- Tuesday
- August 11th, 2026
ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ನೂತನ ಉಪಕುಲಪತಿಯಾಗಿ ಅಧಿಕಾರವಹಿಸಿಕೊಂಡ ಡಾ.ಬಿ.ಸಿ.ಭಗವಾನ್ ಅವರನ್ನು ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸುಳ್ಯದ ವತಿಯಿಂದ ಬೆಂಗಳೂರಿನಲ್ಲಿರುವ ಉಪಕುಲಪತಿಗಳ ಕಛೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ) ಕಮಿಟಿ”ಬಿ” ಸುಳ್ಯ ಇದರ ಚೇರ್‌ಮೆನ್ ಡಾ.ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕಿ ಡಾ.ಅಭಿಜ್ಞಾ ಕೆ.ಆರ್ ಮುಖ್ಯ ಕಾರ್ಯನಿರ್ವವಣಾಧಿಕಾರಿ ಡಾ.ಉಜ್ವಲ್ ಯು.ಜೆ,...
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾದ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ತಿಂಗಳು ಪೂರೈಸುತ್ತಿದ್ದು, ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 20 ರಂದು ಗುರುವಾರ ಸಂಜೆ 7.30ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show Appನಲ್ಲಿ ticketಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು...
ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಾ.18 ಮತ್ತು 19 ರಂದು ಶ್ರೀ ದೈವದ ಒತ್ತೆಕೋಲ ಮಹೋತ್ಸವ ನಡೆಯಲಿದೆ. ಮಾ.18 ರಂದು ಬೆಳಿಗ್ಗೆ ಗಣಪತಿ ಹವನ , ಶುದ್ಧಿ ಕಲಶ, ಮೇಲೇರಿ ಕಾರ್ಯಕ್ರಮ , ಅಶ್ವತ್ಥ ಪೂಜೆ ಮದ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಭಂಡಾರ ತೆಗೆಯುವುದು, ಮೇಲೇರಿಗೆ ಅಗ್ನಿ ಸ್ಪರ್ಶ, ಸಾರ್ವಜನಿಕ ಅನ್ನ ಸಂತರ್ಪಣೆ ಹಾಗೂ ಕುಳಿಚಾಟ...
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಾ.20 ರಂದು ಕೃಷಿ ಮಾಹಿತಿ ಕಾರ್ಯಾಗಾರ ಯುವಕ ಮಂಡಲ ಸಭಾಭವನ ಮಡಪ್ಪಾಡಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಾಗಾರದ ಉದ್ಘಾಟನೆಯನ್ನು ಕೃಷಿಕರಾದ ಯತೀಶ್ ಗೋಳ್ಯಾಡಿ ನೇರವೇರಿಸಲಿದ್ದು, ಸಂಘದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಉಷಾ ಜಯರಾಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃಷಿ ಮಾಹಿತಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಆದೇಶದಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿ ನೇಮಕ ಗೊಂಡ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಇಂದು ಸುಳ್ಯ ನಗರ ಪಂಚಾಯತ್ ಸಭಾಂಗಣ ದಲ್ಲಿ ನಡೆದ ಸಮಾರಂಭ ದಲ್ಲಿ ಅಧಿಕಾರ ಸ್ವೀಕರಿಸಿದರುಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಗ್ಯಾರಂಟಿ ಸಮಿತಿ...
ಸುಳ್ಯದ ಯುವ ಸಂಗೀತ ನಿರ್ದೆಶಕ ಮಯೂರ ಅಂಬೆಕಲ್ಲು ಸಾರಥ್ಯದಲ್ಲಿ ಮೂಡಿಬಂದ "ಭಾವ ತೀರ ಯಾನ" ಚಲನಚಿತ್ರ ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ನಿರಂತರ ಪ್ರದರ್ಶನ ಕಾಣುತ್ತಿದ್ದು ನಾಲ್ಕನೇ ವಾರದಲ್ಲಿ ಮುಂದುವರೆಯುತ್ತಿದೆ. ಮಾ.18 ರಂದು ಮಂಗಳವಾರ ಬೆಳಿಗ್ಗೆ 10.30 ಮತ್ತು ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...
ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.
Loading posts...
All posts loaded
No more posts
