ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮತ್ತೆ ಮೊದಲ ಸ್ಥಾನಕ್ಕೆ ಜಿಗಿದ ದ.ಕ. ಜಿಲ್ಲೆ

2023-24ನೇ ಸಾಲಿನ ದ್ವೀತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ, ಕೊಡಗು...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಇಂದು (ಎ.10) ದ.ಕ.ಜಿಲ್ಲೆಯಲ್ಲಿ ರಜೆ ಘೋಷಣೆ

ಎ. 09 ರಂದು ಚಂದ್ರ ದರ್ಶನವಾಗಿರುವುದರಿಂದ ಈದುಲ್ ಫಿತರ್ ಹಬ್ಬದ ಆಚರಣೆಗಾಗಿ ಎ. 10 ಬುಧವಾರರಂದು ರಜೆ ಘೋಷಿಸಲು ಸಮುದಾಯದಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಎ.11ರಂದು ಗುರುವಾರ ನಿಗದಿಯಾಗಿದ್ದ ರಜೆ ರದ್ದುಗೊಳಿಸಿ ಎ.10 ಬುಧವಾರ ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪೂರ್ವ ನಿಯೋಜಿತಗೊಂಡಿರುವ ಶಾಲಾ ಕಾಲೇಜುಗಳ ಪರೀಕ್ಷೆಗಳಿಗೆ ರಜೆ ಅನ್ವಯಿಸುವುದಿಲ್ಲ.
Ad Widget

ಕುಂಬರ್ಚೋಡು: ಸಂಭ್ರಮದ ಈದುಲ್ ಪಿತರ್ ಹಬ್ಬ ಆಚರಣೆ

ಮೊಹಿಯದ್ದೀನ್ ಜುಮ್ಮಾ ಮಸೀದಿ ಕುಂಬರ್ಚೋಡು ಇಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಈದ್ ಸಂದೇಶವನ್ನು ನೀಡಿದರು ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿಅಧ್ಯಕ್ಷರಾದ ಹಾಜಿ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ, ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಅಕ್ಕರೆ, ಸಿದ್ದಿಕ್ ಹುದವಿ...

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಎ.08ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಥಮವಾಗಿ 1 ರಿಂದ 7ನೇ ತರಗತಿ ಮಕ್ಕಳ ಫಲಿತಾಂಶವನ್ನು ಪ್ರಕಟನಾ ಫಲಕದಲ್ಲಿ ಪೂರ್ವಾಹ್ನ 9 ಗಂಟೆಗೆ ಪ್ರಕಟಿಸಿ ಘೋಷಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಉತ್ತೀರ್ಣಗೊಂಡರು. ಬಳಿಕ ಸಮುದಾಯದತ್ತ ಶಾಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದವು. ಈ ಸಂದರ್ಭದಲ್ಲಿ ಪೋಷಕರಿಗೆ 2023-...

ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 19ನೇ ವರ್ಷದ ಸೌಹಾರ್ದ ಇಫ್ತಾರ್‌ಕೂಟ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಅರಂತೋಡು ಇದರ ವತಿಯಿಂದ 19ನೇ ವರ್ಷದ "ಸೌಹಾರ್ದ ಇಫ್ತಾರ್‌ಕೂಟ" ಎಪ್ರಿಲ್ 8ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ. ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ತಿಂಗಳ 28ರ ಉಪವಾಸ ದಿನದಂದು ನಡೆದ...

ರಾತ್ರಿ ಸಂಚರಿಸುತ್ತಿದೆ ಟನ್ ಗಟ್ಟಲೇ ಅಕ್ರಮ ಮರಳು – ಗಾಢ ನಿದ್ರೆಗೆ ಜಾರಿದ ಗಣಿ ಇಲಾಖೆ – ಕರೆ ಮಾಡಿದರೂ ಸ್ವೀಕರಿಸದ ಗಣಿ ಅಧಿಕಾರಿಗಳು

ಸುಳ್ಯದಲ್ಲಿ ಪೋಲಿಸ್ ಮತ್ತು ಕಂದಾಯ ಇಲಾಖೆಯು ಹದ್ದಿನ ಕಣ್ಣಿಟ್ಟು ಭೂಮಿಯನ್ನು ಬಗೆದು ಕಳವು ಗೈಯುವ ಕಳ್ಳರ ವಿರುದ್ದ ಸಮರ ಸಾರುತ್ತಿದೆ. ಇತ್ತ ಗಣಿ ಇಲಾಖೆ ಮಾತ್ರ ಗಾಢ ನಿದ್ದೆಯಲ್ಲಿದೆ. ಸುಳ್ಯ , ಕಡಬ ಹಾಗೂ ಕೊಡಗು ಜಿಲ್ಲೆಯ ಸಂಪಾಜೆ , ಪೆರಾಜೆ ಭಾಗಗಳಿಂದ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದು ಪೋಲಿಸ್ ಮತ್ತು ಕಂದಾಯ ಇಲಾಖೆಯ ಕಣ್ಣಿಗೆ...

ನಾಳೆ (ಎ.10) ದ್ವಿತೀಯ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಎ.10 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯನ್ನು ನಡೆಸಲಿದೆ ನಂತರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪಂಜ ದೇವಸ್ಥಾನಕ್ಕೆ ರಾಜ್ಯ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಬಾಲಕೃಷ್ಣ ಶಾಸ್ತ್ರಿ ಭೇಟಿ

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ದ ಹಿರಿಯ ನ್ಯಾಯವಾದಿ ಗಳಾದ ಬಾಲಕೃಷ್ಣ ಶಾಸ್ತ್ರಿ ಗುತ್ತಿಗಾರು ಇಂದು ಶ್ರೀ ಪರಿವಾರ ಪಂಚಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾದ ದಾ. ದೇವಿ ಪ್ರಸಾದ್ ಕಾನತ್ತೂರು, ವ್ಯವಸ್ಥಾ ಪನ ಸಮಿತಿ ಸದಸ್ಯ ರಾದ ಕಾಯಂಬಾಡಿ ಸತ್ಯನಾರಾಯಣ ಭಟ್, ಸಂತೋಷ್ ಕುಮಾರ್ ರೈ...

ಮರ್ಕಂಜ ಗಣಿಗಾರಿಕೆ ನಿಲ್ಲಿಸುವಂತೆ ಊರವರ ಮನವಿಗೆ ಸ್ಪಂದಿಸಿದ ತಾಲೂಕು ಆಡಳಿತ – ಗಣಿಗಾರಿಕೆ ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ !

ಕೆಲವು ತಿಂಗಳುಗಳ ಕಾಲ ಸ್ಥಗಿತಗೊಂಡಿದ್ದ ಮರ್ಕಂಜದ ಅಳವುಪಾರೆ ಗಣಿಗಾರಿಕೆ ಕೆಲವು ದಿನದ ಹಿಂದೆ ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಿಗ್ಗೆ ಊರವರು ಸೇರಿ ಸುಳ್ಯ ತಹಶೀಲ್ದಾರರಿಗೆ ಮನವಿ ನೀಡಿ ಗಣಿಗಾರಿಕೆ ನಿಲ್ಲಿಸುವಂತೆ ವಿನಂತಿಸಿದ್ದರು ಇಲ್ಲದಿದ್ದರೆ ಈ ಭಾರಿಯ ಲೋಕಸಭೆ ಚುನಾವಣೆ ಬಹಿಷ್ಕಾರಿಸುವ ಬಗ್ಗೆ ತಿಳಿಸಿದ್ದರು. ಇವರ ಮನವಿಗೆ ಸ್ಪಂಧಿಸಿದ ಸುಳ್ಯ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಜಿ...

ಬಿ.ಜೆ.ಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ವತಿಯಿಂದ ನಾರಿಶಕ್ತಿ ಸಮಾವೇಶ

ಏ.8ರಂದು ಬಿ.ಜೆ.ಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ನಾರಿಶಕ್ತಿ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದೀನ ದಯಾಳು ರೈತ ಸಭಾಭವನದಲ್ಲಿ ನಡೆಯಿತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಿ ಶುಭಾ ಹಾರೈಸಿದರು. ಕಾರ್ಯಕ್ರಮದ ಸಭಾಂಗಣದಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು.
Loading posts...

All posts loaded

No more posts

error: Content is protected !!