- Sunday
- March 15th, 2026
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ...
ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 72ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಖಾತೆಯ ನೂತನ ಸಚಿವ ಎಸ್. ಅಂಗಾರ ಅವರು ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ಧ್ವಜಾರೋಹಣ ನೆರವೇರಿಸಿದರು.ಬಳಿಕ 72ನೇ ಗಣರಾಜ್ಯೋತ್ಸವದ ಪ್ರಯುಕ್ತ ಶುಭಹಾರೈಸಿದರಲ್ಲದೆ ಹುತಾತ್ಮ ಸೈನಿಕರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ...
ಸುಳ್ಯ ಮೆಸ್ಕಾಂನಲ್ಲಿ 72ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜರೋಹಣ ಕಾರ್ಯಕ್ರಮ ಇಂದು ನಡೆಯಿತು. ಜೆ.ಇ.ಬೋರಯ್ಯ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಜೆ.ಇ.ಸುರೇಶ್ ಭಟ್, ಪ್ರಭಾರ ಜೆಇ ಜಯಪ್ರಕಾಶ್ ಕೆ. ಹಾಗು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶ್ರೀ ಶಾರದಾ ಮಹಿಳಾ ಸಮೂಹ ವಿದ್ಯಾಸಂಸ್ಥೆಗಳ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘ (ರಿ) ಸುಳ್ಯ ಇದರ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಇವರು ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಪೆರುವಾಜೆ ಗ್ರಾಮದ ಮುಕ್ಕೂರು ಬಿರುಸಾಗು ನಿವಾಸಿ ಮಾಧವಿ ರೈ ಯವರು ಮನೆಯ ಮೇಲ್ಛಾವಣಿ ಶಿಥಿಲಗೊಂಡು ಬೀಳುವ ಸ್ಥಿತಿಯಲ್ಲಿದ್ದು, ಅಪಾಯವನ್ನು ಆಹ್ವಾನಿಸುವಂತಿತ್ತು. ಈ ವಿಷಯ ಮನಗಂಡ ಯುವಸೇನೆ ಮುಕ್ಕೂರು ಪೆರುವಾಜೆಯ ಸದಸ್ಯರು ಬೀಳುವ ಸ್ಥಿತಿಯಲ್ಲಿದ್ದ ಮನೆಯ ದುರಸ್ತಿ ಕಾರ್ಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕ್ಯಾನ್ಸರ್ ನಿಂದ ಕೆಲವು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದ ಮಾಧವಿ ರೈ ಯವರು...
ಸುಳ್ಯದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ಇದೀಗ ಬಂದರು, ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿದ ಎಸ್.ಅಂಗಾರ ಅವರಿಗೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಜ.25 ರಂದು ನಡೆದ ಸಾರ್ವಜನಿಕ ಸಮಾರಂಭದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ನಡೆಯಿತು. ಸಚಿವ ಎಸ್.ಅಂಗಾರ ಮತ್ತು ವೇದಾವತಿ ದಂಪತಿಗಳನ್ನು ಈ ಅದ್ದೂರಿ ಕಾರ್ಯಕ್ರಮದಲ್ಲಿ ಪೇಟ ತೊಡಿಸಿ, ಹೂಮಾಲೆ...
ಸುಳ್ಯ ವಿಧಾನ ಸಭಾ ಕ್ಷೇತ್ರದ ಎನ್.ಎಸ್.ಯು.ಐ ವತಿಯಿಂದ ಇಂದು ಕ್ಯಾಂಪಸ್ ಗೇಟ್ ಮೀಟ್’ ಅಭಿಯಾನವನ್ನು ಕೆ ಎಸ್ ಎಸ್ ಕಾಲೇಜ್ ಹಾಗೂ ಎನ್ ಎಂ ಸಿ ಕಾಲೇಜಿನ ಕ್ಯಾಂಪಸ್ ನ ಹೊರಗಡೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಸುಳ್ಯ ಎನ್ ಎಸ್ ಯು ಐ ಮುಖಂಡರುಗಳದ ಕೀರ್ತನ್ ಗೌಡ ಕೊಡಪಾಲ, ಆಶಿಕ್ ಆರಂತೋಡು, ಪವನ್ ಅಂಬೇಕಲ್ಲು, ಕೌಶಿಕ್...
ಸುಳ್ಯದ ಬಂಗಾರ, ನೂತನ ಸಚಿವರಾದ ಶ್ರೀ ಎಸ್. ಅಂಗಾರರವರನ್ನು ಕೇನ್ಯ ಗ್ರಾಮಸ್ಥರ ಪರವಾಗಿ ಜ. 25 ರಂದು ಸನ್ಮಾನಿಸಲಾಯಿತು. ಇದೇ ವೇಳೆ ಕೇನ್ಯ , ಐನಡ್ಕ, ಬರಮೇಲು, ಕೆರೆಕೋಡಿ , ನೇಲ್ಯಡ್ಕ , ಕಣ್ಕಲ್, ಪೆರುಂಬುಡ ಮತ್ತು ಕಾರ್ಯತಡ್ಕದವರೆಗೆ ಕಾಂಕ್ರೀಟಿಕರಣ ಮಾಡುವಂತೆ ಸಚಿವರಿಗೆ ಮನವಿ ಪತ್ರ ನೀಡಲಾಯಿತು.
ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಹಾಗೂ ವರ್ಷಾವಧಿ ಜಾತ್ರೋತ್ಸವ ಫೆ. 18 ರಿಂದ 20 ತನಕ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಮತ್ತು ರಕ್ತೇಶ್ವರಿ, ವನಶಾಸ್ತಾವು, ನಾಗದೇವರು, ಪರಿವಾರ ದೈವಗಳ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವ ಬ್ರಹ್ಮಶ್ರೀ ವಾಸುದೇವ ತಂತ್ರಿಗಳವರ ಮಾರ್ಗದರ್ಶನದಲ್ಲಿ ಜರುಗಲಿರುವುದು. ಫೆ 12 ರಂದು ಬೆಳಿಗ್ಗೆ...
Loading posts...
All posts loaded
No more posts
