ವಿದ್ಯಾಮಾತಾ ಅಕಾಡೆಮಿಯಲ್ಲಿ ಕೃಷ್ಣ ಲೀಲೆ: 83ಕ್ಕೂ ಅಧಿಕ ಮುದ್ದು ಕೃಷ್ಣರ ಸಂಭ್ರಮ

ಪುತ್ತೂರು:“ಆರು ವರ್ಷದೊಳಗಿನ ಮಕ್ಕಳು ಸಾಕ್ಷಾತ್ ಭಗವಂತನ ಸ್ವರೂಪ ಎಂದು ನಾವು ಭಾವಿಸುತ್ತೇವೆ. 83 ಮುದ್ದು ಕೃಷ್ಣರ ಆಗಮನದಿಂದ ವಿದ್ಯಾಮಾತಾ ಅಕಾಡೆಮಿಯ ಎಲ್ಲಾ ಯೋಜನೆ–ಯೋಚನೆಗಳಿಗೆ ಕೃಷ್ಣ ಪರಮಾತ್ಮನ ಅನುಗ್ರಹ ದೊರೆತಂತಾಗಿದೆ. ಪ್ರತಿಯೊಬ್ಬ ಮುದ್ದು ಕೃಷ್ಣ ಹಾಗೂ ಯಶೋಧ–ಕೃಷ್ಣರಿಗೂ ಬಹುಮಾನ ನೀಡುವುದು ವಿದ್ಯಾಮಾತಾ ಅಕಾಡೆಮಿಯ ಹೆಗ್ಗಳಿಕೆ,” ಎಂದು ಭಾಗ್ಯೇಶ್ ರೈ ಹೇಳಿದರು.ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳದ...

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯ ಕೃಷಿಕರಿಗೆ ಕಾಫಿ, ಕಾಳುಮೆಣಸು ಗಿಡ ವಿತರಣೆ

ಸುಳ್ಯ : ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆ ಹಾನಿಗೊಳಗಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಪರ್ಯಾಯ ಬೆಳೆಯಾಗಿ ಕಾಫಿ ಮತ್ತು ಕಾಳುಮೆಣಸು ಬೆಳೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಗಿಡಗಳನ್ನು ವಿತರಿಸಲಾಗುತ್ತಿದೆ ಎಂದು ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿಕ್ರಂ ಅಡ್ಪಂಗಾಯ ಹೇಳಿದರು. ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಸದಸ್ಯ ಕೃಷಿಕರಿಗೆ...
Ad Widget

ಅ.16ರಿಂದ 24ರವರೆಗೆ ಸುಳ್ಯದಲ್ಲಿ 55ನೇ ವರ್ಷದ ಸುಳ್ಯ ದಸರಾ | ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ: ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ದಸರಾ ಉತ್ಸವ ಸಮಿತಿ ಹಾಗೂ ಸುಳ್ಯ ತಾಲೂಕು ಶ್ರೀ ಶಾರದಾಂಬ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುವ 55ನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 2ರಂದು ಶ್ರೀ ಚೆನ್ನಕೇಶವ ದೇವಾಲಯದಲ್ಲಿ ನಡೆಯಿತು. ಚೆನ್ನಕೇಶವ...

ಸೆ.08ರಂದು ಸುಳ್ಯದಲ್ಲಿ 13ನೇ ವರ್ಷದ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ

ಸುಳ್ಯ : ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಸ್ತ್ರೀ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಸೆ.8ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದರು....

ಬೇಂಗಮಲೆ : ಕಾರು ಪಲ್ಟಿ – ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯದಿಂದ ಏನೆಕಲ್ಲಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.‌

ಇಂದು ಸೆಪ್ಟೆಂಬರ್ 02 – ವಿಶ್ವ ತೆಂಗಿನಕಾಯಿ ದಿನ

ಇತಿಹಾಸ : 1969, ಸೆಪ್ಟೆಂಬರ್ 2 ರಂದು UN-ESCAP ಆಶ್ರಯದಲ್ಲಿ ಏಷ್ಯನ್ ಅಂಡ್ ಪೆಸಿಫಿಕ್ ಕಮ್ಯುನಿಟಿ (APCC) ಸಂಸ್ಥೆಯನ್ನು ಇಂಡೋನೇಷ್ಯಾದ ಜಕಾರ್ತಾದಲ್ಲಿ ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ 2009 ರಿಂದ ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗಿನಕಾಯಿ ದಿನ ಆಚರಿಸಲು ಶುರು ಮಾಡಿದರು. ಭಾರತ, ಇಂಡೋನೇಷ್ಯಾ, ಫಿಲಿಪೈನ್ಸ್, ಮಲೇಷ್ಯಾ, ಥಾಯ್ಲೆಂಡ್ ಸೇರಿದಂತೆ 18...

ಇಂದಿನ(ಸೆಪ್ಟೆಂಬರ್ 02) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಮಾರುಕಟ್ಟೆಯಲ್ಲಿ ದಿಢೀರ್ ಕುಸಿತ ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ಧಾರಣೆಯಲ್ಲಿ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 02 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ದ್ವಾದಶ ರಾಶಿಗಳ ದಿನಭವಿಷ್ಯ – ದಿನಾಂಕ : 02-09-2026 ಬುಧವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ನಿಮ್ಮ ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಉದ್ಯೋಗದಲ್ಲಿರುವ ಜನರು ಅಧಿಕಾರಿಗಳ ಮಾತುಗಳನ್ನು ಎಚ್ಚರಿಕೆಯಿಂದ ಆಲಿಸಬೇಕು ಮತ್ತು ಅರ್ಥಮಾಡಿಕೊಳ್ಳಬೇಕು... ಗಮನಿಸಿ:-ಇಂದುಯಾರಿಗೂ ಸಾಲ ಕೊಡಬೇಡಿ... ಪರಿಹಾರ:-ನಿಮ್ಮಕುಲದೇವರ ಪ್ರಾರ್ಥನೆ ಮಾಡಿ. 02)ವೃಷಭರಾಶಿ : ಇಂದು...

ಸುಳ್ಯದಲ್ಲಿ ತಾಲೂಕು ಭಜನಾ ಪರಿಷತ್ ಪದಾಧಿಕಾರಿಗಳ ಸಭೆ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್‌ನ ತಾಲೂಕು ಪದಾಧಿಕಾರಿಗಳ ಸಭೆ ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಅಧ್ಯಕ್ಷತೆ ವಹಿಸಿದ್ದರು. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....

ಕವನ್ (ಕಿಶನ್) ಮಾವಿನಕಟ್ಟೆಯವರಿಗೆ ಸೆ.4ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಗ್ರಾಮದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಜತೆಗೆ ಜಾತಿ ಧರ್ಮ ಭೇದವಿಲ್ಲದೇ ಬೆರೆಯುತ್ತಿದ್ದ, ಕ್ರಿಯಾಶೀಲ ವ್ಯಕ್ತಿತ್ವದ ಪರೋಪಕಾರಿ ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಕವನ್ (ಕಿಶನ್) ಮಾವಿನಕಟ್ಟೆಯವರ ನಿಧನಕ್ಕೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ.ಸೆಪ್ಟೆಂಬರ್ 4ರಂದು ಬೆಳಗ್ಗೆ 9 ಗಂಟೆಗೆ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು...
Loading posts...

All posts loaded

No more posts

error: Content is protected !!