ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜಾಲ್ಸೂರು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಎಂ. ದೀಪಬೆಳಗಿಸಿ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು. ಅತಿಥಿಗಳಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಜಯರಾಮ ರೈ , ನಿರ್ದೇಶಕ ಮೋನಪ್ಪ ಎಂ, ಸುಂದರ...

ಅರಂತೋಡು : ಪ್ರಾಥಮಿಕ ಶಾಲಾ ಬಳಿ ರಸ್ತೆಗೆ ಬಾಗಿದ್ದ ಅಪಾಯಕಾರಿ ಮರ ತೆರವು

ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ರಸ್ತೆಗೆ ಬಾಗಿ ಮರವೊಂದು ಅಪಾಯ ಆಹ್ವಾನಿಸುತ್ತಿದ್ದು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಸಂಚರಿಸುವ ರಸ್ತೆಯಲ್ಲಿರುವ ಮರವನ್ನು  ತೆರವುಗೊಳಿಸುವಂತೆ ಒತ್ತಾಯಿಸಿ ಅಮರ ಸುದ್ದಿ ವರದಿ ಪ್ರಕಟಿಸಿತ್ತು. ಇದಕ್ಕೆ ಸ್ಪಂದಿಸಿದ ಆರಣ್ಯ ಇಲಾಖೆ ಅಪಾಯ ಅಹ್ವಾನಿಸುತ್ತಿದ್ದ ಮರವನ್ನು ತೆರಗೊಳಿಸಿದ್ದಾರೆ
Ad Widget

ಕೊಲ್ಲಮೊಗ್ರು : ಕೆ.ವಿ.ಜಿ ಪ್ರೌಢಶಾಲೆಯ ಶಿಕ್ಷಕರಾದ ವೆಂಕಟ್ರಮಣ ಕೊಪ್ಪಡ್ಕ ಸೇವಾ ನಿವೃತ್ತಿ

ಕೊಲ್ಲಮೊಗ್ರು ಕೆ.ವಿ.ಜಿ ಅನುದಾನಿತ ಪ್ರೌಢಶಾಲೆಯ ಸಹಶಿಕ್ಷಕರಾದ ಕೆ.ಕೆ ವೆಂಕಟ್ರಮಣ ಕೊಪ್ಪಡ್ಕ ರವರು ಸೇವಾ ನಿವೃತ್ತಿಯನ್ನು ಹೊಂದಿದ್ದು, ಸುಧೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಇವರು ಕಲ್ಮಕಾರು ಗ್ರಾಮದ ಕೊಪ್ಪಡ್ಕ ದಿ| ಕುಶಾಲಪ್ಪ.ಕೆ.ಎಸ್ ಹಾಗೂ ದಿ| ಹೊನ್ನಮ್ಮ ದಂಪತಿಗಳ ಪುತ್ರ.ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ ಶಾಲೆ ಕಲ್ಮಕಾರು ಇಲ್ಲಿ ಪಡೆದಿದ್ದು, ಪ್ರೌಢಶಾಲಾ ಶಿಕ್ಷಣವನ್ನು...

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಛಾಯಾ ಮಾನಸ ಗಿಡ ವಿತರಣೆ

ಸುಬ್ರಹ್ಮಣ್ಯ ಮೇ 30 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಛಾಯಾ ಮಾನಸ ಗಿಡಗಳನ್ನು ವಿತರಣೆ ಮಾಡಲಾಯಿತು. ಛಾಯಾ ಮಾನಸ ಪ್ಲಾಂಟ ಗಳನ್ನು ಮಾಡುವುದರಿಂದ ಇದರ ಪ್ರಾಮುಖ್ಯತೆ ಏನೆಂದರೆ ಇದರಲ್ಲಿ ಮ್ಯಾಗ್ನಿಷಿಯಮ್, ಕ್ಯಾಲ್ಸಿಯಂ ಹಾಗೂ ಕಬ್ಬಿನಾಂಶಗಳಿರುತ್ತವೆ. ಇದು ಡಯಾಬಿಟಿಸ್ ರೋಗಿಗಳಿಗೆ ಅತ್ಯುತ್ತಮವಾದ ಔಷಧ. ಅಲ್ಲದೆ ಇದರಲ್ಲಿ ರೋಗ ನಿರೋಧಕ...

ಬಾಳಿಲ:ಪ್ರತಿಭಾ ಪುರಸ್ಕಾರ 2025

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇಲ್ಲಿ ಮೇ 30ರಂದು 2024 -25ನೇ ಎಸ್ ಎಸ್ ಎಲ್ ಸಿ ಬ್ಯಾಚಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ವೇದಿಕೆಯಲ್ಲಿ ಸಭಾಧ್ಯಕ್ಷತೆಯನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ( ರಿ.) ಬಾಳಿಲ ಇದರ ಅಧ್ಯಕ್ಷರಾದ ಯು ರಾಧಾಕೃಷ್ಣರಾವ್ ವಹಿಸಿದ್ದರು. ರಾಜ್ಯಮಟ್ಟದಲ್ಲಿ ಹತ್ತನೇ ರಾಂಕ್ ಗಳಿಸಿದ ಉತ್ತಮ್ ಕೆ ಇವರನ್ನು ಸನ್ಮಾನಿಸಲಾಯಿತು. ವಿದ್ಯಾಸಂಸ್ಥೆಯ ಹಿರಿಯ...

ದಕ್ಷಿಣ ಕನ್ನಡ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಸಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಮುಂದೆ ಇದೇ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯು ತುರ್ತು ಕ್ರಮಗಳನ್ನು ಕೈಗೊಂಡಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ,...

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ವ್ಯಾಪಕ ಮಳೆ ; ಇಂದು(ಮೇ.30) ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು(ಮೇ.30) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಣಿಲ : ಮಾತೃಭೂಮಿ ಯುವ ವೇದಿಕೆಯ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಮಾಣಿಲ ಗ್ರಾಮದ ಸುಮಾರು 150 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮ ಗಣ್ಯರ ಸಮ್ಮುಖದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ.30ರಿಂದ ಉಪಹಾರ ಪ್ರಸಾದದ ವ್ಯವಸ್ಥೆ ಆರಂಭ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಭಕ್ತರಿಗೆ ಮದ್ಯಾಹ್ನ ಮತ್ತು ರಾತ್ರಿ ಅನ್ನದಾಸೋಹ ಭೋಜನ ಪ್ರಸಾದದ ವ್ಯವಸ್ಥೆ ಜಾರಿಯಲ್ಲಿದ್ದು, ಇದೀಗ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಿಗ್ಗಿನ ಉಪಹಾರ ಪ್ರಸಾದದ ವ್ಯವಸ್ಥೆಯನ್ನು ಮೇ.30 ರಂದು ಪೂರ್ವಾಹ್ನ 8:00 ಗಂಟೆಗೆ ವಿದ್ಯುಕ್ತವಾಗಿ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು...

ಕಲ್ಲುಗುಂಡಿ : ವಿದ್ಯುತ್ ಶಾಕ್ – ಲೈನ್ ಮ್ಯಾನ್ ಗೆ ಗಂಭೀರ ಗಾಯ

ಕಲ್ಲುಗುಂಡಿ  ಕಡಪಾಲದ ಸಮೀಪ  ಕರೆಂಟ್ ಲೈನ್ ಸರಿ ಮಾಡುತ್ತಿದ್ದ ಸಂದರ್ಭದಲ್ಲಿ ಲೈನ್ ಮ್ಯಾನ್ ನವೀನ್ ಎಂಬವರಿಗೆ ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ಘಟನೆ ಮೇ.26 ರಂದು ಮಧ್ಯಾಹ್ನ ನಡೆದಿದೆ. ವಿದ್ಯುತ್ ಶಾಕ್ ಹೊಡೆದು ಕೆಳಗೆ ಬಿದ್ದ ನವೀನ್ ಅವರನ್ನು ಸ್ಥಳೀಯರು  ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Loading posts...

All posts loaded

No more posts

error: Content is protected !!