- Tuesday
- August 11th, 2026
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಸಂಘದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರು ಅಧಿಕಾರ ಸ್ವೀಕರಿಸಿದರು.ಜು.01 ರಂದು ಅನಂತರಾಮ ಮಣಿಯಾನಮನೆ ರವರು ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಅಧಿಕಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರು ಜೂ.30 ರಂದು ನಿವೃತ್ತಿ ಹೊಂದಿದ್ದು, ಜು.01 ರಂದು ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.ಬೀಳ್ಕೊಡುಗೆ ಸಮಾರಂಭದಲ್ಲಿ ಶ್ರೀಮತಿ ಉಷಾ ಅನಂತರಾಮ ಮಣಿಯಾನಮನೆ ದಂಪತಿಗಳನ್ನು ಫಲ-ಪುಷ್ಪ, ಸ್ಮರಣಿಕೆ ನೀಡಿ ಶಾಲು-ಹಾರ ಹಾಕಿ ಗೌರವಿಸಲಾಯಿತು.ಸೊಸೈಟಿ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ...
ಸುಳ್ಯದ ಎನ್.ಎಂ.ಪಿ.ಯು.ಸಿ. ಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಮಾದಕ ವಸ್ತುಗಳ ಉಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿ ಕ್ಷೇಮಾಧಿಕಾರಿ,ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಬೋಧಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಾ...
ದಾರುಲ್ ಹಿಕ್ಮಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ ಇದರ ಮಂತ್ರಿ ಮಂಡಲ ರಚನೆಯು ದಿನಾಂಕ 28.06.2025ರಂದು ನಡೆಯಿತು. 2025-26ನೇ ಶೈಕ್ಷಣಿಕ ಸಾಲಿನ ಶಾಲಾ ಮುಖ್ಯಮಂತ್ರಿಯಾಗಿ ಮಹಮ್ಮದ್ ರಹೀಝ್ ಕೆ.ಎಂ(8ನೇ ತರಗತಿ), ಶಾಲಾ ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ಅಫ್ರೀದ್(8ನೇ ತರಗತಿ) ಮತ್ತು ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಅಸೀದ್(8ನೇ ತರಗತಿ) ಆಯ್ಕೆಯಾದರು. ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ಶಮೀಮ್(7ನೇ ತರಗತಿ),...
ಸರಕಾರಿ ಪ್ರೌಢ ಶಾಲೆ ಅಜ್ಜಾವರದಲ್ಲಿ ಜೂ.30 ರಂದು ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಾದ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ವಿದ್ಯಾ ಶಂಕರಿ ಶಿಕ್ಷಕಿ ರವರು ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ಪ್ರಿಯಾ ರಾಜಮೋಹನ್ ಆಡಳಿತಾಧಿಕಾರಿ ಸಖೀ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆ ರವರು ಸಂಪನ್ಮೂಲ...
ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಏನಕಲ್ಲು ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಮಂಗಳವಾರ ಸಂಜೆ ನಡೆಯಲಿರುವುದು. ಪದಗ್ರಹಣ ಅಧಿಕಾರಿಯಾಗಿ ಲಯನ್ಸ್ ಜಿಲ್ಲೆ 317 ಡಿ ಇದರ ವೈಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವರ್ಧನ ಶೆಟ್ಟಿ ಉಪಸ್ಥಿತರಿರಲಿದ್ದಾರೆ. ನೂತನ ಅಧ್ಯಕ್ಷರಾಗಿ ವಿಮಲಾ...
ಸುಬ್ರಹ್ಮಣ್ಯ : ಜೂನ್ 28 ರಿಂದ ಜುಲೈ 1 ರವರೆಗೆ ಉತ್ತರಕಾಂಡದ ಹರಿದ್ವಾರಾದಲ್ಲಿ ನಡೆಯುವ 18 ವರ್ಷದ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಸುಬ್ರಹ್ಮಣ್ಯ ಸಮೀಪದ ಕೈಕಂಬದ ಆಶಿಷ್ ಕೆ.ವೈ ಕೋಟೆಬಾಗಿಲು ಆಯ್ಕೆಯಾಗಿದ್ದಾರೆ.ಗುಜರಾತಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡಕ್ಕೆ ಆಯ್ಕೆಯಾಗಿ ಇವರು ಭಾರತೀಯ ಕ್ರೀಡಾ ಪ್ರಾಧಿಕಾರದ ತಂಡವನ್ನು ಪ್ರತಿನಿಧಿಸಲಿದ್ದಾರೆ. ತರಬೇತುದಾರರಾದ ರಂಗನಾಥ ರವರ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್.ಎಸ್.ಪಿ.ಯು ಕಾಲೇಜಿನ ಉಪನ್ಯಾಸಕರಾದ ಮನೋಜ್ ಕುಮಾರ್ ಬಿ.ಎಸ್ ರವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದ ಆಧೀನದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸ್ಮಾರಕ ಮಹಾವಿದ್ಯಾಲಯದ ನಿವೃತ್ತ ಅರ್ಥಶಾಸ್ತ ಪ್ರಾಧ್ಯಾಪಕರಾದ ಡಾ.ತಿಮ್ಮಯ್ಯ.ಟಿ.ಡಿ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಎಕಾಮಿಕ್ಸ್ ಆಫ್ ಅರೆಕಾನಟ್ ಕಲ್ಟಿವೇಷನ್ ವಿತ್ ಸ್ಪೆಷಲ್ ರೆಫರೆನ್ಸ್...
ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್(ರಿ.) ಸುಳ್ಯ ಗಾಂಧಿನಗರ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಜೂ.29 ರಂದು ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಯೋಜನೆಯ ಫಲಾನುಭವಿಗಳ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು. ಪಿಯುಸಿ ವಿಭಾಗದಲ್ಲಿ ಶ್ರೀ ಮಂಜು ಸಂಘದ ಸದಸ್ಯರಾದ ವಸಂತಿ ರವರ ಮಗ ಕೌಶಿಕ್(548), ಶ್ರೀದೇವಿ ಸಂಘದ ಸದಸ್ಯರಾದ ಬಾಲಕೃಷ್ಣರವರ ಮಗಳು...
(ವರದಿ : ರತ್ನಾಕರ ಸುಬ್ರಹ್ಮಣ್ಯ ) ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ....
Loading posts...
All posts loaded
No more posts
