- Monday
- October 12th, 2026
ಸೌತ್ ಕೊರಿಯಾದಲ್ಲಿ ಆ.02 ರಿಂದ ಆ.12 ರ ವರೆಗೆ ನಡೆಯುವ 25 ನೇ ಅಂತರಾಷ್ಟ್ರೀಯ ಸ್ಕೌಟ್-ಗೈಡ್ ಜಾಂಬೂರಿಯಲ್ಲಿ ಸುಳ್ಯದ ಸಾಂಸ್ಕೃತಿಕ ಪ್ರತಿಭೆಗಳಾದ ಮಾ| ಮನುಜ ನೇಹಿಗ ಮತ್ತು ಕು|ಅಶ್ವಿನಿ ಸರವು ಭಾಗವಹಿಸಲಿದ್ದಾರೆ. ಮನುಜ ನೇಹಿಗ ಸುಳ್ಯ ಎಳವೆಯಿಂದಲೇ ಯಕ್ಷಗಾನ, ರಂಗಭೂಮಿ, ಸಂಗೀತ, ನೃತ್ಯ, ಇಂದ್ರಜಾಲ , ಮಣಿಪುರಿ ಸ್ಟಿಕ್ ಡ್ಯಾನ್ಸ್ ಮುಂತಾದ ಬಹುಮುಖ ಪ್ರತಿಭೆಯನ್ನು ಹೊಂದಿರುವ...
ಕಲ್ಲಪಳ್ಳಿ ಪಾಣತ್ತೂರು ಅಂತರ್ ರಾಜ್ಯ ಸಂಪರ್ಕಕಿಸುವ ರಸ್ತೆಯ ಬಾಟೋಳಿ ಎಂಬಲ್ಲಿ ಬೃಹದಾಕಾರದ ಬರೆ ಕುಸಿದು ರಸ್ತೆ ಮೇಲೆ ಮಣ್ಣು ಹಾಗೂ ಮರ ಬಿದ್ದು ವಾಹನ ಸಂಚಾರಕ್ಕೆ ವ್ಯತ್ಯಯವಾಗಿದೆ.ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬರೆ ಕುಸಿಯತೊಡಗಿದ್ದು ಈ ಭಾಗದಲ್ಲಿ ಹಿಂದೆಯೂ ಬರೆ ಕುಸಿತಗೊಂಡಿತ್ತು ಎಂದು ತಿಳಿದುಬಂದಿದೆ.
ಸುಳ್ಯ ತಾಲೂಕಿನಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇಂದು ಬೆಳ್ಳಿ ಹಬ್ಬ ಸಂಭ್ರಮದಲ್ಲಿದ್ದು, ಬಂಟರ ಭವನ ಕೇರ್ಪಳದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಸುಮನಾ ರಾವ್ ಪುತ್ತೂರು ಮತ್ತು ಬಳಗದಿಂದ ಸುಗುಮ ಸಂಗೀತ ಕಾರ್ಯಕ್ರಮ ಆರಂಭಗೊಂಡಿದೆ.
ಸುಳ್ಯದ ಅಂಬಟೆಡ್ಕದಲ್ಲಿರುವ ವಿದ್ಯುತ್ ಗುತ್ತಿಗೆದಾರರ ಸಂಘದ ವಾಣಿಜ್ಯ ಸಂಕೀರ್ಣದ ಮೇಲೆ ಅಳವಡಿಸಿದ್ದ ಅಲ್ಯೂಮಿನಿಯಂ ಶೀಟಿನಿಂದ ನಿರ್ಮಿಸಿದ ಛಾವಣಿ ಬೀಸಿದ ಭಾರಿ ಗಾಳಿಗೆ ಹಾರಿ ಕಂದಾಯ ಇಲಾಖೆಯ ಹೋಬಳಿ ಕಛೇರಿ ಎದುರಿಗೆ ಬಿದ್ದಿದೆ. ಈ ವೇಳೆ ಅಲ್ಲಿ ಯಾರು ಇಲ್ಲದಿದ್ದುದರಿಂದ ಸಂಭಾವ್ಯ ಅಪಾಯ ತಪ್ಪಿದೆ.
ಸುಳ್ಯದಿಂದ ಮಂಡೆಕೋಲಿಗೆ ತೆರಳುವ ರಸ್ತೆಗೆ ಬೃಹದಾಕಾರದ ಗಾಳಿಮರವೊಂದು ಅಡ್ಡಲಾಗಿ ಬಿದ್ದಿ ರಸ್ತೆ ಸಂಚಾರ ಅಡಚಣೆಯಾಗಿದೆ. ಕಾಂತಮಂಗಲದ ಜೀಜಬಾಯಿ ವೃತ್ತದ ಬಳಿ ಈ ಮರ ಬುಡಸಮೇತ ರಸ್ತೆಗೆ ಮಗುಚಿಬಿದ್ದಿದ್ದು , ವಿಧ್ಯುತ್ ತಂತಿಗಳು ಕಟ್ಟಾಗಿದ್ದು ಇದೀಗ ಮೆಸ್ಕಾಂ ಹಾಗೂ ಊರಿನವರ ಸಹಾಯದಲ್ಲಿ ಮರ ತೆರವು ಕಾರ್ಯ ನಡೆಯುತ್ತಿದೆ.
ನೆಹರೂ ಮೆಮೋರಿಯಲ್ ಕಾಲೇಜು ಇಲ್ಲಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಮಮತಾ ಪುರುಷೋತ್ತಮ ಇವರ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು ಡಾ. ಶಂಕರ ನಾರಣಪ್ಪ, ಅಸೋಸಿಯೇಟ್ ಪ್ರೊಫೆಸರ್, ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮೈಸೂರು ಇವರ ಮಾರ್ಗದರ್ಶನದಲ್ಲಿ “Role of Women members...
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು.ಈಗ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ...
ಕನಕಮಜಲು ಗ್ರಾಮದ ಬುಡ್ಲೆಗುತ್ತು ಯುರೇಶ್ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳವು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶ್ವಾನ ದಳ ಆಗಮನ ಪೊಲೀಸ್ ಶ್ವಾನದಳದ ಶ್ವಾನ ಆಗಮಿಸಿ, ಮನೆಯೊಳಗೆ ಹೋಗಿ ಅಲ್ಲಿಂದ ಹೊರಬಂದು ಸುಣ್ಣಮೂಲೆ ರಸ್ತೆಯಾಗಿ ವಿಷ್ಣುಮೂರ್ತಿ ಒತ್ತೆಕೋಲದ ದ್ವಾರದ ತನಕ ಓಡಿ ಹಿಂತಿರುಗಿತೆಂದು ತಿಳಿದುಬಂದಿದೆ. ಸಂಜೆ ವೇಳೆಗೆ ಸ್ಥಳಕ್ಕೆ ಮಂಗಳೂರಿನಿಂದ...
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ‍್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ವೇಣುಗೋಪಾಲ ಇವರ ಹತ್ಯೆ ಸೇರಿದಂತೆ...
ಸುಳ್ಯದ ಜಾಲ್ಸೂರಿನ ಸಿಂಡಿಕೇಟ್ ಬ್ಯಾಂಕ್ ಸಮೀಪವಿರುವ ಜೋಗಿ ಬೈದರಕೊಳಂಜಿ ಎಂಬವರ ಅಂಗಡಿಯ ಬೀಗ ಮುರಿದ ಕಳ್ಳರು ಡ್ರಯರ್ ನಲ್ಲಿದ್ದ ಚಿಲ್ಲರೆ ಹಣ ಸೇರಿದಂತೆ ಸುಮಾರು ಎರಡು ಸಾವಿರ ನಗದು ಹಾಗೂ ಅಂಗಡಿ ಸಾಮಾಗ್ರಿಗಳಾದ ಸೋಪು, ಜ್ಯೂಸ್ ಬಾಟಿಗಳನ್ನು ಕಳವುಗೈದಿರುವುದಾಗಿ ತಿಳಿದುಬಂದಿದೆ. ಹಾಗೆಯೇ ಗೂಡಂಗಡಿಯೊಂದಕ್ಕೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಮಾರಾಟಕ್ಕಿಟ್ಟಿದ್ದ ಕೊಡೆ ಸೇರಿದಂತೆ ಅಂಗಡಿ ಸಾಮಾಗ್ರಿಗಳನ್ನುಕಳವುಗೈದ...
Loading posts...
All posts loaded
No more posts
