- Friday
- August 7th, 2026
ಮಡಪ್ಪಾಡಿ ಗ್ರಾಮದ ಮಡಪ್ಪಾಡಿ ಬೈಲಿನ ಹತ್ತು ಮಂದಿ ಸಮಸ್ತರಿಂದ ಆರಾಧಿಸಿಕೊಂಡು ಬರುತ್ತಿರುವ ಶ್ರೀ ಉಳ್ಳಾಕುಲು ಮತ್ತು ಪರಿವಾರ ದೈವಗಳ ಜಾತ್ರೋತ್ಸವ ಜ.25,26,27 ರಂದು ಗಣಹೋಮ, ನಾಗತಂಬಿಲ ಹಾಗೂ ದೈವ ನರ್ತನ ಸೇವೆಯೊಂದಿಗೆ ನಡೆಯಿತು. ಜ.25 ರಂದು ರಾತ್ರಿ ನಡೆದ ಭಕ್ತಾದಿಗಳ ಸಭೆ ಆಡಳಿತ ಮಂಡಳಿ ಅಧ್ಯಕ್ಷ ದಿನೇಶ್ ಮಡಪ್ಪಾಡಿಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಆಡಳಿತ ಮಂಡಳಿ...
ಸುಳ್ಯ ಮೆಸ್ಕಾಂ ಉಪವಿಭಾಗ ವ್ಯಾಪ್ತಿಯ 33/11ಕೆವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಾದ ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ, ಅರಂತೋಡು ಕೋಲ್ಚಾರ್, ಕಾವು, ಅಜ್ಜಾವರ,ಕೇನ್ಯ, ಸುಬ್ರಹ್ಮಣ್ಯ ಫೀಡರ್ ಗಳಲ್ಲಿ ಜ.30 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಭಾವೈಕ್ಯ ಯುವಕ ಮಂಡಲ (ರಿ)ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ ಮತ್ತು ಗ್ರಾಮ ಪಂಚಾಯತ್ ಪೆರುವಾಜೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಸಹಯೋಗದಲ್ಲಿ ಸಾರ್ವಜನಿಕ ಆಧಾರ್ ಕಾರ್ಡ್ ಮೇಳ ಕಾರ್ಯಕ್ರಮವು ಜ. 28 ರಂದು ಗ್ರಾಮ ಪಂಚಾಯತ್ ಪೆರುವಾಜೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಇದರ...
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಇಂದು ಬೆಳಗಿನ ಜಾವ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಕಲ್ಲಮಾಡದಲ್ಲಿ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಈ ದಿನ ರುದ್ರಚಾಮುಂಡಿ ದೈವದ ನೇಮೋತ್ಸವ, ತದನಂತರ ಗಂಧಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ...
ಬೆಂಗಳೂರಿನ ಶ್ರೀ ಜ್ಞಾನಮಂದಾರ ಶೈಕ್ಷಣಿಕ ಅಕಾಡೆಮಿ ನೀಡಿದ 'ಜ್ಞಾನಮಂದಾರ ಸಮಾಜರತ್ನ' ರಾಜ್ಯ ಪ್ರಶಸ್ತಿಯನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ಜ. 25 ರಂದು ಮಂಗಳೂರಿನ ಎಸ್ ಸಿ ಡಿ ಸಿ ಸಿ ಬ್ಯಾಂಕಿನಲ್ಲಿ ಪ್ರದಾನಿಸಲಾಯಿತು. ಅಕಾಡೆಮಿಯ ಮಹಾಪೋಷಕ, ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಪ್ರಶಸ್ತಿ ಪ್ರದಾನಗೈದು ಮಾತನಾಡಿ ಡಾ|...
ಉಬರಡ್ಕ ಗ್ರಾ.ಪಂ.ಅಧ್ಯಕ್ಷ ಉಪಾಧ್ಯಕ್ಷತೆಗೆ ಮೀಸಲಾತಿ ಜ.27 ರಂದು ಪ್ರಕಟವಾಗಿದೆ. ಅಧ್ಯಕ್ಷತೆಗೆ ಅನುಸೂಚಿತ ಪಂಗಡ ಮಹಿಳೆ ಗೆ ಮೀಸಲಾತಿ ನಿಗದಿಯಾಗಿದ್ದು ಕಾಂಗ್ರೆಸ್ ಬೆಂಬಲಿತರಾಗಿ ಗೆಲುವು ಸಾಧಿಸಿದ್ದ ಚಿತ್ರಕುಮಾರಿ ಪಾಲಡ್ಕ ಮಾತ್ರ ಅರ್ಹತೆ ಪಡೆದಿದ್ದಾರೆ. ಉಪಾಧ್ಯಕ್ಷತೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು ಉಳಿದ ಎಲ್ಲಾ ಸದಸ್ಯರು ಅರ್ಹತೆ ಪಡೆಯುತ್ತಾರೆ. ಇಲ್ಲಿ 9 ಸ್ಥಾನಗಳ ಪೈಕಿ ಬಿಜೆಪಿ 6 ರಲ್ಲಿ...
ಸುಳ್ಯ ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷತೆಯ ಸ್ಥಾನಗಳಿಗೆ ಜ.27 ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಮೀಸಲಾತಿ ಪ್ರಕ್ರಿಯೆಯಲ್ಲಿ ಘೋಷಿಸಲಾಗಿದೆ. ಬೆಳ್ಳಾರೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಟಿ, ಪೆರುವಾಜೆಯಲ್ಲಿ ಅಧ್ಯಕ್ಷತೆ ಹಿಂದುಳಿದ ವರ್ಗ ಎ, ಉಪಾಧ್ಯಕ್ಷತೆ ಎಸ್ ಸಿ ಮಹಿಳೆ, ಸಂಪಾಜೆಯಲ್ಲಿ ಹಿಂದುಳಿದ ವರ್ಗ ಎ, ಹಿಂದುಳಿದ...
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯಲ್ಲಿ 72 ನೇ ಗಣರಾಜ್ಯೋತ್ಸವವನ್ನು ಜ.26 ರಂದು ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ವಾಯುಸೇನೆಯ ನಿವೃತ್ತ ಸೈನಿಕರು, ಕೊಡುಗೈ ದಾನಿಗಳು, ಶಿಕ್ಷಣ ಪ್ರೇಮಿ, ಎಪಿಎಂಸಿ ಮಾಜಿ ಅಧ್ಯಕ್ಷ ದೇರಣ್ಣ ಗೌಡ ಅಡ್ಡಂತಡ್ಕ ಮುಖ್ಯ ಅತಿಥಿಗಳಾಗಿ...
Loading posts...
All posts loaded
No more posts
