ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು| ತ್ರಿವಳಿ ಪದಕಗಳ ಬೇಟೆ; ಕಿಶನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಳ್ಯ: ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ಕೊಡಿಯಾಲಬೈಲು ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ತ್ರಿವಳಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.Under-14, 50+ ಕೆ.ಜಿ. ವಿಭಾಗದಲ್ಲಿ 8ನೇ ತರಗತಿಯ ಕಿಶನ್ಯ ಎಂ. ಆರ್. ಅವರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.Under-17, 30+ ಕೆ.ಜಿ. ವಿಭಾಗದಲ್ಲಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಸುಬ್ರಹ್ಮಣ್ಯ ಆಗಸ್ಟ್ 28 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಭಕ್ತಿ ಭಾವದಿಂದ ಆಚರಿಸಲಾಯಿತು. ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಹೊಸಳಿಗಮ್ಮ ದೈವದ ಗುಡಿಯಲ್ಲಿ ಪ್ರಾರ್ಥನೆ ಮಾಡಿ ನಂತರ ಶ್ರೀ ದೇವಳದ ಎದುರುಗಡೆ ಹರಿಯುತ್ತಿರುವ ದರ್ಪಣ ತೀರ್ಥ ನದಿ ತಟದಲ್ಲಿ ಪೂಜಾ ವಿಧಿ ವಿಧಾನಗಳನ್ನು ಪುರೋಹಿತರು...
Ad Widget

ಪೆರುವಾಜೆ ಕ್ಷೇತ್ರದಲ್ಲಿ 1,000ಕ್ಕೂ ಅಧಿಕ ಮಾತೆಯರಿಂದ ವರಮಹಾಲಕ್ಷ್ಮೀ ಪೂಜೆ – ಮೂರು ತಾಲೂಕುಗಳ 22 ಗ್ರಾಮಗಳ ಮಾಗಣೆ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿ

ಪೆರುವಾಜೆ : ಮೂರು ತಾಲೂಕುಗಳ 22 ಗ್ರಾಮಗಳ ಮಾಗಣೆ ಕ್ಷೇತ್ರವೆಂಬ ಹೆಗ್ಗಳಿಕೆ ಹೊಂದಿರುವ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಶ್ರೀ ಜಲದುರ್ಗಾದೇವಿ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶುಕ್ರವಾರ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ 1,000ಕ್ಕೂ ಅಧಿಕ ಮಂದಿ ಪೂಜೆ ಸಮರ್ಪಿಸಿದರು. ಪೂರ್ವಾಹ್ನ ದೇವಸ್ಥಾನದ ಸನ್ನಿಧಿಯಲ್ಲಿ ಪೂಜಾ ಕಾರ್ಯಕ್ರಮ ಆರಂಭಗೊಂಡಿತು. ಮಾತೆಯರು ಪಾಲ್ಗೊಂಡು ಶ್ರದ್ಧಾಭಕ್ತಿಯಿಂದ ವರಮಹಾಲಕ್ಷ್ಮೀ ದೇವಿಯನ್ನು...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಳೆ(ಆ.29) ಸೋಣ ಶನಿವಾರ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ನಾಳೆ(ಆ.29) “ಸೋಣ ಶನಿವಾರ” ಆಚರಿಸಲಾಗುವುದು ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕೆಂದು ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

“ಮುಂದಿನ ಪೀಳಿಗೆಗೆ ಧಾರ್ಮಿಕ ಸಂಪ್ರದಾಯಗಳನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” : ಮಾಧವ ಗೌಡ ; ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಸುಳ್ಯ : “ಮುಂದಿನ ಪೀಳಿಗೆಗೆ ನಮ್ಮ ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಕೊಂಡೊಯ್ಯುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಾಧವ ಗೌಡ ಹೇಳಿದರು. ಆರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪರಿವಾರಕಾನ ಒಕ್ಕೂಟ, ಆರಂಬೂರು ಒಕ್ಕೂಟ, ಶ್ರೀ ವರಮಹಾಲಕ್ಷ್ಮಿ...

ಮುಳಿಯ ಜ್ಯುವೆಲ್ಲರ್ಸ್ ಉದ್ಯೋಗಿ ಭವಾನಿಶಂಕರ ನಿಧನ

ಸುಳ್ಯ: ಸುಳ್ಯದ ಮುಳಿಯ ಜ್ಯುವೆಲ್ಲರ್ಸ್‌ನ ಉದ್ಯೋಗಿ ಭವಾನಿಶಂಕರ (47) ಅವರು ಅಲ್ಪಕಾಲದ ಅಸೌಖ್ಯದಿಂದ ಆ. 28ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಡೆಕೋಲು ಗ್ರಾಮದ ನಿವಾಸಿ ಭವಾನಿಶಂಕರ ಅವರು ಕಳೆದ 27 ವರ್ಷಗಳಿಂದ ಮುಳಿಯ ಜ್ಯುವೆಲ್ಲರ್ಸ್‌ನಲ್ಲಿ ಉದ್ಯೋಗಿಯಾಗಿದ್ದರು. ಕಿವಿ ಚುಚ್ಚುವ ಮೂಲಕ ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ನಿಧನದ ಹಿನ್ನೆಲೆಯಲ್ಲಿ ಮುಳಿಯ ಜ್ಯುವೆಲ್ಲರ್ಸ್ ಸೇರಿದಂತೆ...

ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ

ಪದವಿಪೂರ್ವ ಶಿಕ್ಷಣ ಇಲಾಖೆಯು ನಡೆಸಿರುವ 2026-27ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಬಾಲಕರ ಫುಟ್ಬಾಲ್ ಪಂದ್ಯಾಟವು ಆಗಸ್ಟ್ 22ರಂದು ಗಾಂಧಿನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಸತತವಾಗಿ ಎರಡನೇ ವರ್ಷ ವಿಜೇತರಾಗಿ ಹೊರಹೊಮ್ಮಿದೆ.

ಅಜ್ಜಾವರ : ಪ್ರೌಢಶಾಲೆಯಲ್ಲಿ ‘ಅನ್ನಪೂರ್ಣ ಭೋಜನ ಶಾಲೆ’ ಉದ್ಘಾಟನೆ – ಶ್ರೀ ಕ್ಷೇ.ಧ. ಗ್ರಾ.ಯೋಜನೆಯ ವತಿಯಿಂದ 75 ಸಾವಿರ ಅನುದಾನ ಮಂಜೂರು

ಅಜ್ಜಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಸುಳ್ಯ ತಾಲೂಕು ಅಜ್ಜಾವರ ವಲಯದ ವತಿಯಿಂದ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಪಿ.ಎಂ. ಪೋಷಣ್‌ ಮಧ್ಯಾಹ್ನ ಉಪಹಾರ ಯೋಜನೆಯ ‘ಅನ್ನಪೂರ್ಣ ಭೋಜನ ಶಾಲೆ’ ನಿರ್ಮಾಣಕ್ಕೆ ರೂ.75,000 ಅನುದಾನ ಮಂಜೂರು ಮಾಡಲಾಗಿದೆ. ‘ಅನ್ನಪೂರ್ಣ ಭೋಜನ ಶಾಲೆ’ಯ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಿದ ಬಿಎಂಎಸ್ ಸಂಯೋಜಿತ ಆಟೋ ಚಾಲಕರು

ಸುಳ್ಯ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ವತಿಯಿಂದ ಸಹೋದರತೆ ಹಾಗೂ ಸೌಹಾರ್ದತೆಯ ಸಂಕೇತವಾದ ರಕ್ಷಾ ಬಂಧನ ಕಾರ್ಯಕ್ರಮವನ್ನು ಸಂಘದ ಕಚೇರಿ ತಿಲಕ ಭವನ, ಹಳೆಗೇಟಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ,...

ಇಂದಿನ(ಆಗಸ್ಟ್ 28) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ದರದಲ್ಲಿ ಚೇತರಿಕೆ, ಅಡಿಕೆ ಉಪ ಉತ್ಪನ್ನಗಳಲ್ಲಿ ಇಳಿಕೆ ; ಮುಖ್ಯ ಅಡಿಕೆ, ಕಾಳುಮೆಣಸು ಧಾರಣೆಯಲ್ಲಿ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!