- Thursday
- April 3rd, 2025

ಕೊರೋನಾ ಮಹಾಮಾರಿ ವೈರಸ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳುಗಳಿಂದ ಮುಚ್ಚಲ್ಪಟ್ಟ ಎಲ್ಲಾ ಧಾರ್ಮಿಕ ಕೇಂದ್ರಗಳ ದ್ವಾರಗಳು ತೆರೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಮನಸ್ಸು ಮಾಡಿದ್ದಾರೆ.ಜೂನ್ 1ರಿಂದ ಪೂಜಾ ಕಾರ್ಯಕ್ರಮಗಳಿಗೆ ದೇವಸ್ಥಾನಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ ಮಸೀದಿ ಚರ್ಚುಗಳನ್ನು ತೆರೆಯುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳವಾರದಂದು ಹೇಳಿಕೆಯನ್ನು ನೀಡಿದ್ದರು.ಇದೇ ವಿಷಯಕ್ಕೆ...

ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...

ನಾಲ್ಕನೇ ಹಂತದ ಲಾಕ್ಡೌನ್ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್ಡೌನ್ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ. ಏಕಾಏಕಿ ನಾಲ್ಕೇ ನಾಲ್ಕು ಗಂಟೆ...

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...

ಮಾರಕ ಕೊರೊನಾ ಜಗತ್ತಿನಾದ್ಯಂತ ಜೀವ ಹಿಂಡುತಿದ್ದು ಅದರ ನಡುವೆ ಭಾರತದಲ್ಲಿ ಮರುಭೂಮಿ ಮಿಡತೆಯ ಕಾಟ ಶುರುವಾಗಿದೆ. ಕೊರನಾ ದಿಂದ ರೈತಾಪಿ ವರ್ಗದವರು ಹೆಚ್ಚು ಕಂಗೆಟ್ಟಿಲ್ಲವಾದರೂ ಆಕಸ್ಮಿಕವಾಗಿ ಬಂದ ಮಿಡತೆ ಹಾವಳಿಯಿಂದ ಅನ್ನದಾತರು ಹೆಚ್ಚು ಚಿಂತೆಪಡುವಂತಾಗಿದೆ. ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು...

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...

ನಾಪೋಕ್ಲು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೀಗ ಒಡೆದು ಚಿನ್ನಾಭರಣಕಳವು ಮಾಡಿದ ಪ್ರಕರಣ ಕಕ್ಕಬೇ ಸಮೀಪದ ಯುವಕ ಪಾಡಿ ಗ್ರಾಮದಲ್ಲಿ ನಡೆದಿದೆ. ಯುವಕಪಾಡಿ ಗ್ರಾಮದ ಕರ್ ತಂಡ ಮಾಚವ್ವ(ಮೀನ) ಎಂಬವರು ತಮ್ಮ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು4 ದಿನದ ಸಂಬಂಧಿಕರ ಮನೆಗೆ ತೆರಳಿದ್ದರುನೆನ್ನೆಯ ದಿನ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದು ಗೋಚರಿಸುತ್ತದೆಮನೆಯೊಳಗಿನ ಗೋದ್ರೆಜ್ ಮುರಿದು...

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...

All posts loaded
No more posts