ಹಾಲೆಮಜಲು :- ಗಾಂಧಿ ಜಯಂತಿ ಅಂಗವಾಗಿ ಸಾರ್ವಜನಿಕ ಬಸ್ ತಂಗುದಾಣದ ಸ್ವಚ್ಛತೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ವತಿಯಿಂದ ಅ.02 ರ ಗಾಂಧಿ ಜಯಂತಿಯ ಅಂಗವಾಗಿ ಹಾಲೆಮಜಲು ಸಾರ್ವಜನಿಕ ಬಸ್ ತಂಗುದಾಣವನ್ನು ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ್ ಹಾಲೆಮಜಲು ಹಾಗೂ ಸ್ವಯಂಸೇವಕರಾದ ಲೋಹಿತ್, ಪ್ರಜ್ವಲ್, ಕಾರ್ತಿಕ್, ಕರುಣಾಕರ, ಹರಿಶ್ಚಂದ್ರ ಕುಳ್ಳಂಪಾಡಿ ಈ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು. (ವರದಿ...

ಹರಿಹರ ಪಲ್ಲತ್ತಡ್ಕ :- ಗ್ರಾಮಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ ಅ.02 ರಂದು ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆ ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಗ್ರಾಮಪಂಚಾಯತ್ ಅದ್ಯಕ್ಷರಾದ ಜಯಂತ್ ಬಾಳುಗೋಡು ದೀಪ ಬೆಳಗಿಸಿ ಉದ್ಘಾಟಿಸಿದರು. ಗ್ರಾಮಪಂಚಾಯತ್ ಪಿ.ಡಿ.ಓ ಪುರುಷೋತ್ತಮ ಮಣಿಯಾನ ಹಾಗೂ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಭೆಯಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ,...
Ad Widget

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ : ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿಯವರ ಜಯಂತಿ ಆಚರಣೆಯು ಅ.2 ರಂದು ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಹಸೀನಾಭಾನು ಪುಷ್ಪಾರ್ಚನೆ ಮಾಡಿದರು.ಶಿಕ್ಷಕ ರಾಮಚಂದ್ರ ಭಟ್ ರವರು ಗಾಂಧೀಜಿ ಮತ್ತು ಲಾಲ್ ಬಹಾದ್ದೂರು ಶಾಸ್ತ್ರಿಯವರ ಬಗ್ಗೆ ಮಾತನಾಡಿದರು.ಶಿಕ್ಷಕರು ಸರ್ವಧರ್ಮ ಪ್ರಾರ್ಥನೆ ಮಾಡಿದರು.ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಗಾಂಧಿ ಕುರಿತ ಹಾಡು...

ಕೃಷಿ ಭೂಮಿಯನ್ನು ಅರಣ್ಯವನ್ನಾಗಿಸಲು ಪಿತೂರಿ – ಭ್ರಷ್ಟಾಚಾರ ವ್ಯವಸ್ಥೆ ಹಾಗೂ ಕೃಷಿ ಭೂಮಿಯನ್ನು ಅರಣ್ಯವನ್ನಾಗಿಸಿದರೆ ಪ್ರತಿಭಟನೆಯ ಎಚ್ಚರಿಕೆ : ಮಲೆನಾಡು ಜನಹಿತ ರಕ್ಷಣಾ ವೇದಿಕೆ

ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರು ವಾಸಿಸುತ್ತಿರುವ ಹಾಗೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ಕೃಷಿ ಭೂಮಿಗಳನ್ನು ಅರಣ್ಯವನ್ನಾಗಿ ಪರಿವರ್ತನೆ ಮಾಡಿ ಭಾರತವನ್ನು ಬಡರಾಷ್ಟ್ರವನ್ನಾಗಿ ಮಾಡಲಾಗುತ್ತಿದೆ ಎಂದು ಅ.01ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಆರೋಪಿಸಿದರು.ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರ ಬದೂಕನ್ನು ಕಸಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಹಾಗೂ ಕಾಡು...

ಪೆರಾಜೆ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಅಂಗವಾಗಿ ಶ್ರಮದಾನ

ಪೆರಾಜೆ: ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಪೆರಾಜೆ ಹಾಗೂ ಚಿಗುರು ಯುವಕ ಮಂಡಲ ಹಾಗೂ ಯುವ ಕೋಟೆ ಯುವಕ ಮಂಡಲ ಪೆರಾಜೆ ಇದರ ವತಿಯಿಂದ ಶ್ರಮದಾನ ಕಾರ್ಯಕ್ರಮ ನಡೆಯಿತು. ಈ ಶ್ರಮದಾನ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಯುವಕ ಮಂಡಲದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಭಾಗವಹಿಸಿದ್ದರು.

ಕಲ್ಮಡ್ಕ: ಗಾಂಧೀ ಜಯಂತಿ ಆಚರಣೆ- ಘನತ್ಯಾಜ್ಯ ಘಟಕದ ಕಸ ವಿಲೇವಾರಿಯ ವಾಹನ ಹಾಗೂ ಘನತ್ಯಾಜ್ಯ ಘಟಕದ ಉದ್ಘಾಟನೆ

ಕಲ್ಮಡ್ಕ ಗ್ರಾಮ ಪಂಚಾಯತಿನಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್ ರವರು ದೀಪ ಬೆಳಗಿಸಿದರು. ಗ್ರಾಮ ಪಂಚಾಯತ್ ಘನತ್ಯಾಜ್ಯ ಘಟಕದ ಕಸ ವಿಲೇವಾರಿಯ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು. ಕಲ್ಮಡ್ಕ ಗ್ರಾಮ ಪಂಚಾಯತಿನ ನೂತನವಾಗಿ ನಿರ್ಮಿಸಲಾದ ಘನತ್ಯಾಜ್ಯ ಘಟಕದ ಕಟ್ಟಡವನ್ನು ಮಾಜಿ...

ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಮತ್ತು ಶ್ರಮದಾನ ಕಾರ್ಯಕ್ರಮ

ಕೊಡಿಯಾಲ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಶ್ರೀ ಗೌರಿ ಸಂಜೀವಿನಿ ಸ್ವ-ಸಹಾಯ ಸಂಘ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಜಯಂತಿ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ವಿಶೇಷ ಸಭೆ, ದೂರದೃಷ್ಟಿ ಯೋಜನೆ ತಯಾರಿ, ನೀರು ನೈರ್ಮಲ್ಯ ಮಾಹಿತಿ, ಮನೆ ಮನೆಗೆ ನರೇಗಾ ಕಾರ್ಯಕ್ರಮ ಉದ್ಘಾಟನೆ, ಮನರೇಗಾ ಕಾಮಗಾರಿ ಬೇಡಿಕೆ...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸರಕಾರಿ ಪ್ರೌಢಶಾಲೆ ಎಣ್ಮೂರು,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಎಣ್ಮೂರು ಇದರ ವತಿಯಿಂದ 152ನೇ ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಸರ್ವಧರ್ಮ ಪ್ರಾರ್ಥನೆಯ ಮೂಲಕ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೀತಲ್ ಈ ದಿನದ ಮಹತ್ವದ ಬಗ್ಗೆ ಮಾತನಾಡಿದರು.ಗಾಂಧೀ ಜಯಂತಿ ಹಾಗೂ...

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 117ನೇ ಜನ್ಮದಿನಾಚರಣೆಯನ್ನು ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಳಿನಿ ಪಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಯಶೋಧರ ಎನ್ ಸ್ವಾಗತಿಸಿ, ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್...

ಐವರ್ನಾಡು ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನದ ಅಂಗವಾಗಿ ಸ. ಪ.ಪೂರ್ವ ಕಾಲೇಜು ಐವರ್ನಾಡು ಇಲ್ಲಿ ಸಭಾ ಕಾರ್ಯಕ್ರಮ, ಗೌರವ ನಮನ, ಫಿಟ್ ಇಂಡಿಯಾ ಫ್ರೀಡಂ ರನ್ 2.0 ಹಾಗೂ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಪ್ರಾಚಾರ್ಯರು, ಪ್ರೌಢಶಾಲಾ ಶಿಕ್ಷಕರು, ಎಲ್ಲಾ ಉಪನ್ಯಾಸಕ, ಶಿಕ್ಷಕ , ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!