- Sunday
- March 15th, 2026
ಕೇಂದ್ರ ಸರಕಾರದಲ್ಲಿ ಸಚಿವರಾಗಿದ್ದ ಡಿ.ವಿ.ಸದಾನಂದ ಗೌಡ ರಾಜೀನಾಮೆ ನೀಡಿದ್ದು ಶೋಭ ಕರಂದ್ಲಾಜೆಯವರಿಗೆ ಕೇಂದ್ರ ಸಚಿವ ಸ್ಥಾನ ದೊರೆಯಲಿದೆ. ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ಕೆಲವು ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಸಚಿವ ಸಂಪುಟದಿಂದ ಕೈ ಬಿಡುವವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ಬಂದ ಹಿನ್ನೆಲೆಯಲ್ಲಿ ಸದಾನಂದ ಗೌಡರವರು ಸಚಿವ ಸಂಪುಟ...
ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸುಳ್ಯದ ಓಡಬಾಯಿ-...
ಸುಳ್ಯ: ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿನಿತ್ಯ ಏರಿಕೆಯಾಗುತ್ತಿದೆ. ಜೊತೆಗೆ ದಿನ ನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದ್ದು ಜನ ಸಾಮಾನ್ಯರಿಗೆ ಬದುಕಲು ಕಷ್ಟವಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಅವರು ಹೇಳಿದರು. ಪೆಟ್ರೋಲ್ ಬೆಲೆ ಏರಿಕೆಯನ್ನು ಖಂಡಿಸಿ ಸುಳ್ಯದಲ್ಲಿ ಜು.೭ ರಂದು ನಡೆದ ಸೈಕಲ್ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು....
ಅರಂತೋಡು ಗ್ರಾಮದ ಓಟೆಡ್ಕ ದಿ. ವೆಂಕಟ್ರಮಣ ಗೌಡರ ಪುತ್ರ ಯತೀಶ್ ( ಗುರು) ಹೃದಯಾಘಾತದಿಂದ ಜು.6 ರಂದು ನಿಧನರಾದರು. ಅವರಿಗೆ 26 ವರ್ಷ ವಯಸ್ಸಾಗಿತ್ತು. ಮೃತರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.
ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ವಿನಯ್ ಬಾಳಿಲ (ಕುಕ್ಕುತ್ತಡಿ) ಅವರು ಕಳೆದ ರಾತ್ರಿ ಮನೆ ಸಮೀಪದ ಮರವೊಂದಕ್ಕೆ ಜು.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. 6 ತಿಂಗಳ ಹಿಂದೆ ವಿವಾಹವಾಗಿದ್ದ ಇವರು ಪತ್ನಿ, ತಂದೆ ಬಾಬು ಗೌಡ, ತಾಯಿ ಚಂದ್ರಾವತಿ, ಸಹೋದರ ಸುರೇಶ, ಸಹೋದರಿ ಶ್ರೀಮತಿ ನವೀನ...
ಅರಂತೋಡು ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ದೇರಾಜೆ, ಗ್ರಾ.ಪಂ. ಸದಸ್ಯರು, ವಾಹನ ಮಾಲಕ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.
ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಸಂಪಾಜೆ ಕೊಡಗು ಇದರ ಆಶ್ರಯದಲ್ಲಿ ಶ್ರೀ ಭಗವಾನ್ ಸಂಘ (ರಿ)ಊರುಬೈಲು ಇವರಿಂದ ಜು.7 ರಂದು ಸಂಪಾಜೆಯಲ್ಲಿ ವನಮಹೋತ್ಸವ ಆಚರಣೆ ಮಾಡಲಾಯಿತು. ಸಂಪಾಜೆ ಗೇಟ್ ಬಳಿಯ ಮುಖ್ಯ ರಸ್ತೆಯ ಅಂಚಿನಲ್ಲಿ ಕಳೆನಾಶ ಮಾಡಿ ,ಪ್ಲಾಸ್ಟಿಕ್ ತ್ಯಾಜ್ಯ ಆಯುವ ಮೂಲಕ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಯಿತು. ಆ ಬಳಿಕ ರಸ್ತೆಯ ಅಂಚಿನುದ್ದಕ್ಕೂ ಸಸಿಗಳನ್ನು...
ಕಳಂಜ ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗಿದ್ದ ಕಾರ್ಮಿಕರ ಕಿಟ್ ವಿತರಿಸಲಾಯಿತು. ಕಾರ್ಮಿಕ ಇಲಾಖೆಯ ಅಧೀನದಲ್ಲಿ ನೋಂದಾಯಿತ ಕಾರ್ಮಿಕರ ಮನೆ ಮನೆಗೆ ತೆರಳಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಸದಸ್ಯ ಬಾಲಕೃಷ್ಣ ಬೇರಿಕೆ ಮತ್ತಿತರರು ಹಾಜರಿದ್ದರು. ಕಳಂಜ ಗ್ರಾಮದ ಒಟ್ಟು 57 ಮಂದಿಗೆ ಸರ್ಕಾರ ನೀಡಿದ ಕಾರ್ಮಿಕರ ಕಿಟ್ ವಿತರಿಸಲಾಯಿತು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
ಸುಳ್ಯ ಕಾಂಗ್ರೆಸ್ ಸೇವಾದಳ, ನಗರ ಕಾಂಗ್ರೆಸ್ ಮತ್ತು ಬೋರುಗುಡ್ಡೆ ಹಿಂದೂ ರುದ್ರ ಭೂಮಿ ಅಭಿವೃದ್ಧಿ ಸಮಿತಿಯ ಸಹಕಾರದಲ್ಲಿ ಸುಳ್ಯ ನಗರದ ಬೋರುಗುಡ್ಡೆ ನಾವೂರು ಪ. ಜಾತಿ ಕಾಲೋನಿಯ ಮೀಸಲು ಹಿಂದೂ ರುದ್ರ ಭೂಮಿ ಯಲ್ಲಿ ಶ್ರಮದಾನದ ಮೂಲಕ ಕಾಡು ಕಡಿದು ಸ್ವಚ್ಛತೆ ಕಾರ್ಯ ಮಾಡಲಾಯಿತು. ನಂತರ ಸ್ಥಳದಲ್ಲಿ ಗಿಡ ನೆಡಲಾಯಿತು. ಶ್ರಮದಾನದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ...
Loading posts...
All posts loaded
No more posts
