ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಕೊಳ್ಳಿ ಮುಹೂರ್ತ

ಕಳಂಜ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.19ರಂದು ಜರುಗಲಿದ್ದು, ಇದರ ಪೂರ್ವಭಾವಿಯಾಗಿ ಕೊಳ್ಳಿ ಮುಹೂರ್ತ ಕಾರ್ಯಕ್ರಮವು ಇಂದು (ಫೆ.01ರಂದು) ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಭಗವದ್ಭಕ್ತರು ಉಪಸ್ಥಿತರಿದ್ದರು.

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲಾ ಅಭಿವೃದ್ಧಿಗೆ ಕ್ಯಾಪ್ಟನ್ ಜನಾರ್ದನ ರಾವ್ ರಿಂದ ಐವತ್ತು ಸಾವಿರ ದೇಣಿಗೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮಹಾ ಪೋಷಕ ಕ್ಯಾಪ್ಟನ್ ಜನಾರ್ದನ ರಾವ್ ಬೈತ್ತಡ್ಕ ಅವರು ಶಾಲಾಭಿವೃದ್ಧಿಗೆ ರೂ.50,000 ಸಾವಿರವನ್ನು ದೇಣಿಗೆ ನೀಡಿದ್ದಾರೆ.ದೇಣಿಗೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ( ರಿ ) ಜಾಲ್ಸೂರು ಇದರ ಮಹಾಸಭೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ.ದೇರಣ್ಣ ಗೌಡ ಅಡ್ಡಂತಡ್ಕ ಮತ್ತು ಶಾಲಾ ಸಂಚಾಲಕ ಜಾಕೆ ಸದಾನಂದ ಅವರಿಗೆ ಹಸ್ತಾಂತರಿಸಿದರು.ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ...
Ad Widget

ಪವನ್ ಪಿಂಡಿಮನೆ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ನವದೆಹಲಿಯ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಇವರು ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪವನ್ ಪಿಂಡಿಮನೆ ತೇರ್ಗಡೆ ಯಾಗಿದ್ದಾರೆ.ಪವನ್ ರವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಕೆವಿಜಿ ಆಂಗ್ಲಮಾಧ್ಯಮ ಪ್ರೌಢ ಶಾಲೆ ಯಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಸುಳ್ಯ ಎನ್ನೆಂಪಿಯುಸಿಯಲ್ಲಿ ಪದವಿ...

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಅಲಿ, ಪ್ರಧಾನ ಕಾರ್ಯದರ್ಶಿಯಾಗಿ ರುನೈಝ್, ಕೋಶಾಧಿಕಾರಿಯಾಗಿ ಆಶಿಕ್ ಕೆ ಎಚ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಶಾಖೆಯ ವಾರ್ಷಿಕ ಮಹಾಸಭೆಯು ದಿನಾಂಕ 29-01-2023 ಆದಿತ್ಯವಾರದಂದು ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ ಶಾಖಾಧ್ಯಕ್ಷರಾದ ರಂಶಾದ್ ಕಲ್ಲುಗುಂಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯ ಸಮಿತಿ ಸದಸ್ಯರಾದ ಎ.ಎಂ.ಫೈಝಲ್ ಝುಹ್‌ರಿ ಉದ್ಘಾಟಿಸಿದರು. ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಅಧ್ಯಕ್ಷರಾದ ಎಫ್.ಹೆಚ್.ಮುಹಮ್ಮದ್ ಮಿಸ್ಬಾಹಿ ಮರ್ದಾಳ ರವರು ಸಂಘಟನಾ ತರಗತಿ ನಡೆಸಿಕೊಟ್ಟರು. ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಅಧ್ಯಕ್ಷರಾದ ಜಾಬಿರ್, ವೀಕ್ಷಕರಾಗಿ...

ಪೆರಾಜೆ : ರಾಜ್ಯಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪಡೆದ ರೇಖಾ ಯು.ಎಸ್. ರಿಗೆ ಸಹಕಾರಿ ಸಂಘದ ವತಿಯಿಂದ ಸನ್ಮಾನ

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಿಆರ್‌ಪಿ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಪಡೆದ ಶಿಕ್ಷಕರಾದ ಶ್ರೀಮತಿ ರೇಖಾ ಯು ಎಸ್ ಇವರಿಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಸನ್ಮಾನ ನೆರವೇರಿಸಿದರು. ಸಭೆಯಲ್ಲಿ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಅಶೋಕ ಪಿ ಎಂ ಹಾಗೂ ನಿರ್ದೇಶಕರುಗಳಾದ...

ಪಾಲಡ್ಕ : ಬಸ್ ಹಾಗೂ ಅಂಬ್ಯುಲೆನ್ಸ್ ಅಪಘಾತ

ಸುಳ್ಯ ಕಡೆಗೆ ಬರುತ್ತಿದ್ದ ರಾಜಹಂಸ ಬಸ್ ಹಾಗೂ ಸುಳ್ಯದಿಂದ ಹೋಗುತ್ತಿದ್ದ ಅಂಬ್ಯುಲೆನ್ಸ್ ಮಧ್ಯೆ ಇಂದು ಸಂಜೆ ಅಪಘಾತ ಸಂಭವಿಸಿದ ಘಟನೆ ಪಾಲಡ್ಕದಿಂದ ವರದಿಯಾಗಿದೆ. ರೋಗಿಯೊಬ್ಬರನ್ನು ಸುಳ್ಯದಿಂದ ಬೆಳ್ಳಾರೆಗೆ ಕೊಂಡೊಯ್ಯಲಾಗುತ್ತಿದ್ದು, ಅಂಬ್ಯುಲೆನ್ಸ್ ನಲ್ಲಿ ಕುಳಿತಿದ್ದ ಸ್ವಸ್ತಿಕ್ ಎಂಬ ಯುವಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ನಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ಹರಿಹರ ಪಲ್ಲತ್ತಡ್ಕ : ಸಾಮೂಹಿಕ ಸೂರ್ಯ ನಮಸ್ಕಾರ

ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಜ.28 ರಂದು ರಥ ಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಕೃಷ್ಣಪ್ರಸನ್ನ ಹಾಗೂ ಯೋಗಾಸಕ್ತರು ಉಪಸ್ಥಿತರಿದ್ದರು.

ಕಾಯರ್ತೋಡಿ : ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 5 ಲಕ್ಷ ಧನಸಹಾಯ

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ. ೩೧ರಿಂದ ಫೆ. ೯ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ರೂ. ೫ ಲಕ್ಷ ಧನಸಹಾಯ ನೀಡಿದರು.ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್, ಆರ್ಥಿಕ ಸಮಿತಿ ಸಂಚಾಲಕ ನಾರಾಯಣ ಕೇಕಡ್ಕ, ಎನ್.ಎ.ರಾಮಚಂದ್ರ, ರಾಧಾಕೃಷ್ಣ ರೈ ಬೂಡು, ಹೇಮಂತ್...

ಸುಳ್ಯ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ವರ್ಗಾವಣೆ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಅವರುಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.

ವಳಲಂಬೆ : ಮೊಬೈಲ್ ಬಿದ್ದು ಸಿಕ್ಕಿದೆ

ವಳಲಂಬೆಯಲ್ಲಿ ಮೊಬೈಲ್ ,ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು ವಳಲಂಬೆಯಲ್ಲಿರುವ ಪ್ರಸಾದ್ ಕೆ ಅವರ ಅಂಗಡಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.
Loading posts...

All posts loaded

No more posts

error: Content is protected !!