- Saturday
- November 23rd, 2024
ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಇಳಿದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ನ.8ರಂದು ರಾತ್ರಿ ಸಂಭವಿಸಿದೆ. ಮಳೆ ಕಾರಣ ಲಾರಿ ಆನೆಗುಂಡಿಯ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಸಂಚರಿಸಿ, ರಸ್ತೆ ಬದಿಯ ವಿದ್ಯುತ್...
ಉಬರಡ್ಕದ ಸೂಂತೋಂಡು ಬಳಿಯಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ರಚನಾ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಶಿಕ್ಷಕರು ಹಾಗೂ ಊರಿನವರು ಆಸ್ಪತ್ರೆ ಬಳಿ ನೆರೆದಿದ್ದು ಎಲ್ಲರಲ್ಲೂ ಶೋಕ ಮನೆ ಮಾಡಿದೆ. ಮೃತಪಟ್ಟ ವಿದ್ಯಾರ್ಥಿನಿ ಹೈಸ್ಕೂಲ್,, ಪಿಯುಸಿಯಲ್ಲಿ ಪ್ರತಿಭಾನ್ವಿತೆಯಾಗಿದ್ದು ಊರಿನಲ್ಲು ಜನರ ಜೊತೆ ಬೆರೆತು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಳು. ಯಕ್ಷಗಾನ ಕಲೆಯಲ್ಲೂ ತನ್ನ ಪ್ರತಿಭೆ ಪ್ರದರ್ಶಿಸಿದ್ದ ರಚನಾ ಇತ್ತೀಚೆಗೆ ನಡೆದ...
ಸುಳ್ಯ ಸೂಂತೋಡು ಬಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಡುತೋಟ ನಾರಾಯಣ ಕಾಡುತೋಟರವರ ಮಗಳು ರಚನ ಕಾಡುತೋಟ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು ಇನ್ನೊರ್ವ ಸಹ ಸವಾರೆ ಜೂನಿಯರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ದ್ವಿತೀಯ ವರ್ಷದ...
ಉಬರಡ್ಕದ ರಸ್ತೆಯ ಸೂಂತೋಡು ಸಮೀಪ ಸ್ಕೂಟಿ ಹಾಗೂ ಬಸ್ ನಡುವೆ ಇದೀಗ ಅಪಘಾತ ಸಂಭವಿಸಿದ್ದು ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿವ ವಿವರ ಲಭ್ಯವಾಗಿಲ್ಲ.
ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ...
ಸುಬ್ರಹ್ಮಣ್ಯ ರೋಟರಿ ಕ್ಲಬ್ ಆಶ್ರಯದಲ್ಲಿ ಬೆಂಗಳೂರು ಮಹಾಲಕ್ಷ್ಮಿ ಸೆಂಟ್ರಲ್ ರೋಟರಿ ಕ್ಲಬ್ ನವರು ಕೌಶಲ್ಯ ಅಭಿವೃದ್ಧಿ ಯೋಜನೆ ಅನ್ವಯ ಸುಬ್ರಹ್ಮಣ್ಯದ ದೇವರಹಳ್ಳಿ ಕೇಂದ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಹೊಲಿಗೆ ಮಿಷಿನ್ ವಿತರಣೆ ಹಾಗೂ ತರಬೇತಿ ಕಾರ್ಯಕ್ರಮವನ್ನು ನಡೆಸಲಿರುವರು.ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ವಹಿಸಲಿರುವರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ...
ಕಲ್ಲೆಂಬಿಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮನೆಯವರು ಸುಳ್ಯಕ್ಕೆ ಬಂದಿದ್ದಾಗ ಪುನಃ ಮನೆಗೆ ಹಿಂತಿರುಗಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ.ಕಾನೂನು...
ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಇಲಾಖೆ ವತಿಯಿಂದ ನಡೆದ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದ 80 ಮೀಟರ್ ಅಡೆತಡೆ ಓಟದಲ್ಲಿ ವಿದ್ಯಾಬೋಧಿನೀ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ| ಹರ್ಷಪ್ರಿಯ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಐವರ್ನಾಡು ಶ್ರೀಮತಿ ದೀಪ ಆರ್ ಮತ್ತು ಶ್ರೀ ಕುಮಾರ್ ಎಂ ದಂಪತಿಗಳ ಪುತ್ರಿ.
ಕನ್ನಡ ರಾಜ್ಯೋತ್ಸವ - ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ...
ಎಸ್.ಅಂಗಾರರು ಸಚಿವರಾಗಿದ್ದ 2022-23ನೇ ಸಾಲಿನಲ್ಲಿ ಸುರಿದ ಬಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ದುರಸ್ತಿಗಾಗಿ ಮಳೆ ಪರಿಹಾರ ಕಾರ್ಯಕ್ರಮದಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದ 3 ಕೋಟಿ ರೂ.ಗಳ ಕಾಮಗಾರಿಗಳ ಪಟ್ಟಿಗೆ ಆಗಿನ ಸರಕಾರ ಮಂಜೂರಾತಿ ನೀಡಿತ್ತು. ಆ ಪಟ್ಟಿಯಲ್ಲಿದ್ದ. ಈ ಕೆಳಗೆ ಉಲ್ಲೇಖಿಸಲಾದ ರಸ್ತೆಗಳ ಅಭಿವೃದ್ಧಿಗೆ...
Loading posts...
All posts loaded
No more posts