ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಕಾಂಗ್ರೆಸ್ ಗ್ರಾಮ ಸಮಿತಿಯ ವತಿಯಿಂದ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇವರಗದ್ದೆಯ ಚಾಮುಂಡಿ ಕಟ್ಟೆಯ ಮೈದಾನದಲ್ಲಿ ನಡೆಯಿತು. ಗ್ರಾಮ ಸಮಿತಿಯ ಅಧ್ಯಕ್ಷರಾದ ಮಾದವ.ಡಿ ಅವರು ದ್ವಜಾರೋಹಣ ನೆರವೇರಿಸಿದರು, ಶಿವರಾಮ್ ರೈ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ನಾಯಕರಾದ ಕೃಷ್ಣಮೂರ್ತಿ ಭಟ್ ಅವರು ಸ್ವಾತಂತ್ರೋತ್ಸವದ ಕುರಿತು ಮಾತನಾಡಿದರು, ರವೀಂದ್ರ ರುದ್ರಪಾದ ರವರು ಶುಭಕೋರಿದರು.

ಜಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಯುವಕ ಮಂಡಲ ಮತ್ತು ಮಹಿಳಾ ಮಂಡಲದ ಸಹಕಾರದಲ್ಲಿ ಜಯನಗರ ಅಂಗನವಾಡಿ ಕೇಂದ್ರದಲ್ಲಿ ಆ. 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ನೆಬಿಸತ್ ಮಿಶ್ರಿಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ತಿರುಮಲೇಶ್ವರಿ, ಸಹಾಯಕಿ ಶ್ರೀನಿಧಿ ಹಾಗೂ ಯುವಕ ಮಂಡಲದ ಸದಸ್ಯರು, ಮಹಿಳಾ ಮಂಡಲದ ಸದಸ್ಯರು ಹಾಗೂ ಮಕ್ಕಳ ಪೋಷಕರು,...
Ad Widget

ಕೊಡಿಯಾಲಬೈಲು: 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಮಹಾತ್ಮ ಗಾಂಧಿ  ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ, ಕೊಡಿಯಾಲಬೈಲಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಲ್ನಾಡ್ ಶಾಲೆಯ ಅಧ್ಯಕ್ಷರಾದ ಪಿ. ಎಸ್. ಗಂಗಾಧರ್ ಅವರು ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅವರು ದೇಶದ ಸ್ವಾತಂತ್ರ್ಯ, ಏಕತೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.ಕಾರ್ಯಕ್ರಮದಲ್ಲಿ...

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು 80ನೇ ಸ್ವಾತಂತ್ರೋತ್ಸವ; ಯುವಕರು ರಾಷ್ಟ್ರ ಸೇವೆಯಲ್ಲಿ ಸದಾ ಸಿದ್ಧರಿರಬೇಕು; ಪಿ.ಬಿ. ದಿವಾಕರ ರೈ

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು 80ನೇ ಸ್ವಾತಂತ್ರೋತ್ಸವ ಸಂಭ್ರಮದಿಂದ ನೆರವೇರಿತು. ಕಾಲೇಜಿನ ಸಂಚಾಲಕ ಎ.ಸಿ. ವಸಂತ ಧ್ವಜಾರೋಹಣ ಗೈದರು. ನಂತರ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಪಿ.ಬಿ. ದಿವಾಕರ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವಕರು ರಾಷ್ಟ್ರ ಸೇವೆಯಲ್ಲಿ ಸದಾ ಸಿದ್ಧರಿರಬೇಕು ಎಂದು ಹೇಳಿದರು.ಹಿರಿಯ ವಿದ್ಯಾರ್ಥಿ...

ಚೊಕ್ಕಾಡಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚೊಕ್ಕಾಡಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚೊಕ್ಕಾಡಿಯಲ್ಲಿ ಯುವಕ/ಯುವತಿ ಮಂಡಲಗಳ ವತಿಯಿಂದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು. ಪ್ರಗತಿಪರ ಕೃಷಿಕರು ಹಾಗೂ ಊರ ಹಿರಿಯರಾದ ಇಟ್ಟಿಗುಂಡಿ ಚಿನ್ನಪ್ಪ ಗೌಡರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯಕ್ಕಾಗಿ ದುಡಿದ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿಕೊಂಡರು. ಯುವಕ/ಯುವತಿ ಮಂಡಲಗಳ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿ ರಾಷ್ಟ್ರಧ್ವಜಕ್ಕೆ...

ಸುಳ್ಯ ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಇಂಟಕ್ ಸ್ನೇಹ ಸಂಗಮ ರಿಕ್ಷಾ ಯೂನಿಯನ್ ಸುಳ್ಯ ಇದರ ವತಿಯಿಂದ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ ಬಳಿಯ ರಿಕ್ಷಾ ತಂಗುದಾಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು. ಇಂಟಕ್ ಕಾಂಗ್ರೆಸ್ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಯೋಧ ಕೃಷ್ಣಪ್ಪ ಗೌಡ ಪಾಲ್ತಾಡು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಹಿರಿಯರಾದ...

ಕೊಲ್ಲಮೊಗ್ರು : ಕೆವಿಜಿ ಅನುದಾನಿತ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರದ ಕೆವಿಜಿ ಅನುದಾನಿತ ಪ್ರೌಢಶಾಲೆ ಎ.ಓ.ಎಲ್.ಇ(ರಿ.)ಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೆರವಣಿಗೆಯೊಂದಿಗೆ ಆಚರಿಸಲಾಯಿತು. ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದೆವು. ಈ ಸಂದರ್ಭದಲ್ಲಿ ವರ್ಷಂಪ್ರತಿಯಂತೆ ದಿ.ಜನಾರ್ಧನ ಗೌಡ ಮಲ್ಲಾರ ಅವರ...

ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾಭಿವೃಧ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಮೇದಪ್ಪ ಗೌಡ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ವಿದ್ಯಾರ್ಥಿಗಳಾದ ತುಷರಾ.ಡಿ ಪೂರ್ವಜ್ ಮತ್ತು ‌ಸಿಂಚಿತಾ ಇವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಮಾತಾಡಿದರು. ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕರಾದ ಶ್ರೀ...

ಕಟ್ಟ-ಗೋವಿಂದನಗರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕಟ್ಟ-ಗೋವಿಂದನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸದಾಶಿವ ಕಟ್ಟ ಧ್ವಜಾರೋಹಣ ನೆರವೇರಿಸಿದರು. ಮಿಥುನ್ ಕುಮಾರ್ ಸೋನ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಮಾತನಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಹಾಗೂ ಶ್ರೀಮತಿ ಯಮುನಾ ಮತ್ತು ಮನೆಯವರು ಸಿಹಿತಿಂಡಿ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು,...

ಪಂಜ : ಸಮರ್ಪಕ ಲೆಕ್ಕಪತ್ರ ನೀಡಲು ಆಡಳಿತ ಸಮಿತಿ ವಿಫಲ – ರಾತ್ರಿಯಾದರೂ ಮುಗಿಯದ ಭಕ್ತಾಧಿಗಳ ಸಭೆ – ರಾಜೀನಾಮೆಗೆ ಒತ್ತಾಯ

ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ, ಆರ್ಥಿಕ ಪಾರದರ್ಶಕತೆ ಮತ್ತು ಗುತ್ತಿಗೆ ಪ್ರಕ್ರಿಯೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿರುವ ಗೊಂದಲಗಳಿಗೆ ಸ್ಪಷ್ಟನೆ ಕೋರಿ ಆ.15ರಂದು ಸಾರ್ವಜನಿಕ ಸಭೆ ಕರೆಯಬೇಕು ಎಂದು ಒತ್ತಾಯಿಸಿ ಭಕ್ತಾದಿಗಳು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರು ಅವರಿಗೆ ಮನವಿ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯವೈಖರಿ ಮತ್ತು ಹಣಕಾಸಿನ ವ್ಯವಹಾರಗಳ ಬಗ್ಗೆ...
Loading posts...

All posts loaded

No more posts

error: Content is protected !!