ವಿದ್ಯುತ್ ಖಾಸಗೀಕರಣ ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ಸರಕಾರಕ್ಕೆ ಮನವಿ

ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ. ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ...

ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಳ್ಯದ ಗುತ್ತಿಗೆದಾರರ ಸಂಘ ಭಾಗಿ

ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು.  ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್,...
Ad Widget

ಅಮರ ಸುದ್ದಿ ವಿಶೇಷ ವರದಿ – ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇನ್ನೂ ಬಂದಿಲ್ಲ ಖಾಯಂ ವೈದ್ಯಾಧಿಕಾರಿಗಳು..!! – ವೈದ್ಯಾಧಿಕಾರಿಗಳಿಲ್ಲದೇ ಅನಾಥವಾಗಿರುವ ಆರೋಗ್ಯ ಕೇಂದ್ರಕ್ಕೆ ಔಷಧಿ ನೀಡುವವರು ಬೇಕಾಗಿದ್ದಾರೆ..!? – ವರದಿ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...

ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ಕಸದ ರಾಶಿ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸುಬ್ರಹ್ಮಣ್ಯ ರೈಲು ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ತಿಂಗಳುಗಳಿಂದ ಕಸ ಸಂಗ್ರಹವಾಗಿದ್ದು, ಪರಿಸರ ಮಾಲಿನ್ಯ ಹಾಗೂ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣವಾದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ...

ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ; ತುರ್ತು ಸ್ಪಂದಿಸಲು ಕೇಂದ್ರ ಸರ್ಕಾರಕ್ಕೆ ಸಂಸದ ಕ್ಯಾ. ಚೌಟ ಮನವಿ – ಎಂಐಡಿಹೆಚ್ ಮಿತಿ ವಿನಾಯಿತಿ ಹಾಗೂ ವಿಶೇಷ ಪ್ಯಾಕೇಜ್ ಘೋಷಣೆಗೆ ಕೃಷಿ ಸಚಿವ ಶಿವರಾಜ್ ಚೌಹಾಣ್‌ ಅವರಿಗೆ ಕೋರಿಕೆ

ನವದೆಹಲಿ : ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ 'ಹಳದಿ ಎಲೆ ರೋಗ' ಮತ್ತು 'ಎಲೆ ಚುಕ್ಕಿ ರೋಗ' ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ...

3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ – ಜೂ.16ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...

ಕುಕ್ಕೆ ಸುಬ್ರಹ್ಮಣ್ಯ : 600 ಕೋಟಿ ಮಾಸ್ಟರ್ ಪ್ಲಾನ್‌ಗೆ ಅನುಮೋದನೆ – ರಾಜ್ಯಮಟ್ಟದ ತಾಂತ್ರಿಕ ಸಲಹಾ ಸಮಿತಿಯಿಂದ ಸ್ಥಳ ಪರಿಶೀಲನೆ

ಸುಬ್ರಹ್ಮಣ್ಯ ಜೂನ್ 06 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನಂಪ್ರತಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ ಸಾವಿರಾರು ಭಕ್ತರ ಅನುಕೂಲಕ್ಕಾಗಿ ಸಮಗ್ರ‌ ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಮೂರನೇ ಹಂತದಲ್ಲಿ ಕೈಗೊಳ್ಳಲು ಉದ್ದೇಶಿಸಲಾಗಿರುವ ದೇವಸ್ಥಾನದ ಸುತ್ತುಪೌಳಿ ಮರುನಿರ್ಮಾಣ ಸಹಿತ ವಿವಿಧ ಕಾಮಗಾರಿಗಳಿಗೆ ಸಚಿವ ಸಂಪುಟದ ಒಪ್ಪಿಗೆಯೊಂದಿಗೆ ಆಡಳಿತಾತ್ಮಕ ಅನುಮೋದನೆ ಈಗಾಗಲೇ ದೊರಕಿರುತ್ತದೆ. ಇದರ ಮುಂದಿನ...

ಮಾಣಿ – ಸಂಪಾಜೆ ರಸ್ತೆ ಅಲೈನ್‌ಮೆಂಟ್‌ಗೆ ಇನ್ನೂ ಸಿಕ್ಕಿಲ್ಲ ಸಚಿವಾಲಯದ ಅನುಮೋದನೆ : ಮಾಹಿತಿ ಹಕ್ಕಿನಡಿ ಬಹಿರಂಗ

ಸುಳ್ಯ : ಕರ್ನಾಟಕ ರಾಷ್ಟ್ರ ಸಮಿತಿ(ಕೆ.ಆರ್.ಎಸ್) ಪಕ್ಷದ ಸುಳ್ಯ ಘಟಕದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ, ಮಂಗಳೂರು ಕಚೇರಿಗೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ-2005ರ ಕಾಯ್ದೆಯಡಿಯಲ್ಲಿ ಕೋರಿರುವ ಮಾಹಿತಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.ಕೆ.ಆರ್.ಎಸ್ ಸುಳ್ಯ ಘಟಕದ ಅಧ್ಯಕ್ಷ ಡಿ.ಯು ಶಾರಿಖ್ ಅವರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ನೀಡಲಾದ ಮಾಹಿತಿಯ ಪ್ರಕಾರ, ಅನಧಿಕೃತವಾಗಿ ಅಗೆದಿರುವ ರಸ್ತೆಯನ್ನು...

ದಕ್ಷಿಣ ಕನ್ನಡದಲ್ಲಿ ಬಂದೂಕು ಲೈಸನ್ಸ್ ನವೀಕರಣಕ್ಕೆ ತೀವ್ರ ತೊಂದರೆ ಅನುಭಸುತ್ತಿರುವ ಕೃಷಿಕರು – ತುರ್ತು ಸ್ಪಂದನೆಗೆ ಡಿಜಿಪಿ, ಜಿಲ್ಲಾಡಳಿತಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರ ಬರೆದು ಒತ್ತಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಕೃಷಿಕರು ಕಾನೂನು ಪ್ರಕಾರ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಸ್ವೀಕಾರದ ಅಂಗವಾಗಿ ವಿಶೇಷ ಪೂಜೆ

ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವರ ಪೂರ್ಣ ಅನುಗ್ರಹಕ್ಕಾಗಿ ಶ್ರೀ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿಯ...
Loading posts...

All posts loaded

No more posts

error: Content is protected !!