- Friday
- October 2nd, 2026
ಪ್ರತಿಭಟನೆಗೆ ಮುಂದಾದ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಎನ್.ಎಸ್ ಕರೆಗೆ ಸ್ಪಂದಿಸಿ ನಾಗರಹಾವಿನ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ ಆಡಳಿತಾಧಿಕಾರಿ ಎ.ಸಿ ಜುಬಿನ್ ಮಹಾಪಾತ್ರ https://youtu.be/xOnZR7T_110?si=uOkAAIL8Fzm-M9OT ಕುಕ್ಕೆ ಸುಬ್ರಹ್ಮಣ್ಯದ ಸಾರ್ವಜನಿಕ ಸ್ಥಳದಲ್ಲಿ ಸತ್ತ ನಾಗರಹಾವಿನ ಸಂಸ್ಕಾರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದವರು ನೆಪವೊಡ್ಡಿ ಹಿಂದೇಟು ಹಾಕಿದಾಗ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಪ್ರತಿಭಟನೆಗೆ ಮುಂದಾಗಿ ನಂತರ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ...
ದ.ಕ.ಜಿ.ಪ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ, ಇಲ್ಲಿ ಸುಳ್ಯದ ಕೆ.ವಿ.ಜಿ ಕಾನೂನು ಕಾಲೇಜಿನ ಎನ್. ಎಸ್. ಎಸ್ ಘಟಕದ ವತಿಯಿಂದ ಒಂದು ದಿನದ ವಿಶೇಷ ಶಿಬಿರ ಜು.4ರಂದು ನಡೆಯಿತು.ಶಾಲೆಯ ವಠಾರದಲ್ಲಿ ಎನ್. ಎಸ್. ಎಸ್ ಸ್ವಯಂ ಸೇವಕರು ಶುಚಿ ಗೊಳಿಸಿ ತರಕಾರಿ ಕೈ ತೋಟವನ್ನು ನಿರ್ಮಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ ಬಿ,...
ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2024 -25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಜುಲೈ 13ರಂದು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವುದಾಗಿ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ. ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಪ್ರಧಾನ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81ರ ಪೂರ್ವ ಗವರ್ನರ್ ರಂಗನಾಥ್ ಭಟ್...
ಸುಬ್ರಹ್ಮಣ್ಯ ಜುಲೈ 11: ಸುಳ್ಯ ಕಡಬ ಪುತ್ತೂರು ಬೆಳ್ತಂಗಡಿ ಪ್ರದೇಶಗಳನ್ನು ಒಳಗೊಂಡ ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ 2018ನೇ ವರ್ಷದ ಸಾಲ ಮನ್ನಾ ಯೋಜನೆಯು ಕಾರ್ಯಗತಗೊಳ್ಳದ ಹಾಗೂ ಸಾಲ ಮನ್ನಾ ವಂಚಿತ ರೈತರೆಲ್ಲರೂ ಸೇರಿ ಜುಲೈ 25ರಂದು ಪುತ್ತೂರು ಸಹಾಯಕ ಸಹಕಾರಿ ನಿಬಂಧಕರ ಕಚೇರಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಮಲೆನಾಡು ಹಿತ ರಕ್ಷಣಾ ವೇದಿಕೆ...
ಪೆರಾಜೆ:- ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ತುಂಬಿಸಿ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಘಟನೆಯ ಬಳಿಕ ಪೋಲೀಸ್ ಇಲಾಖೆಗೆ ಮಾಹಿತಿ ನೀಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರೊಬ್ಬರ ಪತ್ನಿಗೆ ವಾಟ್ಸಾಪ್ ಮೂಲಕ ಅವ್ಯಾಚ್ಯ...
ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಗೆ ಬುಧವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಬೆರೆತು, ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.ಪ್ರಥಮ ಬಾರಿಗೆ ಭೇಟಿ ನೀಡಿದ ಸಂಸದರನ್ನು ವಿದ್ಯಾರ್ಥಿಗಳು ಬ್ಯಾಂಡ್ ಸೆಟ್ ನೊಂದಿಗೆ ಸ್ವಾಗತಿಸಿದರು. ಭೇಟಿಯ ನೆನಪಿಗಾಗಿ ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡರು ಸಂಸದರ ಮೂಲಕ ಹಲಸಿನ ಗಿಡವನ್ನು ನೆಡಲಾಯಿತು.ಬಳಿಕ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ವತಿಯಿಂದ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಜು.11 ರಂದು ಮನವಿ ಸಲ್ಲಿಸಿದರು. ಜು.07ರಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯದಂತೆ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು,NPS ರದ್ದುಪಡಿಸಿ OPS ಯೋಜನೆಯನ್ನು ಮರುಸ್ಥಾಪಿಸುವುದು, ಕರ್ನಾಟಕ ಆರೋಗ್ಯ...
ಜೆಸಿಐ ವಲಯ 15 ರ ವಲಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ಮಲ್ಟಿ ಲೋ ಮೀಟ್ ಕಾರ್ಯಕ್ರಮ ಜು.13 ರಂದು ಬೆಳ್ಳಾರೆಯ ಜೆ.ಡಿ.ಆಡಿಟೋರಿಯಂ ನಲ್ಲಿ ಅದ್ದೂರಿ ಯಾಗಿ ನಡೆಯಲಿದೆ. ಜೆಸಿಐಯ ಹಲವು ಶಾಶ್ವತ ಯೋಜನೆಗಳ. ಬಿಡುಗಡೆ ಈ ಕಾರ್ಯಕ್ರಮದಲ್ಲಿ ನಡೆಯಲಿದೆ. ವಲಯಾಧ್ಯಕ್ಷರಾದ ಜೇಸಿಐ ಸೆನೆಟರ್ ಅಡ್ವೋಕೇಟ್ ಗಿರೀಶ್ ಎಸ್.ಪಿ.,ಉಪಾಧ್ಯಕ್ಷ ಜೆಸಿಐ ಸೆನೆಟರ್ ಅಭಿಷೇಕ್ , ಜೇಸಿ ಪ್ರಶಾಂತ್...
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ, ಪಾದೆ, ನರಿಮೊಗರು ಇದರ ಆಶ್ರಯದಲ್ಲಿ ಹಾಗೂ ವೈದ್ಯರತ್ನಮ್ ಔಷಧ ಶಾಲಾ ಪ್ರೈವೆಟ್ ಲಿಮಿಟೆಡ್ ಇದರ ಸಹಯೋಗದಲ್ಲಿ, ಆಸ್ಪತ್ರೆಯ ಆಡಳಿತ ನಿರ್ದೇಶಕ ಆಗಿರುವ ಖ್ಯಾತ ಆಯುರ್ವೇದ ತಜ್ಞವೈದ್ಯ , ಆಯುರ್ವೇದ ಧನ್ವಂತರಿ ಡಾ . ರಾಘವೇಂದ್ರ ಪ್ರಸಾದ್ ಬಂಗಾರಡ್ಕ .B.A.M.S., M.S.(Ayu) ಇವರಿಂದ , ಉಚಿತ ಆಯುರ್ವೇದೀಯ ಅರೋಗ್ಯ ತಪಾಸಣಾ ಶಿಬಿರವು...
ಮಂಡೆಕೋಲು: ಮಂಡೆಕೋಲು ಗ್ರಾಮದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಯ ಅಂಗವಾಗಿ ನೂತನ ಸಮಿತಿ ರಚಿಸಲಾಯಿತು.ಮಂಡೆಕೋಲು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿ ಅಧ್ಯಕ್ಷರಾಗಿ ಉದಯ್ ಆಚಾರ್ ಪ್ರಧಾನ ಕಾರ್ಯದರ್ಶಿಗಳಾಗಿ ವಿನುತ ಪಾತಿಕಲ್ಲು, ಹಾಗೂ ಕೆಸರು ಗದ್ದೆ ಕ್ರೀಡಾ ಕೂಟದ ಸಂಚಾಲಕರಾಗಿ ಪ್ರಕಾಶ್ ಕಣೆಮರಡ್ಕ ರವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ...
Loading posts...
All posts loaded
No more posts
