- Saturday
- March 7th, 2026
ಪಡ್ಪಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ನಡೆದಿತ್ತು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ,...
ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ.ವಿ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಜ.07 ರಂದು ಮುಂಜಾನೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
ಹರಿಹರ ಪಳ್ಳತ್ತಡ್ಕ ಗ್ರಾಮದ ಕೆರೆಕ್ಕೋಡಿ ಸೋಮಶೇಖರ ಎಂಬುವವರು ಜ.05 ರಂದು ಮದ್ಯಾಹ್ನ 2:00 ಗಂಟೆಗೆ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ(ಜ.04) ರಾತ್ರಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು(ಜ.05) ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.ಮೃತರಿಗೆ 56 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಬೇಬಿ, ಪುತ್ರಿಯರಾದ...
ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ಹಾಗೂ ಮಗು ಕೆರೆಗೆ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದ್ದು, ಹರೀಶ್ ಆರ್ವಾರ ಎಂಬುವವರ ಪತ್ನಿ ಮಧುಶ್ರೀ ಹಾಗೂ 2 ವರ್ಷದ ಮಗು ಧ್ವನಿ ಮೃತಪಟ್ಟವರು. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಾಲ್ಸೂರು ಗ್ರಾಮದ ಹುಲಿಮನೆಯವರಾದ ವೆಂಕಟ್ರಮಣ ಗೌಡರು ಬೇಂಗಮಲೆಯಲ್ಲಿ ನೆಲೆಸಿದ್ದರು. ಅಲ್ಪಕಾಲದ ಅಸೌಖ್ಯದಿಂದ ಜ.1 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 89 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ , ಓರ್ವ ಪುತ್ರ, ನಾಲ್ವರು ಪುತ್ರಿಯರು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ಗುತ್ತಿಗಾರು ಗ್ರಾಮದ ಬಲ್ಬೇರಿ(ಪಾಲ್ತಾಡಿ) ವಾಚಣ್ಣ ಗೌಡರ ಧರ್ಮಪತ್ನಿ ಶ್ರೀಮತಿ ಮೋಹಿನಿ ಇವರು ಹೃದಯಾಘಾತದಿಂದ ಜ.1 ರಂದು ನಿಧನರಾದರು.ಇವರಿಗೆ 65 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರಿಯರಾದ ಶ್ರೀಮತಿ ಭವ್ಯ ಗಣೇಶ ನಾವೂರು, ಶ್ರೀಮತಿ ಉಮಾ ಚೇತನ್ ಇಟ್ಟಿಗುಂಡಿ, ಶ್ರೀಮತಿ ಉಷಾ ದಯಾನಂದ ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಕೊಲ್ಲಮೊಗ್ರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಎಲ್.ಸಿ.ಆರ್.ಪಿ ಮೀನಾಕ್ಷಿ ಬೆಂಡೋಡಿ ಅವರು ಡಿ.20ರಂದು ಬೆಳಿಗ್ಗೆ 10:00 ಗಂಟೆ ಸುಮಾರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋ-ಬಿ.ಪಿ ಗೆ ಒಳಗಾಗಿ ಕೋಮಾ ಸ್ಥಿತಿಗೆ ಜಾರಿದ್ದ ಅವರು ಇಂದು(ಡಿ.20) ನಿಧನರಾದರು ಎಂದು ತಿಳಿದುಬಂದಿದೆ.ಮೃತರಿಗೆ 40 ವರ್ಷ ವಯಸ್ಸಾಗಿತ್ತು, ಮೃತರು...
ಗುತ್ತಿಗಾರು ಗ್ರಾಮದ ಪೈಕ ನೇರ್ಪು ಮೋಹನ ಗೌಡ ಡಿ.17 ರಂದು ನಿಧನರಾದರು. ಮೃತರು ಸಹೋದರ ಲೋಕಯ್ಯ ಗೌಡ ನೇರ್ಪು, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಳ್ಯ ಬೀರಮಂಗಲ ನಿವಾಸಿ ಉದ್ಯಮಿ ಸುಳ್ಯದಲ್ಲಿ ಸುದರ್ಶನ ಕೃಷಿ ಏಜೆನ್ಸಿಯ ಮಾಲಕರಾಗಿದ್ದ ಸುದೇಶ್ ಕುಮಾರ್ ಶೆಟ್ಟಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ.16ರಂದು ಬೆಳಿಗ್ಗೆ ನಿಧನರಾದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಅಕ್ಷತಾ ಶೆಟ್ಟಿ ಹಾಗೂ ಇಬ್ಬರು ಪುತ್ರರರಾದ ಸಮನ್ಯು ಹಾಗೂ ಶುಶಾನ್ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...
Loading posts...
All posts loaded
No more posts
