“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಜು.20) ದಿಂದ ಶನಿವಾರ(ಜು.25) ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ – ಅಡಿಕೆಯ ಉಪ ಉತ್ಪನ್ನಗಳಲ್ಲಿ ಕುಸಿತ ; ರಬ್ಬರ್ ಧಾರಣೆಯಲ್ಲಿ ಚೇತರಿಕೆ! ; ಕಾಳುಮೆಣಸು ಹಾಗೂ ಕೊಬ್ಬರಿ ದರದಲ್ಲಿ ಇಳಿಕೆ!

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಜುಲೈ 20 ಸೋಮವಾರದಿಂದ ಜುಲೈ 25...

ಜು-26 : ಮಂಗಳೂರಿನ ಚುಟುಕು ಕವಿಗೋಷ್ಠಿಯಲ್ಲಿ ಎಂ.ಎ.ಮುಸ್ತಫಾ ಬೆಳ್ಳಾರೆ ಕವನ ವಾಚನ

ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು 26 ರಂದು ಜರುಗಲಿದೆ.ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ‌ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 2 ಚುಟುಕುಗಳನ್ನು ವಾಚಿಸಲಿದ್ದಾರೆ.
Ad Widget

ಇಂದಿನ(ಜುಲೈ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್, ಅಡಿಕೆ ಹಾಗೂ ಕೊಬ್ಬರಿ ಬೆಲೆ ಸ್ಥಿರ ; ಕಾಳುಮೆಣಸು ಧಾರಣೆಯಲ್ಲಿ ಕೊಂಚ ಇಳಿಕೆ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಜುಲೈ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಕೆರೆಮೂಲೆ ನಿವಾಸಿಗಳಿಗೆ ರಸ್ತೆ ನಿರ್ಮಾಣಕ್ಕೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ಎಚ್ಚರಿಕೆ; ಗಿರಿಧರ ನಾಯ್ಕ್

ಸುಳ್ಯ: ಸುಳ್ಯದ ಕೆರೆಮೂಲೆ ಪ್ರದೇಶದಲ್ಲಿರುವ ಪರಿಶಿಷ್ಟ ಜಾತಿಗೆ ಸೇರಿದ ಒಂದು ಮನೆ ಸೇರಿದಂತೆ ಇತರ ಮನೆಗಳಿಗೆ ಕಳೆದ ಸುಮಾರು 42 ವರ್ಷಗಳಿಂದಲೂ ಕಾಲುದಾರಿ ಮಾತ್ರ ಇದ್ದು, ಸಂಪರ್ಕ ರಸ್ತೆಯಿಲ್ಲದೆ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕದ ರಾಜ್ಯಾಧ್ಯಕ್ಷ ಗಿರಿಧರ ನಾಯ್ಕ ಆರೋಪಿಸಿದರು. ಅವರು ಜು. 25ರಂದು ಸುಳ್ಯದ ಪತ್ರಿಕಾಭವನದಲ್ಲಿ...

ಸಹಕಾರಿ ಧುರೀಣ ಚೆಂಬು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಮಾಜ ಸೇವಕ ಆದಂ ಕುಂಞ ಸಂಟ್ಯಾರ್ ಹೃದಯಾಘಾತದಿಂದ ನಿಧನ

ಚೆಂಬು ಗ್ರಾಮ ಪಂಚಾಯತ್ ಮತ್ತು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಹಾಗೂ ಜನಪ್ರೀಯ ಸಮಾಜಸೇವಕರಾದ ಆದಂ ಕುಂಞ ಸಂಟ್ಯಾರ್ ರವರು ಇದೀಗ ಹೃದಯಾಘಾತದಿಂದ ನಿಧನರಾದರೆಂದು ತಿಳಿದುಬಂದಿದೆ. ಮೃತರಿಗೆ 60 ವರ್ಷ ವಯಸ್ಸಾಗಿತ್ತು. ಇಂದು(ಜು.25) ಸಂಪಾಜೆ ಪಯಸ್ವಿನಿ ಸಹಕಾರಿ ಬ್ಯಾಂಕ್ ಮಹಾಸಭೆ ನಡೆಯುತ್ತಿತ್ತು. ಆದಂ ರವರು ಮಹಾಸಭೆಯಲ್ಲಿ ಸಕ್ರೀಯವಾಗಿ ಭಾಗವಹಿಸಿ...

ಸುಳ್ಯ ಮೊಸರು ಕುಡಿಕೆ ಹಾಗೂ ಶೋಭಾಯಾತ್ರೆಯ ಆಮಂತ್ರಣ ಬಿಡುಗಡೆ – ಆಮಂತ್ರಣ ಬಿಡುಗಡೆಗೊಳಿಸಿದ ಅಕ್ಷಯ್ ಕೆ.ಸಿ.

ಸುಳ್ಯ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ, ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ಹಿಂದೂ ಪರಿಷತ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ.08 ರಂದು ನಡೆಯುವ ಅದ್ದೂರಿ ಮೊಸರು ಕುಡಿಕೆ ಹಾಗೂ ಶೋಭಾಯಾತ್ರೆಯ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜುಲೈ 25ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಿತು. ಶ್ರೀ ಚೆನ್ನಕೇಶವ ದೇವರಿಗೆ ಪೂಜೆ ನೆರವೇರಿದ...

ಮಳೆಯ ಹಿನ್ನೆಲೆ ಜು.25ರಂದು ದ.ಕ. ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿ...

ಹಾಲೆಮಜಲು ರಸ್ತೆ ತಿರುವಿನಲ್ಲಿರುವ ಕಾಡು ಕಡಿದು ಸ್ವಚ್ಛತೆ

ಸುಳ್ಯ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಾಲೆಮಜಲು ಶಾಲಾ ಬಳಿ ಅಪಾಯಕಾರಿ ತಿರುವಿನಲ್ಲಿ ಗಿಡಗಂಟಿಗಳು ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಅಪಘಾತಗಳು ಸಂಭವಿಸುವುದನ್ನು ಗಮನಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸ್ವಯಂಸೇವಕರು ಸೇರಿ ಸ್ವಚ್ಛತೆ ಮಾಡುವ ಮೂಲಕ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸುವ ಮೂಲಕ ಸಾಮಾಜಿಕ ಕಾರ್ಯ ಮಾಡಿದರು. ಇವರ ಸೇವಾ ಕಾರ್ಯಕ್ಕೆ...

ಸುಬ್ರಹ್ಮಣ್ಯ : ಜು.29ರಂದು ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗಗಳ ಮೆಸ್ಕಾಂ ಜನಸಂಪರ್ಕ ಸಭೆ

ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಮೆಸ್ಕಾಂ ಜನಸಂಪರ್ಕ ಸಭೆಯು ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ಜು.29ರಂದು ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ದೂರವಾಣಿ ಮೂಲಕವೂ 08257-200699...

ಉಬರಡ್ಕ ಮಿತ್ತೂರು : ಗೃಹಲಕ್ಷ್ಮಿ ಯೋಜನೆಗೆ 3 ವರ್ಷ ತುಂಬಿದ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂಚನೆ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಮತ್ತು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ವತಿಯಿಂದ ಗೃಹಲಕ್ಷ್ಮಿ ಜಾಗೃತಿ ಕಾರ್ಯಕ್ರಮ ಇಂದು ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್...
Loading posts...

All posts loaded

No more posts

error: Content is protected !!