- Monday
- March 16th, 2026
ಹಿಂದೂ ಜಾಗರಣ ವೇದಿಕೆ ಕಣ್ಕಲ್ ಕೇನ್ಯ ಇದರ ವತಿಯಿಂದ ಅ.3ರಂದು ಸ್ವಚ್ಚತಾ ಶ್ರಮದಾನ ನಡೆಸಲಾಯಿತು. ನೇಲ್ಯಡ್ಕದಿಂದ ಐನಡ್ಕ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಇರುವ ಪೊದೆಗಳನ್ನು ಕಳೆ ಕೊಚ್ಚುವ ಯಂತ್ರದಲ್ಲಿ ಸ್ವಚ್ಚಗೊಳಿಸಲಾಯಿತು. ಈ ಶ್ರಮದಾನದಲ್ಲಿ ಜಾಗರಣ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಅಡ್ತಲೆ ಪ್ರಾಥಮಿಕ ಶಾಲೆಯಲ್ಲಿ ಗಾಂಧಿಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಸ್ಪಂದನ ಗೆಳೆಯರ ಬಳಗ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನಡೆಯಿತು. ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆಯವರು ಗಾಂಧಿ ನಡಿಗೆ ಜಾಥಾಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ. ಸಿ. ಅಧ್ಯಕ್ಷ ಗೋಪಾಲಕೃಷ್ಣ ಪಿಂಡಿಮನೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಜಯಾ ಲೋಹಿತ್...
ದೇವಚಳ್ಳ (ಎಲಿಮಲೆ) ಸ.ಹಿ.ಪ್ರಾ. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ರಮಾನಂದ ಎಲಿಮಲೆ, ಉಪಾಧ್ಯಕ್ಷರಾಗಿ ಸವಿತಾ ಸಿ. ಆಯ್ಕೆಯಾದರು. ಸದಸ್ಯರಾಗಿ ಲಲಿತಾ ಎನ್., ಸುನೀತಾ ಎಂ.ಆರ್., ಆಯಿಷಾ, ದಿವ್ಯಾ ಬಿ.ಎಲ್., ಸುನಂದ, ಕೋಮಲಾಂಗಿ, ವನಿತಾ ಪಿ., ಸೂಫಿ ಜೆ.ಎಂ., ಪುರುಷೋತ್ತಮ ಎಸ್.,ಓಂಪ್ರಸಾದ್ ಕೆ., ಜಯಪ್ರಕಾಶ್ ಕೆ., ಜಯಾನಂದ ಪಿ., ಜಯಂತ ಹರ್ಲಡ್ಕ, ಕುಸುಮಾಧರ ಎ.,...
ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ವತಿಯಿಂದ ಗಾಂಧಿ ಜಯಂತಿ ಆಚರಣೆಯನ್ನು ಚೆಡಾವು ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಶ್ರೀ ಮಾಚಯ್ಯ, ಸಹಾಯಕ ಉಪ ನಿರೀಕ್ಷಕರು ಸಂಪಾಜೆ ಪೊಲೀಸ್ ಹೊರ ಠಾಣೆ, ಇವರು ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.ಪ್ರಾಸ್ತಾವಿಕವಾಗಿ ಮಾತಾನಾಡಿದ ಶ್ರೀ ಪಿ.ಎಲ್ ಸುರೇಶ್ ,ಸದಸ್ಯರು ಗ್ರಾಮ ಪಂಚಾಯತ್ ಸಂಪಾಜೆ, ಯುವಕ ಮಂಡಲದ...
ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಅ.2 ರಂದು ಅಜಾದಿ ಕಾ ಅಮೃತ ಮಹೋತ್ಸವದ ಮತ್ತು ಗಾಂಧಿ ಜಯಂತಿ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾಮ ಪಂಚಾಯತಿನ ಸ್ವಚ್ಛವಾಹಿನಿ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು....
ಹರಿಪುರದಲ್ಲಿ ಸ.ಕಿ.ಪ್ರಾ.ಶಾಲೆಯಲ್ಲಿ ಅ.02 ರಂದು ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ದಿನಾಚರಣೆ, ಸನ್ಮಾನ ಹಾಗೂ 2019-20ನೇ ಸಾಲಿನ 5ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಎನ್ ಎನ್ ಎಂ ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾದ ಕು.ರಶ್ಮಿ.ಬಿ ಮತ್ತು ಮಾ.ವಿಕಾಸ್.ಕೆ.ಎಸ್, ಎಸ್.ಎಸ್.ಎಲ್.ಸಿ ಪರೀಕ್ಷಾ ಸಾಧಕರಾದ ಕು.ನಿಶ್ಮಿತಾ.ಕೆ.ಜಿ ಹಾಗೂ ಕು.ಸಿಂಚನಗೌರಿ, ಈ ಬಾರಿ...
ನಾಲ್ಕೂರು ಗ್ರಾಮದ ನಡುಗಲ್ಲಿನ ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿಯ ಸುತ್ತ ಅ.02 ರಂದು ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.ಈ ಸಂದರ್ಭದಲ್ಲಿ ಹರೀಶ್ ಕೊಯಿಲ, ವಿಜಯ ಚಾರ್ಮತ, ದಯಾನಂದ ಹುದೇರಿ, ನಿಶಿತ್ ಮೂರ್ಜೆ, ಮೇಘನ್ ಕಲ್ಲಾಜೆ, ಯತೀಶ್ ಕಲ್ಲಾಜೆ, ಅಶೋಕ್ ಕೊರಂಬಟ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. (ವರದಿ :- ಉಲ್ಲಾಸ್ ಕಜ್ಜೋಡಿ)
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನೋತ್ಸವವನ್ನು ಅ.2ರಂದು ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ಇದರ ಅಂಗವಾಗಿ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು. ನಂತರ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ "ರಘುಪತಿ ರಾಘವ ರಾಜಾರಾಮ್ ಪತಿತ ಪಾವನ ಸೀತಾರಾಮ್ " ಹಾಡು ಸರ್ವರಿಂದ ಮೊಳಗಿತು. ಪ್ರಭಾರ ಮುಖ್ಯ ಶಿಕ್ಷಕ ಚಂದ್ರಶೇಖರ ಪಾರೆಪ್ಪಾಡಿ...
ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಸ್ವ-ಸಹಾಯ ಸಂಘಗಳ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯ ಅಂಗವಾಗಿ ಅ.02 ರಂದು ಕಾರ್ಯಕ್ರಮ ನಡೆಸಲಾಯಿತು. ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಮಹಾತ್ಮಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ದೂರದೃಷ್ಟಿ ಯೋಜನೆ...
Loading posts...
All posts loaded
No more posts
