ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಸೋಣ ಸಂಕ್ರಮಣ ಪೂಜೆ

ಬೂಡು ಶ್ರೀ ಭಗವತಿ ದೇವಸ್ಥಾನದಲ್ಲಿ ಸೋಣ ತಿಂಗಳ ಸಂಕ್ರಮಣ ಪೂಜೆ ಆ. 17ರಂದು ನೆರವೇರಿತು. ಈ ಸಂದರ್ಭದಲ್ಲಿ ಊರಿನ ಹಾಗೂ ಪರ ಊರಿನ ಭಕ್ತಾದಿಗಳು ಆಗಮಿಸಿ ಸೇವಾ ರೂಪದಲ್ಲಿ ದೇವರಿಗೆ ಕಾಣಿಕೆ ಅರ್ಪಿಸಿದರು. ನೂರಾರು ಭಕ್ತಾದಿಗಳು ಈ ಪೂಜೆಯಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು.

ಪೆರುವಾಜೆ ದೇವರಮಾರು ನಾಗನಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ದೇವರಮಾರು ನಾಗನಕಟ್ಟೆಯಲ್ಲಿ ನಾಗರಪಂಚಮಿ ಆಚರಣೆ ಶ್ರದ್ಧಾಭಕ್ತಿಯಿಂದ ನಡೆಯಿತು. ನಾಗರಪಂಚಮಿ ಅಂಗವಾಗಿ ನಾಗನಕಟ್ಟೆಯಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು. ನಾಗದೇವರಿಗೆ ಹಾಲು ಹಾಗೂ ಸಿಯಾಳಾಭಿಷೇಕ ನೆರವೇರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.ನಾಗದೇವರ ಆರಾಧನೆ ಹಾಗೂ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತಾದಿಗಳು ಶ್ರದ್ಧೆಯಿಂದ ಪಾಲ್ಗೊಂಡರು. ದೇವಸ್ಥಾನದ ಪ್ರಧಾನ...
Ad Widget

ಸೇವೆಗೊಂದು ಮಾದರಿ “ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ.) ಮಂಗಳೂರು”

ಚೊಕ್ಕಾಡಿ ಎನ್ನುವುದು ಸುಪರಿಚಿತ ಪುಟ್ಟ ಗ್ರಾಮ. ಸಾಹಿತ್ಯ, ಸಂಸ್ಕೃತಿ, ಯಕ್ಷಗಾನ ಹೀಗೆ ಬಹುಮುಖಿ ಚಟುವಟಿಕೆಗಳಿಗೆ ಮುಡಿಪಿಟ್ಟ ಹಲವು ಮಹನೀಯರನ್ನು ನಾಡಿಗೆ ನೀಡಿದ ಹೆಗ್ಗಳಿಕೆ ಇಲ್ಲಿಯದು. ಈ ಪುಟ್ಟ ಗ್ರಾಮದಲ್ಲಿ ಚೂಂತಾರು ಎನ್ನುವುದು ಒಂದು ಸಣ್ಣ ಬೈಲು. ಸಣ್ಣ ಬೈಲಿನಲ್ಲಿ ವೈದಿಕ ಮನೆತನಕ್ಕೆ ಸೇರಿದ ನಾಲ್ಕಾರು ಕುಟುಂಬಗಳು ಈ ಪ್ರತಿಷ್ಠಾನದ ರೂವಾರಿಗಳು.  ಮನುಷ್ಯನಿಗೆ ವಿವಿಧ ರೀತಿಯ ಋಣ...

ಕಂದ್ರಪ್ಪಾಡಿ : ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ನಾಗನಕಟ್ಟೆಯಲ್ಲಿ ಈ ದಿನ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ಹಾಲು, ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾ ಪ್ರಸಾದ್ ಮಂಡೋಡಿ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗತಂಬಿಲ ಹಾಗೂ ಸಾಮೂಹಿಕ ಆಶ್ಲೇಷ ಬಲಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಪ್ರಯುಕ್ತ ಆಶ್ಲೇಷ ಬಲಿ ಹಾಗೂ ನಾಗತಂಬಿಲ ನಡೆಯಿತು. ಬೆಳಿಗ್ಗೆ ಶ್ರೀ ದೇವಳದ ನಾಗ ಸನ್ನಿಧಿಯಲ್ಲಿ ನಾಗ ತಂಬಿಲ ಹಾಗೂ ಕ್ಷೀರಾಭಿಷೇಕ ನಡೆಯಲಿದ್ದು, ಬಳಿಕ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ವ್ಯವಸ್ಥಾಪನಾ...

ಅಮ್ಮಾಜಿಮೂಲೆ : ನಾಗರಪಂಚಮಿ

ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಅಮ್ಮಾಜಿಮೂಲೆ ಯಲ್ಲಿ ಆ.17ರಂದು ಹಾಲಿನ ಅಭಿಷೇಕ ಸಿಯಾಳ ಅಭಿಷೇಕ ಮಂಗಳಾರತಿಯು ಅರ್ಚಕ ಅಡೂರಿನ ಸತ್ಯ ನಾರಾಯಣ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರಪಂಚಮಿಯ ಸಂಭ್ರಮ

ಸುಬ್ರಹ್ಮಣ್ಯ : ನಾಗಾರಾಧನೆಯ ಅತ್ಯಂತ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಕ್ಷೇತ್ರದ ಒಳಾಂಗಣದಲ್ಲಿರುವ ನಾಗ ದೇವರ ವಿಗ್ರಹಕ್ಕೆ ತನು ಅರ್ಪಿಸಲು ಮುಂಜಾನೆಯಿಂದಲೇ ಭಕ್ತರ ದಂಡು ಕ್ಷೇತ್ರದಲ್ಲಿ ಕಂಡು ಬಂದಿದೆ. ನಾಗರಪಂಚಮಿ ಹಿನ್ನಲೆಯಲ್ಲಿ ನಾಗನಿಗೆ ಹಾಲು ಮತ್ತು ಸೀಯಾಳವನ್ನು ಸಮರ್ಪಿಸುವ ಮೂಲಕ ಭಕ್ತರು ನಾಗನ ಕೃಪೆಗೆ ಪಾತ್ರರಾದರು. ನಾಗ ದೇವರಿಗೆ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.17ರಂದು ನಾಗರಪಂಚಮಿ ಆಚರಣೆ ಮಾಡಲಾಯಿತು. ಆ ಪ್ರಯುಕ್ತ ಬೆಳಿಗ್ಗೆ ನಾಗತಂಬಿಲ ಸೇವೆ ಹಾಗೂ ಶ್ರೀ ಕ್ಷೇತ್ರದ ದೈವಗಳ ಚಾವಡಿಯಲ್ಲಿ ತಿಂಗಳ ಸಂಕ್ರಮಣ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು,...

ಇಂದಿನ(ಆಗಸ್ಟ್ 17) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಅಶ್ನಾಕ್ ಗೂನಡ್ಕ ಅವರಿಗೆ ಎಸ್‌ ಕೆ ಎಸ್‌ ಎಸ್‌ ಎಫ್‌ ಗೂನಡ್ಕ ಶಾಖೆ ವತಿಯಿಂದ ಸನ್ಮಾನ ಕಾರ್ಯಕ್ರಮ

ಪೇರಡ್ಕ: ಎಸ್‌.ಕೆ.ಎಸ್‌.ಎಸ್‌.ಎಫ್. ಗೂನಡ್ಕ ಶಾಖೆಯ ವತಿಯಿಂದ ಆ. 17ರಂದು ಪೇರಡ್ಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ, ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಿಎಂಎ (CMA - USA) ಪರೀಕ್ಷೆಯಲ್ಲಿಸಾಧನೆಗೈದ ಅಶ್ಫಾಕ್ ಗೂನಡ್ಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಗ್ರಾಮೀಣ ಭಾಗದ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಜ್ಜೆಯನ್ನು ಗುರುತಿಸಿದಾಗ ಅದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯ. ಇಂತಹದ್ದೇ ಒಂದು...
Loading posts...

All posts loaded

No more posts

error: Content is protected !!