ಕೊಲ್ಲಮೊಗ್ರ : ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಬಾಲಸುಬ್ರಹ್ಮಣ್ಯ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರ ಗ್ರಾಮ ಪಂಚಾಯತ್ ನಲ್ಲಿ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಾಲಸುಬ್ರಹ್ಮಣ್ಯ ಎನ್.ಜಿ. ಕೊಳಗೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮಯ್ಯ ಕೆ. ಕೊಂದಾಳ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮಯ್ಯ ಕೆ.ಕೊಂದಾಳ ಹಿಂಪಡೆದ ಹಿನ್ನೆಲೆಯಲ್ಲಿ ಬಾಲಸುಬ್ರಹ್ಮಣ್ಯ ಭಟ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಭಟ್ ಎನ್.ಜಿ....

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಪೂರ್ವಾಹ್ನದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಅಪರಾಹ್ನ ಸಭಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ (ರಿ.) ನಾಲ್ಕೂರ್ ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ,...
Ad Widget

ಕಾಮಗಾರಿ ಸಂಪೂರ್ಣಗೊಂಡರೂ ಉದ್ಘಾಟನೆ ಭಾಗ್ಯ ಕಾಣದ ಸುಬ್ರಹ್ಮಣ್ಯ ಠಾಣೆ

ಬಹುದಿನಗಳ ಬೇಡಿಕೆಯಾಗಿದ್ದ ಕುಕ್ಕೆ ಸುಬ್ರಹ್ಮಣ್ಯದ ನೂತನ ಪೋಲಿಸ್ ಠಾಣೆಯ ಕಟ್ಟಡ ಕಾಮಗಾರಿ ಪೂರ್ಣಗೊಂಡರೂ, ಇನ್ನು ಉದ್ಘಾಟನೆ ಕಾಣದೇ ಪೋಲಿಸರು ಶಿಥಿಲಾವಸ್ಥೆಯಲ್ಲಿರುವ ಹಳೆಯ ಕಟ್ಟಡದಲ್ಲಿಯೇ ಕಾಲ ಕಳೆಯಬೇಕಾಗಿದೆ. ಈ ಹಿಂದೆ ಶಾಸಕರು , ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟನೆಗೆ ದಿನ ನಿಗದಿಯಾದರೂ ಮತ್ತೆ ಮತ್ತೆ ಬದಲಾವಣೆ ಆಗುತ್ತಿದ್ದು, ಸುಬ್ರಹ್ಮಣ್ಯ ಚಂಪಾಷಷ್ಠಿಗೆ ಮೊದಲಾದರೂ ನೂತನ ಕಟ್ಟಡ...

ತಡೆಬೇಲಿಗೆ ಗುದ್ದಿದ ಟಾಟಾ ವಾಹನ, ಇಬ್ಬರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುಳ್ಯದ ಹಳೆ ಬಸ್ ನಿಲ್ದಾಣದ ಬಳಿಯ ತಡೆಬೇಲಿಗೆ ಟಾಟಾ ಗಾಡಿಯೊಂದು ಢಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಈ ಘಟನೆಯು ಮುಂಜಾನೆ ಮೂರು ಗಂಟೆ ಸುಮಾರಿಗೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು ಟಾಟಾ ವಾಹನದಲ್ಲಿ ನಾಲ್ವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ಗಾಯಗೊಂಡವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ನಡುಗಲ್ಲು ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಹೊಂಬೆಳಕು ಬಳಗ ನಾಲ್ಕೂರು ವತಿಯಿಂದ 'ಸ್ವಚ್ಛ ಪರಿಸರ ' ವಿಷಯವಾಗಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ ಚಿತ್ರ ಬರೆಯುವ ಸ್ಪರ್ಧೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗಕ್ಕೆ' ಪ್ರಬಂಧ ಸ್ಪರ್ಧೆ ' ಏರ್ಪಡಿಸಲಾಗಿತ್ತು. ನಿಂಬೆ...

ಸುಳ್ಯದ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಿವಿಧ ಸ್ಪರ್ಧೆ

ಸುಳ್ಯದ ಜ್ಯೋತಿ ವೃತ್ತದ ಬಳಿ ಇರುವ ಸ. ಮಾ. ಹಿ. ಪ್ರಾ. ಶಾಲೆಯಲ್ಲಿ ನ.14ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಕುಮಾರಿ ಚಿರಸ್ವಿಯವರು ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಉಪನಾಯಕ ಮೋಕ್ಷಿತ್, ಗೃಹಮಂತ್ರಿ ಮಹಮ್ಮದ್ ಅಷ್ಬಾಕ್, ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷರಾದ ರವಿರಾಜ್ ಅಡ್ಕಾರ್ ಉಪಸ್ಥಿತರಿದ್ದರು. ಮಕ್ಕಳಿಗೆ...

ಪಂಬೆತ್ತಾಡಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಂಬೆತ್ತಾಡಿ ಪಂಚಶ್ರೀ ಯುವಕ ಮಂಡಲ (ರಿ)ಪಂಬೆತ್ತಾಡಿ. ಅಕ್ಷತಾ ಯುವತಿ ಮಂಡಲ (ರಿ) ಪಂಬೆತ್ತಾಡಿ. ಅಮೃತಾ ಮಹಿಳಾ ಮಂಡಲ(ರಿ)ಪಂಬೆತ್ತಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಪಂಬೆತ್ತಾಡಿ ಶಾಲೆಯಲ್ಲಿ ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿಗಳು ನೆರವೇರಿಸಿದರುಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿನಾಯಕಿ ಧಕ್ಷಾ ಎಂ ವಹಿಸಿದ್ದರು ಜಂಟಿ ಸಂಸ್ಥೆಯ ಪರವಾಗಿ ಶಾಲಾ ಮಕ್ಕಳಿಗೆ ಮತ್ತು...

ಎಣ್ಮೂರು: ಮಕ್ಕಳ ದಿನಾಚರಣೆ ಅಂಗವಾಗಿ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳ ಫೋಟೋ ಸ್ಪರ್ಧೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿನ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಫೋಟೋ ಸ್ಪರ್ಧೆಯನ್ನು ನಡೆಸಲಾಯಿತು. ಸ್ಕೌಟ್ಸ್ ಗೈಡ್ಸ್ ವಿಭಾಗದ 21 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ 9Aನೇ ತರಗತಿಯ ಕೃತಿಕಾ ರೈ ಪ್ರಥಮ, 10ನೇ ತರಗತಿಯ ಮಾನ್ಯ ಎನ್.ಎಸ್ ದ್ವಿತೀಯ ಮತ್ತು 9Bನೇ ತರಗತಿಯ ಅಬಿರಾ ತೃತೀಯ ಬಹುಮಾನ ಪಡೆಡುಕೊಂಡರು....

ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ವತಿಯಿಂದ ಜೇಸಿಐ ಬೆಳ್ಳಾರೆಯ ಸಹಯೋಗದಲ್ಲಿ ಮಕ್ಕಳ ದಿನಾಚರಣೆ ಪೆರುವಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಪುಟಾಣಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಪೆರುವಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಬಹುಮಾನ ವಿತರಿಸಿದರು. ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಕೊಡುಗೆಯಾಗಿ...

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ರೆಂಜಾಳ ಶಾಸ್ತಾವು ಯುವಕ ಮಂಡಲ

ಕಸ್ತೂರಿ ರಂಗನ್ ವರದಿ ವಿರೋಧಿಸಿ, ಗಡಿ ಗುರುತು ಹಾಗೂ ಜಂಟಿ ಸರ್ವೇ ನಡೆಸಬೇಕು ಎನ್ನುವ 7 ಪ್ರಮುಖ ಉದ್ದೇಶಗಳನ್ನಿಟ್ಟಕೊಂಡು ಗುಂಡ್ಯದಲ್ಲಿ ನ.15ರಂದು ನಡೆಯಲಿರುವ ಬೃಹತ್ ಪ್ರತಿಭಟನೆಗೆ ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಬೆಂಬಲ ವ್ಯಕ್ತಪಡಿಸಿದ್ದು, ಪಕ್ಷಾತೀತವಾಗಿ, ಜಾತ್ಯಾತೀತವಾಗಿ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ರಾಜೇಶ್ ಬೇರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!