- Thursday
- October 8th, 2026
20ರಂದು ಪೂರ್ವಾಹ್ನ 11 ಗಂಟೆಗೆ ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯು ಸುಳ್ಯ ಉಪವಿಭಾಗ ಕಚೇರಿಯಲ್ಲಿ ನಡೆಯಲಿದೆ.ಅಧೀಕ್ಷಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಲಾಗುವುದು. ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಸುಳ್ಯ ಉಪವಿಭಾಗ ಕಚೇರಿಯಲ್ಲಿ ಅಥವಾ ದೂರವಾಣಿ ಕರೆಯ ಮೂಲಕ ಸಲ್ಲಿಸಬಹುದು...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಗಾಯ ಪೇರಡ್ಕ ದರ್ಗಾ ಮಸೀದಿ ಭೇಟಿ ನೀಡಿ 2 ನೇ ದಿನದ ತೆಕ್ಕಿಲ್ ಮೊಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆ ಮಾಡಿ ಸಾಮರಸ್ಯದ ಬಗ್ಗೆ ಮಾತನಾಡಿ ಯಾವ ಊರಿನಲ್ಲಿ ಸೌಹಾರ್ದತೆ ಇದೆಯೋ ಅಲ್ಲಿ ಅಭಿವೃದ್ಧಿ ಆಗುತ್ತದೆ ಪೇರಡ್ಕ ಗೂನಡ್ಕ ಅಸೂಪಸಿನ ಗ್ರಾಮ ಅಭಿವೃದ್ಧಿ ಆಗಿದೆ...
ಸೋಮವಾರ ಸುಬ್ರಹ್ಮಣ್ಯದ ಗ್ರಾಮ ಪಂಚಾಯತ್ ಎದುರು ನಡೆದ ಸುಬ್ರಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಕಾಂಗ್ರೆಸ್ಸಿಗರು ನಡೆಸಿದ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದ್ದು ಹಾಸ್ಯಾಸ್ಪದವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದು ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಅನುದಾನವನ್ನು ನೀಡದೆ ನಮ್ಮ ಗ್ರಾಮ ಪಂಚಾಯತ್ ಅಭಿವೃದ್ಧಿಯನ್ನು ಸಹಿಸಲಾಗದೆ ಈ ರೀತಿ ಪ್ರತಿಭಟನೆ ಮಾಡುವುದನ್ನು ಭಾರತೀಯ...
ಅರಂತೋಡು ಗ್ರಾಮ ಪಂಚಾಯಿತಿನ ಆಡಳಿತ ಮಂಡಳಿಯ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸ್ವರಾಜ್ ಸಭಾಂಗಣದಲ್ಲಿ ಫೆ.14 ರಂದು ನಡೆಯಿತು. ಸರಕಾರದ ಸುತ್ತೋಲೆಯನ್ನು ಪಿಡಿಓ ವಾಚಿಸಿದರು. ಕರ್ನಾಟಕ ಸರಕಾರದ ನಾಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರು ಹೊರಡಿಸಿದ ಆದೇಶದಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಏಕ ನಿವೇಶನ ಅನುಮೋದನೆಯನ್ನು ನೀಡುವುದನ್ನು ತಡೆಹಿಡಿಯಲಾದ...
ಮುಡ್ನೂರು ಮರ್ಕಂಜ ಸ.ಹಿ.ಪ್ರಾ.ಶಾಲೆಯ ಭೋಜನಾಲಯ ಮತ್ತು ಡಿಜಿಟಲ್ ಗ್ರಾಂಥಲಾಯದ ಕೊಠಡಿ ಉದ್ಘಾಟನೆ-ಪ್ರತಿಭಾ ಪುರಸ್ಕಾರದ ಸಭ ಕಾರ್ಯಕ್ರಮವು ಎಸ್ ಡಿ ಎಂ ಸಿ ಅಧ್ಯಕ್ಷರಾದ ಮೀನಾಕ್ಷಿ ಬೊಮ್ಮೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶ್ರೀ ಶ್ರೀ ರಾಜೇಶ್ ನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ರಾಜಕೀಯವನ್ನು ಮಾಡುವುದು ಬೇಡ ಜೊತೆ...
2019ರ ಫೆಬ್ರವರಿ 14ರಂದು ಪುಲ್ವಾಮಾ ಜಿಲ್ಲೆಯ ಅವಂತಿ ಪಾರದಲ್ಲಿ ಆತ್ಮಹುತಿ ದಾಳಿ ಕೋರನ ಕಾರ್ ಬಾಂಬ್ ಸ್ಫೋಟದಲ್ಲಿ ಹುತಾತ್ಮರಾದ 40 ಜನ ಸಿಆರ್ಪಿಎಫ್ ಯೋಧರಿಗೆ ಗೌರವ ನಮನ ಸಲ್ಲಿಕೆ ಕಾರ್ಯಕ್ರಮವು ನಗರ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಯುದ್ಧ ಸ್ಮಾರಕದ ಎದುರು ಭಾಗದಲ್ಲಿ ನಡೆಯಿತು. ನಗರ ಪಂಚಾಯಿತ್ ಮಾಜಿ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅವರು ಪುಲ್ವಾಮಾ...
ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯ ಅಗರಿಕಜೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಶ್ರೀ ಸ್ವಾಮಿ ಕೊರಗಜ್ಜ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ದೈವಗಳ ನೇಮೋತ್ಸವ ಫೆ.15 ಮತ್ತು 16ರಂದು ಜರುಗಲಿದೆ. ಗುರುವಾರ ಬೆಳಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ನಿಮಿತ್ತ ಮಹಾಗಣಪತಿ ಹೋಮ, ದೈವಗಳಿಗೆ ಕಲಶಾಭಿಷೇಕ, ಪೂರ್ವಕ ತಂಬಿಲ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.ಸಂಜೆ ಆದಿ ಮೊಗೇರ್ಕಳರು ಗರಡಿ...
ಕೇನ್ಯ ಗ್ರಾಮದ ಕಣ್ಕಲ್ ತರವಾಡು ಮನೆಯ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ಧರ್ಮ ನಡಾವಳಿ ಫೆ. 17 ಮತ್ತು ಫೆ.18 ರಂದು ನಡೆಯಲಿದೆ. ಫೆ. 17 ರಂದು ರಾತ್ರಿ ಶ್ರೀ ದೈವಗಳ ಭಂಡಾರ ತೆಗೆದು ದೈವಗಳ ನೇಮೋತ್ಸವ ನಡೆಯಲಿದೆ. ಫೆ. 18 ರಂದು ಧರ್ಮದೈವ ರುದ್ರಚಾಮುಂಡಿ ದೈವದ ನೇಮ ನಡೆಯಲಿದೆ. ಮಧ್ಯಾಹ್ನ ಪ್ರಸಾದ...
ಹರಿಹರ ಪಲ್ಲತ್ತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ. 20ರಿಂದ22ರ ವರೆಗೆ ಜಾತ್ರೋತ್ಸವ ನಡೆಯಲಿದ್ದು, ಗೊನೆ ಮುಹೂರ್ತ ಫೆ. 14ರಂದು ನಡೆಯಿತು.ದೇವಸ್ಥಾನದ ಪ್ರದಾನ ಅರ್ಚಕ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜಾ ವಿದಿವಿಧಾನ ನೆರವೇರಿಸಿದರು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್ ಕೂಜುಗೋಡು, ಸದಸ್ಯರುಗಳಾದ ಭವಾನಿಶಂಕರ ಪೈಲಾಜೆ,ಚಂದ್ರಹಾಸ ಶಿವಾಲ,ಆನಂದ ಕೆರೆಕ್ಕೋಡಿ,ಚಂದ್ರಶೇಖರ ಕಿರಿಭಾಗ,ರೇಷ್ಮಾ ಕಟ್ಟೆಮನೆ,ಜ್ಯೋತಿ ಕಳಿಗೆ,ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೇಷಪ್ಪ ಗೌಡ ಕಿರಿಭಾಗ,ಸದಸ್ಯರುಗಳಾದ...
ವಿಧಾನಸಭೆಯಲ್ಲಿ ಧ್ವನಿ ಎತ್ತಿದ ಶಾಸಕಿ ಭಾಗೀರಥಿ ಮುರುಳ್ಯರವರು, ಅನುದಾನದ ಮತ್ತು ಅಧಿಕಾರಿಗಳ ಸಿಬ್ಬಂದಿಗಳ ಕೊರತೆಯಿಂದ ಗ್ರಾಮ ಪಂಚಾಯತ್ಗಳ ಕಾರ್ಯನಿರ್ವಹಣೆಯಲ್ಲಿ ತೀವ್ರ ಆಗುತಿದೆ ಎಂದು ಹೇಳಿದರು. ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು ಅನುದಾನ ಬಾರದೆ ಸುಳ್ಯ ವಿಧಾನ ಸಭಾ ಕ್ಷೇತ್ರದಸುಳ್ಯ ಹಾಗೂ ಕಡಬ ತಾಲೂಕಿನ ಗ್ರಾ.ಪಂ.ಕಟ್ಟಡಗಳ ನಿರ್ಮಾಣ ಪೂರ್ತಿಯಾಗಿಲ್ಲ. ಡಾಟಾ ಎಂಟ್ರಿ ಆಫರೇಟರ್ಗಳ ನೇಮಕ...
Loading posts...
All posts loaded
No more posts
