- Monday
- October 5th, 2026
ಮಾಜಿ ಪ್ರಧಾನಿ ಭಾರತ ರತ್ನ, ದಿ. ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ದಿನಾಚರಣೆ ಕಾರ್ಯಕ್ರಮ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರು ದಿವಂಗತ ರಾಜೀವ್ ಗಾಂಧಿಯವರ ತ್ಯಾಗ ಬಲಿದಾನ ಮತ್ತು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಸ್ಮರಿಸಿ ನುಡಿನಮನ...
ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ ಪುತ್ರ ಪ್ರಸನ್ನ ಕುಮಾರ್ ಮೇ 20 ರಂದು ಬೆಂಗಳೂರಿನಲ್ಲಿ ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎ.ಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಸಂಸ್ಥೆಯ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 26 ವರ್ಷ...
ಅರಂತೋಡು ಗ್ರಾಮದ ಅಡ್ತಲೆ ರಸ್ತೆಯಲ್ಲಿ ಪೂಜಾರಿಮನೆ ಎಂಬಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. .
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೇ.02 ರಿಂದ ಮೇ.16ರ ರವರೆಗೆ 15...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು. ಆನೆ, ಬಿರುದಾವಳಿ ಮತ್ತು ಬ್ಯಾಂಡ್ ವಾದ್ಯಗಳ ನಿನಾದದೊಂದಿಗೆ ರಥವನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.ಪುಷ್ಪಾರ್ಚನೆ:ಸೋಮವಾರ ಸಂಜೆ ಕ್ಷೇತ್ರಕ್ಕಾಗಮಿಸಿದ ರಥವನ್ನು ಭಕ್ತಿಪೂರ್ವಕವಾಗಿ ಕಾಶಿಕಟ್ಟೆ...
ಇಂದು ಸುಳ್ಯ ದ ಅಮೃತ ಭವನದಲ್ಲಿ ನಡೆದ ಕೃಷಿ ಕೊಳೆರೋಗ ಕುರಿತು ಸಂವಾದ ಮತ್ತು ಅಭಿನಂದನಾ ಸಮಾರಂಭದಲ್ಲಿ ಅರೆಕಾ ವೈ ಎಲ್ ಡಿ ಸಂಘದ ವತಿಯಿಂದ, ಪೆರುವೋಡಿ ನಾರಾಯಣ ಭಟ್ ಅವರಿಗೆ " ಕೃಷಿಕ ರಕ್ಷಕ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪೆರಾಜೆ ಪ್ರಭಾಕರ ರೈ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಅಡಿಕೆ ಪತ್ರಿಕೆ ಸಂಪಾದಕರಾದ ಶ್ರೀ...
ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಧುಮೇಹ ಸಂಬಂಧಿತ ಸೂಚನೆಗಳ ಕರಪತ್ರವನ್ನು ಮೇ.19ರಂದು ವಿತರಿಸಲಾಯಿತು. ಕರಪತ್ರವನ್ನು ಫಿಸಿಶಿಯನ್ ಹಾಗೂ ಮಧುಮೇಹ ತಜ್ಞರಾದ ಡಾ| ನರಸಿಂಹಶಾಸ್ತ್ರೀ.ಜಿ ವಿತರಣೆ ಮಾಡಿದರು. ಇದರಿಂದ ಮಧುಮೇಹಿಗಳು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಲಿದೆ.
ಮೇ.26 ರಂದು ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಬೆಳ್ಳಿ ಹಬ್ಬವು ನಡೆಯಲಿದೆ. ಇದರ ಪೂರ್ವ ಭಾವಿಯಾಗಿ ಸಂಘದ ಸದಸ್ಯರಿಗೆ ಕ್ರೀಡಾಕೂಟ ವನ್ನು ಮೇ.19 ರಂದು ಸುಳ್ಯದ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆಸಲಾಯಿತು.ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದರು.
ಪಂಜ : ಕೂತ್ಕುಂಜ ಗ್ರಾಮದ ಮಾಯಿಲ ಕೋಟೆ ಜೀರ್ಣೋದ್ಧಾರ ಬಗ್ಗೆ ತಾಂಬೂಲ ಪ್ರಶ್ನಾ ಚಿಂತನೆಯು ಸುದರ್ಶನ್ ಪಟ್ಟಾಜೆ ಯವರ ಮನೆಯಲ್ಲಿ ದೈವಜ್ಞರಾದ ಪ್ರಸಾದ್ ಪಾಂಗಣ್ಣಾಯ ರವರು ನಡೆಸಿ ಕೊಟ್ಟರು. ಮಾಣಿಲ ಕ್ಷೇತ್ರ ಶ್ರೀ ಮೋಹನ್ ದಾಸ ಸ್ವಾಮೀಜಿ, ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್,ಸದಾಶಿವ ಪಳಂಗಾಯ,ಸುದರ್ಶನ್ ಪಟ್ಟಾಜೆ,ವಿಶ್ವಜಿತ್...
ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ ಸಮಾಜದ ಅಂಗೀ ಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ.ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 25 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಸತತ 7ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 13 ವಿದ್ಯಾರ್ಥಿ ಶಿಕ್ಷಕಿಯರು...
Loading posts...
All posts loaded
No more posts
