Ad Widget

ಹರಿಹರ ಪಲ್ಲತಡ್ಕ ಗ್ರಾ.ಪಂ. ಮಾಜಿ ಸದಸ್ಯ ನವೀನ್ ಕಟ್ರಮನೆ ನಿಧನ

ಹರಿಹರ ಪಲ್ಲತಡ್ಕ ಗ್ರಾ.ಪಂ. ಮಾಜಿ ಸದಸ್ಯ, ಬಿಜೆಪಿ ಪಕ್ಷದ ಸಕ್ರಿಯ ಸದಸ್ಯ ಐನೆಕಿದು ಗ್ರಾಮದ ನವೀನ್ ಕಟ್ರಮನೆ ಇಂದು ಸಂಜೆ ನಿಧನರಾದರು. ಇಂದು ಬೆಳಿಗ್ಗೆ ಅನಾರೋಗ್ಯಕ್ಕೆ ಒಳಗಾದ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ನಿಧನರಾದರೆಂದು ತಿಳಿದುಬಂದಿದೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಫುಡ್...

ಕಲ್ಚರ್ಪೆ : ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ನಿಂತಿದ್ದ ಟೆಂಪೊ ಒಂದಕ್ಕೆ ಮೈಸೂರು ಕಡೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದದೆ. ಅಪಘಾತದಿಂದ ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿದ್ದು,ಅವರನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದುಬಂದಿದೆ.
Ad Widget

ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ಮಿತ್ರದೇವ ಮಡಪ್ಪಾಡಿಯವರನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಸದಸ್ಯರುಗಳಾದ ಕೇಶವ ಹೊಸೋಳಿಕೆ, ಪುರುಷೋತ್ತಮ ಬದಿಯಡ್ಕ, ಜಯಾನಂದ ಪಟ್ಟೆ, ಶಿವಪ್ರಸಾದ್ ಕಂದ್ರಪ್ಪಾಡಿ, ಸನತ್ ಮುಳುಗಾಡು, ಉಷಾ ಮಲ್ಕಜೆ, ಪ್ರಧಾನ ಅರ್ಚಕ ಪರಮೇಶ್ವರ ಭಟ್ ಉಪಸ್ಥಿತರಿದ್ದರು.

ಸ್ನೇಹ ಶಾಲೆಯಲ್ಲಿ ಡಾ ಚೂಂತಾರು ರವರಿಗೆ ಸನ್ಮಾನ

ವೈದ್ಯಕೀಯ ,ಸಾಮಾಜಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಸೇವೆ ಹಾಗೂ ಕೊಡುಗೆಗಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಡಾ ಮುರಲೀ ಮೋಹನ್ ಚೂಂತಾರು ಮತ್ತು ಡಾ ರಾಜಶ್ರೀ ಮೋಹನ್ ಅವರನ್ನು ಶಾಲು ಹೊದಿಸಿ ಫಲ ಪುಷ್ಪ ಫಲಕ ನೀಡಿ ಸನ್ಮಾನ ಮಾಡಲಾಯಿತು. ಪದ್ಮಶ್ರೀ ಶ್ರೀ ಗಿರೀಶ್ ಭಾರದ್ವಾಜ ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಾ ಚಂದ್ರಶೇಖರ...

ಪ್ರೇಕ್ಷಕರ ಮನಗೆದ್ದು ಯಾನ ಮುಂದುವರೆಸಿದ “ಭಾವ ತೀರ ಯಾನ” – ಪುತ್ತೂರಿನಲ್ಲಿ ಮಾ.3ರಿಂದ ಮಾ.6 ರ ತನಕ ಸಂಜೆ 7.15 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ರಾಜ್ಯಾದ್ಯಾಂತ ಪ್ರೇಕ್ಷಕರ ಮೆಚ್ಚುಗೆ ಪಡೆದು ಹೌಸ್ ಫುಲ್ ಪ್ರದರ್ಶನದೊಂದಿಗೆ ಎರಡನೇ ವಾರದಲ್ಲಿ ಮುಂದುವರೆಯಿತ್ತಿದೆ.   ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 03 ರಿಂದ 06 ರವರೆಗೆ ಸಂಜೆ 7.15...

ಅವೈಜ್ಞಾನಿಕ ಕಾಮಗಾರಿ – ಕುರುಂಜಿಭಾಗ್ ನಲ್ಲಿ ಪಾದಾಚಾರಿಗಳಿಗೆ ನರಕ ದರ್ಶನ

ಕುಡಿಯುವ ನೀರಿನ ಯೋಜನೆಗಾಗಿ ಸುಳ್ಯ ನಗರದಲ್ಲಿ ಪೈಪ್ ಅಳವಡಿಕೆ ಕಾರ್ಯ ಭರದಿಂದ ನಡೆಯುತ್ತಿದ್ದು ಕೆಲವೆಡೆ ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಪಾದಾಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಸಂಕಷ್ಟ ಪಡುವಂತಾಗಿದೆ. ಕುರುಂಜಿಭಾಗ್ ನಲ್ಲಿ ಬೇರೆಡೆ ಜಾಗವಿದ್ದರೂ ರಸ್ತೆ ಮಧ್ಯದಲ್ಲಿಯೇ ಕಾಂಕ್ರಿಟ್ ಒಡೆದು ಪೈಪ್ ಹಾಕಲಾಗುತ್ತಿದೆ. ಇಲ್ಲಿ ಮೊದಲಿದ್ದ ಕುಡಿಯುವ ನೀರಿನ ಪೈಪ್ ಲೈನ್ ಗಳನ್ನು ತುಂಡರಿಸಲಾಗಿದ್ದು...

ಬೇಸಿಗೆಯಲ್ಲಿ ಬೆವರಿಳಿಸಿ ಬೆಂಡಾಗಿಸುವ ನಿರ್ಜಲೀಕರಣ

ನಮ್ಮ ದೇಹದ ತೂಕದ ಸುಮಾರು 60 ಶೇಕಡಾದಷ್ಟು ನೀರಿನಾಂಶ ಇದ್ದು, ದೇಹದ ಹೆಚ್ಚಿ ಎಲ್ಲಾ ಜೈವಿಕ ಕ್ರಿಯೆಗಳಿಗೆ ನೀರು ಅತೀ ಅಗತ್ಯ. ಸುಮಾರು 70 ಕೆ.ಜಿ ತೂಕದ ವ್ಯಕ್ತಿಯಲ್ಲಿ ಸರಿಸುಮಾರು 40 ಲೀಟರ್‍ಗಳಷ್ಟು ಅಂದರೆ ದೇಹದ ತೂಕದ 60 ಶೇಕಡಾದಷ್ಟು ನೀರು ಇರುತ್ತದೆ. ನಮ್ಮ ದೇಹದಲ್ಲಿನ ನೀರು ಬೇರೆ ಬೇರೆ ಕಾರಣಗಳಿಂದ ಬೇರೆ ಬೇರೆ ರೂಪದಲ್ಲಿ...

ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ಕೆ ಎಸ್ ಎಸ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ರಾಷ್ಟ್ರೀಯ ಸೇವಾ ಯೋಜನೆಯು ಮಾ.01 ರಂದು ದತ್ತು ಗ್ರಾಮವಾದ ಬಿಳಿನೆಲೆ ಗ್ರಾಮ ಪಂಚಾಯತ್ ನಲ್ಲಿ ವಾರಾಂತ್ಯ ಶಿಬಿರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಬಿಳಿನೆಲೆ ಗ್ರಾಮ ಪಂಚಾಯಿತಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಾವತಿ ಹಾಗೂ ಕೆ ಎಸ್ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ...

ಮಾ.08 : ಕೇನ್ಯ ಕಾಯರ್ತಡ್ಕದಲ್ಲಿ ಹೊಸಮ್ಮ ದೈವದ ನೇಮೋತ್ಸವ

ಕೇನ್ಯ ಗ್ರಾಮದ ಕಾಯರ್ತಡ್ಕ ಹೊಸಮ್ಮ ದೈವಸ್ಥಾನದಲ್ಲಿ ಮಾ. 08 ಶನಿವಾರದಂದು ಶ್ರೀ ದೈವದ ನೇಮೋತ್ಸವ ನಡೆಯಲಿದೆ.‌ ಅಂದು ರಾತ್ರಿ ಗಂಟೆ 7-00ಕ್ಕೆ ಸರಿಯಾಗಿ ಶ್ರೀ ಹೊಸಮ್ಮ ದೈವದ ಭಂಡಾರ ಹಿಡಿದು ಶ್ರೀ ದೈವಕ್ಕೆ 28ನೇ ವರ್ಷದ ನೇಮೋತ್ಸವವು ಕೇನ್ಯ-ಕಾಯೇರಡ್ಕದಲ್ಲಿ ನಡೆಯಲಿದೆ ಎಂದು ಕಿಶೋರ್ ರೈ ಕಂಡೆಬಾಯಿ ತಿಳಿಸಿದ್ದಾರೆ.

ಲ್ಯಾಂಪ್ಸ್ ಸೊಸೈಟಿಯಲ್ಲಿ 15 ವರ್ಷದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ – ಅವಿರೋಧ ಆಯ್ಕೆಯಲ್ಲಿ ಕಾಂಗ್ರೆಸ್ ಗೆ 3 ಹಾಗೂ ಬಿಜೆಪಿ ಗೆ 2 ಸ್ಥಾನ – ಚುನಾವಣೆ ನಡೆದ 4 ಕ್ಷೇತ್ರಗಳ ಪೈಕಿ ಬಿಜೆಪಿ & ಕಾಂಗ್ರೆಸ್ ಗೆ ತಲಾ ಎರಡು ಸ್ಥಾನ

ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶದ ಸಹಕಾರ ಸಂಘ ( ಲ್ಯಾಂಪ್ಸ್) ಇದರ 9 ಸ್ಥಾನಗಳ ಪೈಕಿ 5 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು, ಮಾ.1 ರಂದು 4 ಸ್ಥಾನಗಳಿಗೆ ಚುನಾವಣೆ ನಡೆದು ‌ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ತಲಾ ಎರಡು ಸ್ಥಾನಗಳಲ್ಲಿ ವಿಜೇತರಾಗಿದ್ದಾರೆ. ಅವಿರೋಧ ಆಯ್ಕೆಯಾದ ಸ್ಥಾನಗಳ ಪೈಕಿ ಕಾಂಗ್ರೆಸ್...
Loading posts...

All posts loaded

No more posts

error: Content is protected !!