- Saturday
- August 8th, 2026
ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಎಂಬುವವರ ಮನೆಯ ಸಮೀಪದ ಬರೆ ಜು.13ರಂದು ರಾತ್ರಿ ಕುಸಿದು ಬಿದ್ದಿದೆ. ಬರೆಯ ಮೇಲಿದ್ದ ಮರ ಮನೆಯ ಮೇಲೆ ಬಿದ್ದು ಮನೆಯ ಮಾಡು ಜಖಂಗೊಂಡಿದೆ. ಜು.14 ರಂದು ಸ್ಥಳೀಯರು ದುರಸ್ತಿ ಕಾರ್ಯಕ್ಕೆ ಸಹಕರಿಸಿದರು. *✍ವರದಿ :- ಉಲ್ಲಾಸ್ ಕಜ್ಜೋಡಿ*
ಸಂಪಾಜೆಯ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವದೇಶಿ ಉತ್ಪನ್ನ ಮೋದಿಕೇರ್ ಮಳಿಗೆ ಜು.13 ರಂದು ಶುಭಾರಂಭಗೊಂಡಿತು. ಸಂಘದ ಅದ್ಯಕ್ಷ ಯನ್.ಸಿ ಅನಂತ್ ಊರುಬೈಲು ರವರು ದೀಪ ಬೆಳಗಿಸಿ ,ಸ್ವದೇಶಿ ಉತ್ನನ್ನಗಳ ಬಳಕೆಯ ಮಹತ್ವದ ಬಗ್ಗೆ ಮಾತನಾಡಿ, ಸಂಸ್ಥೆಯ ಯಶಸ್ಸಿಗೆ ಎಲ್ಲರ ಸಹಕಾರ ಕೋರಿದರು.ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜಾರಾಮ ಕಳಗಿ ,ಸಿಇಓ ಆನಂದ. ಬಿ.ಕೆ...
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿರುವ ಸದರ್ನ್ ರೆಸಿಡೆನ್ಸಿ ಕಟ್ಟಡದಲ್ಲಿ ಶ್ರೀಮತಿ ಮತ್ತು ಶ್ರೀ ಹೇಮನಾಥ್ ಕಲ್ಮಡ್ಕರವರ ಮಾಲಕತ್ವದ ಶ್ರೀ ಮೂಕಾಂಬಿಕಾ ಮಿನಿ ಸೂಪರ್ ಮಾರ್ಕೆಟ್ ಜು.11 ರಂದು ಶುಭಾರಂಭಗೊಂಡಿತು. ಶ್ರೀ ಹರಿ ಎಲಚ್ಚಿತ್ತಾಯರ ನೇತೃತ್ವದಲ್ಲಿ ಶ್ರೀ ಮಹಾಗಣಪತಿ ಹವನ ನಡೆಯಿತು. ಶ್ರೀ ಗೋವಿಂದ ನಾಯ್ಕ ಕಲ್ಮಡ್ಕ, ವಾಲಿಬಾಲ್ ಅಸೋಸಿಯೇಷನ್ ಮಾಜಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜಯಪ್ರಕಾಶ್...
ಕುಮಾರಧಾರ ತಪ್ಪಲಿನ ನಿತ್ಯ ಹರಿದ್ವರ್ಣ ಕಾಡುಗಳ ನಡುವಣ ಇರುವ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಮತ್ತಷ್ಟು ಹಸಿರುಮಯವಾಗಿಸಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಹಮ್ಮಿಕೊಂಡಿದ್ದ ಬೃಹತ್ ವನ ಸಂವರ್ಧನಾ ಕಾರ್ಯಕ್ರಮವು ಮಂಗಳವಾರ ಸಂಪನ್ನವಾಯಿತು. ಏಕಕಾಲದಲ್ಲಿ ೧೪ ಕಡೆ ವಿವಿಧ ಜಾತಿಯ ಸಸ್ಯಗಳನ್ನು ೧೪ ಗಣ್ಯರು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋವಿಡ್-೧೯ ಮಾರ್ಗಸೂಚಿಗೆ ಅನುಗುಣವಾಗಿ ಅಗಾಧ...
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸುಮಾರು ರೂ ೩೦೦ ಕೋಟಿ ವೆಚ್ಚದಲ್ಲಿ ಮೂರನೇ ಹಂತದ ಮಾಸ್ಟರ್ ಪ್ಲಾನ್ ಕಾಮಗಾರಿಯ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಯೋಜನೆಗಳ ಬಗ್ಗೆ ಸಭೆಯಲ್ಲಿ ವರದಿ ಸಿದ್ಧಪಡಿಸಿ ಚರ್ಚಿಸಲಾಯಿತು. ಅಭಿವೃದ್ಧಿ ಕೆಲಸಗಳು ದೇವಳದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ...
ಸಂಪಾಜೆ : ಖ್ಯಾತ ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ (78 ) ಅವರು ವಯೋ ಸಹಜ ಅಸೌಖ್ಯದಿಂದ ಜು.13 ರಂದು ನಿಧನರಾದರು. ಕೊಡಗು ಜಿಲ್ಲೆಯ ಸಂಪಾಜೆಯ ರಾಮಣ‍್ಣ ರೈ ಹಾಗೂ ತಾಯಿ ಕಾವೇರಿ ರೈ ಯವರ ಪುತ್ರ. ಇವರ ತಂದೆ ಕೂಡ ಯಕ್ಷಗಾನ ಕಲಾವಿದರಾಗಿದ್ದರು ಮತ್ತು ಶೀನಪ್ಪ ರೈ ಸಂಪಾಜೆಯವರಿಗೆ ಮಾರ್ಗದರ್ಶಕರಾಗಿದ್ದರು. ಇವರು ನಾಲ್ಕನೇ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಕಲ್ಮಕಾರು ಒಕ್ಕೂಟದ 42 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ನ್ಯಾಯವಾದಿಗಳಾದ ಗುರುಚರಣ್ ಕೊಪ್ಪಡ್ಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಮಕಾರು ಒಕ್ಕೂಟದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು ವಹಿಸಿದ್ದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ರಾಧಾಕೃಷ್ಣ, ನಾರಾಯಣ, ಚಂದ್ರಶೇಖರ್, ಕಲ್ಮಕಾರು ಒಕ್ಕೂಟದ ಜತೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಬಾಳುಗೋಡು ಒಕ್ಕೂಟದ 42 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಹರಿಹರ ಪಲ್ಲತ್ತಡ್ಕ ಸೇವಾ ಕೇಂದ್ರದಲ್ಲಿ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳುಗೋಡು ಒಕ್ಕೂಟದ ಅಧ್ಯಕ್ಷರಾದ ಲೋಕೇಶ್.ಬಿ ವಹಿಸಿದ್ದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಬಾಲಸುಬ್ರಹ್ಮಣ್ಯ, ನಿಕಟಪೂರ್ವ ಅದ್ಯಕ್ಷರಾದ ಜಯರಾಮ್, ತಾಲೂಕು ಆಂತರಿಕ ಲೆಕ್ಕ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜು.13 ರಂದು ಕೊಲ್ಲಮೊಗ್ರ ಒಕ್ಕೂಟದ 40 ಸ್ವ-ಸಹಾಯ ಸಂಘಗಳಿಗೆ ಲಾಭಾಂಶ ವಿತರಣೆಯನ್ನು ಮಾಡಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಟ್ಟ ಮಯೂರ ವಾಹನ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಲ್ಲಮೊಗ್ರ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ದೋಣಿಪಳ್ಳ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ...
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೀಸಿ ಟ್ರಸ್ಟ್ (ರಿ)ಸುಳ್ಯ ತಾಲ್ಲೂಕಿನ ಗುತ್ತಿಗಾರು ವಲಯದ ದೇವಚಳ್ಳ ಒಕ್ಕೂಟದ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರ ಲಾಭಾಂಶ ವಿತರಣಾ ಕಾರ್ಯಕ್ರಮವು ಹಣ ಸಂಗ್ರಹಣ ಕೇಂದ್ರ ದೇವಚಳ್ಳದಲ್ಲಿ ನಡೆಯಿತು .ಒಟ್ಟು ಒಕ್ಕೂಟದಲ್ಲಿ 39 ಸಂಘಗಳಿಗೆ ಲಾಭಾಂಶ ವಿತರಣೆ ನಡೆದಿದ್ದು ಸಾಂಕೇತಿಕವಾಗಿ ತೃಪ್ತಿ ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆಯ 52000 ಚೆಕ್ಕನ್ನು...
Loading posts...
All posts loaded
No more posts
