- Tuesday
- September 8th, 2026
ಐವರ್ನಾಡಿನಲ್ಲಿ ಗ್ರಾಮ ಪಂಚಾಯತ್ ಹಾಗೂ ಪ್ರಾ.ಕೃ.ಪ.ಸ.ಸಂಘದ ಸಹಯೋಗದೊಂದಿಗೆ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಧ್ವಜರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಪಿಡಿಓ, ಮುಖ್ಯಕಾರ್ಯನಿರ್ವಹಣಾಧಿಕಾರಿ, ಗ್ರಾ.ಪಂ.ಮಾಜಿ ಸದಸ್ಯರು, ಸಹಕಾರಿ ಸಂಘದ ನಿರ್ದೆಶಕರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇದರ ಆಶ್ರಯದಲ್ಲಿ ಹಾಗೂ ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಮತ್ತು ಯುವಕ ಮಂಡಲ (ರಿ.), ಮಡಪ್ಪಾಡಿ ಇವರ ಸಹಯೋಗದೊಂದಿಗೆ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಮಡಪ್ಪಾಡಿ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸದಾನಂದ ಬಲ್ಕಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಮತ್ತು ದತ್ತಿನಿದಿ ವಿತರಣೆ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ರಾಮಚಂದ್ರ ಕೆ.ಬಿ ನೆರವೇರಿಸಿದರು. ಈ ಸಂದರ್ಭದಲ್ಲಿ ಜತೆಕಾರ್ಯದರ್ಶಿ ಜಯರಾಮ ರೈ ಜಾಲ್ಸೂರು, ನಿರ್ದೇಶಕರಾದ ಶ್ಯಾಂಕುಮಾರ್ ಬೆನಕ, ಗಂಗಾಧರ ಗೌಡ ಕಾಳಮನೆ, ನಾರಾಯಣ ಗೌಡ ಬೊಮ್ಮೆಟ್ಟಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ...
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ.ಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ “ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಗಾಂಧೀಜಿಯವರು ಹಾಗೂ ಸ್ವಾತಂತ್ರ್ಯಕ್ಕಾಗಿ ದುಡಿದ ಮಹನೀಯರುಗಳು, ಸೇನಾನಿಗಳನ್ನು ನಾವು ಸ್ಮರಿಸಿಕೊಳ್ಳುವುದು ಅತ್ಯವಶ್ಯ. ಗಾಂಧೀಜಿಯವರ ಸರಳತೆ ಹಾಗೂ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ...
ಕ್ಲಾಸಿಕ್ ಸ್ಪೋರ್ಟ್ಸ್ ಮುಚ್ಚಿಲ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜರೋಹಣ ಕಾರ್ಯಕ್ರಮ ನಡೆಯಿತು. ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ವಾಸುದೇವ ನಡ್ಕ ಧ್ವಜಾರೋಹಣ ನೆರವೇರಿಸಿದರು.
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಾಧಿಕಾರಿಗಳಾದ ಡಾ| ಸೌರಭ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಮೋನಪ್ಪ ಕೊಳಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)
ಬೆಳ್ಳಾರೆ: 80 ನೇ ಸ್ವಾತಂತ್ಯ್ರ ದಿನಾಚರಣೆಯ ಪ್ರಯುಕ್ತ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಬ್ಲಾಕ್ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನಡೆಯುತು. ಎಸ್ ಡಿ ಪಿ ಐ ಬೆಳ್ಳಾರೆ ಬ್ಲಾಕ್ ಅದ್ಯಕ್ಷಹಮೀದ್ ಮರಕ್ಕಡ ದ್ವಜಾರೋಹಣ ನೆರವೇರಿಸಿದರು.ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿ ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟ ಗಾರರನ್ನು ನೆನಪಿಸುತ್ತಾ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿದರು.ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ. ಶುಭಹಾರೈಸಿದರು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ಎಸ್., ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸದಸ್ಯ ನಂದರಾಜ್...
ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ವಿವೇಕಾನಂದ ವೃತ್ತದ ಬಳಿ ಇರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿ ನಿಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಗವತಿ ಯುವ ಸೇವಾ ಸಂಘ, ಬೂಡು ಕೇರ್ಪಳ ಇದರ ಅಧ್ಯಕ್ಷರಾದ ಸುನೀಲ್ ಕೇರ್ಪಳ ಅವರು...
ಅಡ್ಯಡ್ಕ ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಹಾಗೂ ಶ್ರೀ ದೇವಿ ಮಹಿಳಾ ಸಂಘದ ಜಂಟಿ ಆಶ್ರಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಅಡ್ಯಡ್ಕದ ಗಾಂಧಿ ಮೈದಾನದಲ್ಲಿ ಆಚರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯದ ಮೇಲ್ವಿಚಾರಕ ಹರೀಶ್ ಆಚಾರ್ಯ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ...
Loading posts...
All posts loaded
No more posts
