- Sunday
- October 11th, 2026
ಮಳೆಗಾಲ ಆರಂಭಗೊಳ್ಳುತ್ತಿದ್ದು, ಇದರಿಂದ ಉಂಟಾಗುವ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಸುಳ್ಯ ತಹಶೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿತಾಲೂಕು ಪಂಚಾಯತ್ ಇ.ಒ. ಭವಾನಿಶಂಕರ್ ಉಪಸ್ಥಿತರಿದ್ದರು.ಪ್ರಾಕೃತಿಕ ವಿಕೋಪ ಸಂಭವಿಸಿದರೆ ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮ ಲೆಕ್ಕಾಧಿಕಾರಿಗಳು...
ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಮನೆ ರಾಮಚಂದ್ರ ಎಂಬವರ ಪತ್ನಿ ಅನಿತಾ (40)ಎಂಬವರು ತಮ್ಮ ತೋಟಕ್ಕೆ ಹೋಗಿದ್ದಾಗ ಅಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ರಾಮಚಂದ್ರರು ಬೆಳಗ್ಗೆ ಸುಳ್ಯಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಅವರು ಮಧ್ಯಾಹ್ನ ಮನೆಗೆ ಹೋದಾಗ ಪತ್ನಿ ಮನೆಯಲ್ಲಿ ಕಾಣಿಸಲಿಲ್ಲ. ತೋಟಕ್ಕೆ ಹೋಗಿರಬಹುದೆಂದು ಅವರನ್ನು ಹುಡುಕಿಕೊಂಡು ತೋಟಕ್ಕೆ ಹೋದಾಗ...
ಪಂಜದ ಅಳ್ಪೆ ನಾಯರ್ ಕೆರೆ ಕುಟುಂಬದ ನಾಗನಕಟ್ಟೆಯಲ್ಲಿ ನಾಗಬ್ರಹ್ಮ,ನಾಗಕನ್ನಿಕೆ, ನಾಗರಾಜ,ಒಂಟಿ ನಾಗರ ದೇವರುಗಳ ಪ್ರತಿಷ್ಠೆಯು ಅರ್ಚಕ ರಘುರಾಮ ಆಮ್ಮಣ್ಣಾಯ ರವರ ನೇತೃತ್ವದಲ್ಲಿ ಮೇ.24ರಂದು ಜರುಗಿತು.ಮೇ.20 ರಂದು ಆರಂಭಗೊಂಡು ಸರ್ಪಸಂಸ್ಕಾರ , ಆಶ್ಲೇಷ ಬಲಿ, ಗಣಹೋಮ ಮೊದಲಾದ ವೈಧಿಕ ಕಾರ್ಯಕ್ರಮಗಳು ಜರುಗಿತು.ಕುಟುಂಬಸ್ಥರು, ನೆಂಟರಿಷ್ಟರು, ಊರವರು ಉಪಸ್ಥಿತರಿದ್ದ
ನೂತನ ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ.ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್ ಅವರ ಹೆಸರನ್ನು ಸದನದಲ್ಲಿಂದು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಖಾದರ್ ಹೆಸರನ್ನು ಅನುಮೋದಿಸಿದರು. ನಂತರ ಬಹುಮತದ ಮೂಲಕ ಖಾದರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಆಯ್ಕೆಯಾದ...
ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆಯ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೇ.20 ರಂದು ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ರವರು ಮಾತನಾಡುತ್ತಾ “ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬೆಳಿಗ್ಗೆ...
ಅರಂತೋಡು ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುತ್ತೂಟು ಫೈನಾನ್ಸ್ ಸಂಸ್ಥೆಯಲ್ಲಿ ಇವರು ಕೆಲಸ ನಿರ್ವಹಿಸುತ್ತಿದ್ದರು.
ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರ ಕಾರ್ಯಕ್ರಮವು ಮೇ.22ರಂದು ಅರಂತೋಡು ಗ್ರಾಮ ಪಂಚಾಯತ್ ಅಮೃತ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆಯವರು ಉದ್ಘಾಟಿಸಿದರು. ಉಪಾಧ್ಯಕ್ಷೆ ಶ್ವೇತ ಹಾಗೂ ಪಂಚಾಯತ್ ಅಭಿವೃದ್ಧಿ ಆಧಿಕಾರಿ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆ ಹಾಗು ಕಚೇರಿ ಸಿಬ್ಬಂದಿಗಳು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಐವರ್ನಾಡು ಗ್ರಾಮದ ನಾಟಿಕೇರಿಯಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣವನ್ನು ರೋಟರಿ ಡಿಸ್ಟ್ರಿಕ್ಟ್ ಗವರ್ನರ್ ರೊ. ಪ್ರಕಾಶ್ ಕಾರಂತ್ ಉದ್ಘಾಟಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಕೇಶವ ಮೂರ್ತಿ ಮತ್ತು ಸದಸ್ಯರು, ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಾಧ್ಯಕ್ಷೆ...
ಸುಳ್ಯ ಕಸಬಾದ ಕಾಯರ್ತೋಡಿ ಸೂರ್ತಿಲ ವಿಷ್ಣುನಗರದಲ್ಲಿ ನೂತನವಾಗಿ ನಿರ್ಮಾಣ ಗೊಂಡ ಶ್ರೀ ರಕ್ತೇಶ್ವರೀ ಕ್ಷೇತ್ರದಲ್ಲಿ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ಬ್ರಹ್ಮಕಲಶೋತ್ಸವ ನಡೆದು ರಾತ್ರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ ಜರುಗಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು, ಸೇವಾ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ...
ಸುಳ್ಯ ಶಾಸಕಿಯಾಗಿ ಭಾಗೀರಥಿ ಮುರುಳ್ಯ ವಿಧಾನಸಭೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ವಿಧಾನಸಭೆಯ ಮೊದಲ ವಿಶೇಷ ಅಧಿವೇಶನ ಮೇ.22ರಂದು ಆರಂಭಗೊಂಡಿದೆ. ಮೇ.22ರಂದು ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕುಲದೇವರಾದ ಸತ್ಯಸಾರಮಣಿ, ಸತ್ಯಪದನಾಜಿ, ಅಮ್ಮನವರು ಹಾಗೂ ಮಾತದಾರ ಭಾಂಧವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
Loading posts...
All posts loaded
No more posts
