ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ “ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ”

ಅಂತಾರಾಷ್ಟ್ರೀಯ ಲಯನ್ಸ್, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಆ.21 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ” ನಡೆಯಿತು.ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ| ಶ್ರೀಮತಿ ವಿಮಲಾ ರಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯದಾಸ್ ವಾಡ್ಯಪ್ಪನಮನೆ ಹಾಗೂ ಶಾಲಾ...

ನಿಧನ : ಬಾಲಕೃಷ್ಣ ಗೌಡ ಚಿದ್ಗಲ್ಲು

ಬಾಲಕೃಷ್ಣ ಗೌಡ ಚಿದ್ಗಲ್ಲು ಹೊಸೊಳಿಕೆ(73) ಇವರು ಬುಧವಾರ ಸಂಜೆ 7:00 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಹೊಸೊಳಿಕೆ ಸ್ವಗೃಹದಲ್ಲಿ  ನಿಧನರಾಗಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿರುತ್ತಾರೆ.
Ad Widget

ಸುಳ್ಯದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದ ಕೇರ್ಪಳದ ಬಾಡಿಗೆ ಮನೆಯೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸುಳ್ಯದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತರೊಂದಿಗೆ ವಾಸವಿದ್ದ ಅಭಿಜಾರ್ಜ್ ಇಂದು ಬೆಳಗ್ಗೆ ತಾನು ಮಲಗಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರ್ಪಳದ ಬಾಲಣ್ಣ ಎಂಬವರ ಕಟ್ಟಡದಲ್ಲಿ ಈ ಘಟನೆ ನಡೆದಿದೆ. ಅಭಿಜಾರ್ಜ್ ವಿರಾಜಪೇಟೆ ಮೂಲದವರು ಎಂದು ತಿಳಿದುಬಂದಿದೆ....

ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿದ ಮರಗಳ ತೆರವು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರಕತದ ಕಿಂಡಿ ಅಣೆಕಟ್ಟಿಗೆ ಮಳೆಯ ಸಂದರ್ಭದಲ್ಲಿ ಭಾರಿ ಗಾತ್ರದ ಮರಗಳು ಬಂದು ಅಡ್ಡಲಾಗಿ ನಿಂತು ಸಮಸ್ಯೆಯಾಗಿರುವ ಬಗ್ಗೆ ವಿಪತ್ತು ನಿರ್ವಹಣಾ ಘಟಕಕಕ್ಕೆ ಮಾಹಿತಿ ದೊರೆತು.ಅದನ್ನು ಆ.20 ರಂದು ಅರಣ್ಯ ಇಲಾಖೆಯ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ತೆರವುಗೊಳಿಸುವ ಕಾರ್ಯವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸುಬ್ರಹಣ್ಯ...

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15 ರಂದು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ ಸೂಂತೋಡು ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ.ಎ, ಉಪಾಧ್ಯಕ್ಷರಾದ ಶ್ರೀಮತಿ ಚಿತ್ರಕುಮಾರಿ, ಸದಸ್ಯರಾದ ಪ್ರಶಾಂತ್ ಪಾನತ್ತಿಲ, ಹರೀಶ್ ಉಬರಡ್ಕ, ಶ್ರೀಮತಿ ಭವಾನಿ ಮೂರ್ಜೆ, ಶ್ರೀಮತಿ ಮಮತಾ ಕುದ್ಪಾಜೆ, ಅನಿಲ್ ಬಳ್ಳಡ್ಕ,...

ಮಂಗಳೂರಿನ ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್ ನ  ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಾತ್ವಿಕ್ ಮುಳಿಯ ಆಯ್ಕೆ

ಮಂಗಳೂರಿನ ಊರ್ವಸ್ಟೋರ್ ನಲ್ಲಿರುವ ಸ್ವಸ್ತಿಕ್ ನ್ಯಾಷನಲ್ ಬಿಸಿನೆಸ್ ಸ್ಕೂಲ್ ನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಅವರು ಆಯ್ಕೆಯಾಗಿದ್ದಾರೆ. ಎ.ಬಿ.ವಿ.ಪಿ ಬೆಂಬಲದಿಂದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.  ಇವರು ಸುಳ್ಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಮುಳಿಯ ಕೇಶವ ಭಟ್ ರವರ ಪುತ್ರ.

ಕಡಬ : ಕಾಂಗ್ರೆಸ್ ಜಯಭೇರಿ ; ಸುಳ್ಯದಲ್ಲಿ ಸಂಭ್ರಮಾಚರಣೆ

ಕಡಬ ಪಟ್ಟಣ ಪಂಚಾಯತ್ ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದ ಹಿನ್ನೆಲೆಯಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡರು ಇಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮಾಚಾರಣೆ ನಡೆಸಿದರು. ದ.ಕ ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ,  ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ,...

ಕಡಬ : ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಅಭಿನಂದನೆ

ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ದಯಾನಂದ ( ಪಿಜಕ್ಕಳ) , ಅಕ್ಷತಾ (ಕೋಡಿಂಬಾಳ),ಕುಸುಮಾ ( ಕೋಡಿಬೈಲು), ಗುಣವತಿ ರಘುರಾಮ್ (ದೊಡ್ಡಕೊಪ್ಪ), ಮೋಹನ (ಮಜ್ಹಾರು) ಗೆಲುವು ಸಾಧಿಸಿದ್ದರು. ಗೆಲುವು ಸಾಧಿಸಿದ ಅಭ್ಯರ್ಥಿಗಳನ್ನು ಶಾಸಕಿ ಭಾಗೀರಥಿ ಮುರುಳ್ಯ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲದ ಮಾಜಿ ಅಧ್ಯಕ್ಷ ಹರೀಶ್...

ಗಾಂಧಿನಗರ : ಕೆ.ಪಿ.ಎಸ್ ನಲ್ಲಿ ತಾಲೂಕು ಮಟ್ಟದ ಕಾಲೇಜು ವಿಭಾಗದ ಫುಟ್ಬಾಲ್ ಪಂದ್ಯಾಟದ ಉದ್ಘಾಟನೆ

ಸುಳ್ಯ : ಗಾಂಧಿನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ  ತಾಲ್ಲೂಕು ಮಟ್ಟದ ಕಾಲೇಜು ವಿಭಾಗದ ಪುಟ್ಬಾಲ್ ಪಂದ್ಯಾಟದ ಉದ್ಘಾಟನೆ ಆ.20 ರಂದು ನಡೆಯಿತು.  ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರ ಪಂಚಾಯತ್ ಸದಸ್ಯರಾದ ವೆಂಕಪ್ಪ ಗೌಡ, ಕೆ.ಪಿ.ಎಸ್ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ,...

ಸುಳ್ಯ ಮೊಸರು ಕುಡಿಕೆ ಉತ್ಸವ : ಪ್ರಥಮ ಶಾಸ್ತಾವು ರೆಂಜಾಳ, ದ್ವಿತೀಯ ಯುವ ಕೇಸರಿ ಮುಳ್ಯ ಅಟ್ಲೂರು, ತೃತೀಯ ಹೆಚ್.ಟಿ.ಎಂ.ಸಿ. ಸುಳ್ಯ

ಸುಳ್ಯ : ವಿಶ್ವ ಹಿಂದೂ ಪರಿಷತ್, ಬಜರಂಗದಳ, ಮಾತೃಶಕ್ತಿ ದುರ್ಗಾ ವಾಹಿನಿ ಸುಳ್ಯ ಪ್ರಖಂಡ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಹಿಂದೂ ಪರಿಷತ್‌ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ 12ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ.19 ರಂದು ಸುಳ್ಯದಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು.ಮೊಸರುಕುಡಿಕೆ...
Loading posts...

All posts loaded

No more posts

error: Content is protected !!