ, ಶ್ರೀ...
ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ.) ಮಂಗಳೂರು, ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು, ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟ ಜಾಲ್ಸೂರು ಇವುಗಳ ಸಹಯೋಗದೊಂದಿಗೆವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಸಭಾಭವನ ಫೆ.5 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯ ಗ್ರಾಮೀಣಾಬಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್‌ರವರು ಉದ್ಘಾಟಿಸಿದರು. ವಿಜಯ...
ಕೇಂದ್ರ ಸರಕಾರ ಉನ್ನತ ಶಿಕ್ಷಣ ಇಲಾಖೆ ಮತ್ತು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಸಹಯೋಗದೊಂದಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್ ಡಿಸೆಂಬರ್-2025) ಯಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಶ್ರೀಮತಿ ಹರ್ಷಿತಾ.ಕೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ಇವರು ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ.ಟಿ ಇವರ ಪತ್ನಿ ಹಾಗೂ...
ಪುತ್ತೂರು : ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪೆರುವಾಜೆ ಗ್ರಾಮದ ಪೆರ್ಜಿ ನಾರ್ಕೋಡು ಎನ್.ಎಸ್.ವೆಂಕಪ್ಪ ಗೌಡ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರೈ ನಳೀಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಫೆ.4ರಂದು ಸಂಘದ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ...
ಕಾಸರಗೋಡು : “ಯಕ್ಷಗಾನ ಬೊಂಬೆಯಾಟವೂ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರಿಗಿದೆ. ಈ ನಿಟ್ಟಿನಲ್ಲಿ ಮಾದರಿ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುತ್ತಿರುವ ಕಾಸರಗೋಡಿನ ಕೆ.ವಿ. ರಮೇಶ ಅಭಿನಂದನಾರ್ಹರು” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ನೂತನ ಅಭಿಯಾನವಾದ 'ಗಣ್ಯರೆಡೆಗೆ ಬೊಂಬೆ...
ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೆಪಿಸಿಸಿಯಿಂದ ನೇಮಕಗೊಂಡ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಅಂಬೆಕಲ್ಲು ರವರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಾಫ, ಬ್ಲಾಕ್ ಕಾಂಗ್ರೆಸ್...
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಕೇರಳ ಮೂಲದ ಪ್ರಸ್ತುತ ಅಮೆರಿಕದ ಟೆಕ್ಸಾಸ್ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಂದ್ರನ್.ಕೆ ಪಟೇಲ್ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ ಹೆಬ್ಬಾರ್ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಿನಾಂಕ:05-02-2026 ಗುರುವಾರ 📝ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 01,🐏ಮೇಷ ರಾಶಿ🐏🌺,ಹೊಸ ವ್ಯಕ್ತಿಗಳ ಪರಿಚಯಗಳು ಉಂಟಾಗುತ್ತವೆ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಬೆಂಬಲ ಹೆಚ್ಚಾಗುತ್ತದೆ, ಅಮೂಲ್ಯವಾದ ವಸ್ತು ಮತ್ತು ವಸ್ತ್ರ ಲಾಭಗಳು ದೊರೆಯುತ್ತವೆ. ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ,ಪರಿಹಾರ:- ಕುಲದೇವತೆಯ ಪ್ರಾರ್ಥನೆಯನ್ನು ಮಾಡಿ,02,🐂ವೃಷಭ ರಾಶಿ🐂🌺,ದೈವಿಕ ಸೇವಾ ಕಾರ್ಯಗಳಲ್ಲಿ...
Loading posts...
All posts loaded
No more posts
