- Sunday
- August 9th, 2026
ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹರಿಹರ ಪೇಟೆಯಲ್ಲಿ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಉಪಾಧ್ಯಕ್ಷ ವಿಜಯ ಅಂಙಣ ದ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ, ಪದ್ಮಾವತಿ ಕಲ್ಲೇಮಠ, ಬಿಂದು ಗುಂಡಿಹಿತ್ಲು, ಪಿ.ಡಿ.ಓ ಪುರುಷೋತ್ತಮ ಮಣಿಯಾನ, ಸಂಜೀವಿನಿ ಒಕ್ಕೂಟದ ಅದ್ಯಕ್ಷರು,...
ಮರ್ಕಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃಧ್ಧಿ ಯೊಜನೆ ಗೋಳಿಯಡ್ಕ ಮತ್ತು ಮರ್ಕಂಜ ಒಕ್ಕೂಟಗಳ ವತಿಯಿಂದ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಭಯೋತ್ಪಾದನಾ ಚಟುವಟಿಕೆ ಮತ್ತು ಹಿಂದು ಯುವತಿಯರನ್ನು ಲವ್ ಜಿಹಾದ್ ಬಲೆಗೆ ಬೀಳಿಸಿ ಅವರನ್ನು ಭಯೋತ್ಪಾದನಾ ಚಟುವಟಿಕೆಗೆ ಬಳಸುವ ಭಯೋತ್ಪಾದಕರ ಷಡ್ಯಂತ್ರದ ವಿರುದ್ಧ ಮತ್ತು ಮಂಗಳೂರಿನಲ್ಲಿ ಎನ್ ಐ ಎ ಕಛೇರಿ ತೆರೆದು ಭಯೋತ್ಪಾದನಾ ಚಟುವಟಿಕೆಯನ್ನು ನಿಯಂತ್ರಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿ ಹಿಂದು ಜಾಗರಣ ವೇದಿಕೆಯ ವತಿಯಿಂದ ಆ.17 ರಂದು ಬೆಳಗ್ಗೆ 11...
ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗ್ರಾ.ಪಂ.ಅಧ್ಯಕ್ಷೆ ರೇವತಿ ಆಚಳ್ಳಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಶ್ರೀಮತಿ ಚೈತ್ರಾ ಭಾನು, ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಭಾರತ ಸ್ವತಂತ್ರಗೊಂಡು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಈ ದಿನದಲ್ಲಿ ಭಾರತದ ಇದುವರೆಗಿನ ಸಾಧನೆ ಅಪಾರ. ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ರಕ್ಷಣಾ ಕ್ಷೇತ್ರ, ವೈಜ್ಞಾನಿಕ ಕ್ಷೇತ್ರ ಹೀಗೆ ಭಾರತವು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ ಯುವಜನತೆ ಇನ್ನಷ್ಟು ಒಳ್ಳೆಯ ಕಾರ್ಯಗಳನ್ನು ಮಾಡುವ ಮೂಲಕ ದೇಶವನ್ನು ಮತ್ತಷ್ಟು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು...
ರಕ್ತದಾನ ಜೀವ ಉಳಿಸುವುದರ ಜೊತೆಗೆ ರಕ್ತದಾನಿಗಳ ಆರೋಗ್ಯವನ್ನು ಕಾಪಾಡುತ್ತದೆ. ಆ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಆಚರಣೆಯ ಈ ಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕ ಯುವ ರೆಡ್ ಕ್ರಾಸ್ ಘಟಕದ ಕಾರ್ಯ ಅವಿಸ್ಮರಣೀಯವಾಗಿದೆಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷರಾದ ಡಾ. ಕೆ. ವಿ ಚಿದಾನಂದ ಅವರು ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ...
ಅರೋಗ್ಯ ಇಲಾಖೆಯಿಂದ ಜನವರಿ 2021ರಿಂದ ಜೂನ್ 2021ರ ವರೆಗೆ ಕೋವಿಡ್ ಪಾಸಿಟಿವ್ ಬಂದು ಕೋವಿಡ್ ಗುಣಮುಖರಾದ ಜನರಿಗೆ ಮತ್ತು ಮನೆಯ ಸದಸ್ಯರಿಗೆ ಸಕ್ರೀಯ ಕ್ಷಯ ರೋಗ ಪತ್ತೆ ಆಂದೋಲನವನ್ನು ಆ.16 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದ್ದು ಇಲಾಖೆಯ ಪ್ರಾಥಮಿಕ ಅರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತರು ಜನವರಿ 2021 ರಿಂದ ಜೂನ್ 2021 ರವರೆಗೆ ಕೋವಿಡ್ ಪಾಸಿಟಿವ್...
ಪೆರುವೋಡಿ ದೇವಸ್ಥಾನಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಇದನ್ನು ಮನಗಂಡ ಊರಿನ ನಾಗರಿಕರು ಶ್ರಮದಾನದ ಮೂಲಕ ಸರಿಪಡಿಸಿದರು. ಈ ರಸ್ತೆ ಸಂಚಾರಕ್ಕೆ ದುಸ್ತರವಾಗಿದ್ದು ಆದಷ್ಟು ಬೇಗ ಕಾಂಕ್ರೀಟಿಕರಣಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.
ಅಜ್ಜಾವರ ಗ್ರಾಮದ ತುದಿಯಡ್ಕ ಶ್ರೀ ಸದಾಶಿವ ದೇವಾಲಯದ ಆವರಣ ಹಾಗೂ ಸುತ್ತಮುತ್ತಲೂ ಗಿಡ ಗಂಟಿಗಳು ಬೆಳೆದಿದ್ದು ಇದನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳ ವತಿಯಿಂದ ಶ್ರಮದಾನದ ಮೂಲಕ ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸೋಮನಾಥ ಮುಳ್ಯಕಜೆ, ಕಾರ್ಯದರ್ಶಿ ಗುರುವಪ್ಪ ಹಾಗೂ ಸಂಘದ ಸದಸ್ಯರಾದ ಲಕ್ಷ್ಮಣ, ಕುಶಲ, ಲೋಕೇಶ್,ಅಜಿತ್ ಕುಶಾಲಪ್ಪ, ಕಮಲಾಕ್ಷ ಮುಂತಾದವರು ಪಾಲ್ಗೊಂಡಿದ್ದರು.
ಅಮರಮುಡ್ನೂರಿನ ಅಮರ ಸಂಘಟನಾ ಸಮಿತಿಯಿಂದ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗ ಸುಬ್ರಹ್ಮಣ್ಯ, ಉಪ ವಿಭಾಗ ಪಂಜ ವಲಯ ಮತ್ತು ಗ್ರಾಮ ಪಂಚಾಯತ್ ದೇವಚಳ್ಳ ಇದರ ಸಂಯುಕ್ತ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 'ಮರ ಬೆಳೆಸಿ, ಬರ ಅಳಿಸಿ-ತಾಪ ಇಳಿಸಿ' ಧ್ಯೇಯದೊಂದಿಗೆ ದೇವಚಳ್ಳದ ಮಾವಿನಕಟ್ಟೆಯಲ್ಲಿ ಗಿಡ ನೆಡುವ ಕಾರ್ಯಕ್ರಮ ಮತ್ತು ಕಳೆದ ಬಾರಿ ನೆಟ್ಟಿರುವ ಗಿಡಗಳ...
Loading posts...
All posts loaded
No more posts
