- Thursday
- August 13th, 2026
ಕಳೆದ ವರ್ಷ ಜಾಲ್ಸುರು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಬೈಕ್ ಚಾಲಕ ರಾಜಶೇಖರ ಎಂಬತನನ್ನು ದೋಷ ಮುಕ್ತ ಗೊಳಿಸಿ ಸುಳ್ಯ ಹಿರಿಯ ಸಿವಿಲ್ ನ್ಯಾಯಲಯ ಆದೇಶಿಸಿದೆ.ದಿನಾಂಕ : 28-12-2023ರಂದು ಬೆಳಿಗ್ಗೆ ಮಾಣಿ - ಮೈಸೂರು ಹೆದ್ದಾರಿ ರಸ್ತೆಯ ಸುಳ್ಯದ ಜಾಲ್ಸೂರು ಪೇಟೆಯ ಫಾರೆಸ್ಟು ಚೆಕ್ ಪೋಸ್ಟ್ ...
ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಡಾ. ಕೆ.ವಿ. ಚಿದಾನಂದ ರವರು ನೂತನ ಬ್ರಹ್ಮರಥ ಸಮರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಹಳೆಯ ರಥವನ್ನು ನವೀಕರಣಕ್ಕಾಗಿ ಕೋಟೇಶ್ವರಕ್ಕೆ ಶಿಪ್ಟ್ ಮಾಡಲಾಗಿದೆ. ಈ ಹಳೆ ರಥವನ್ನು ನವೀಕರಿಸಿ ದೇವಸ್ಥಾನದ ಒಳಾಂಗಣದಲ್ಲಿ ಬಂಡಿ ರಥವನ್ನಾಗಿ ಮಾರ್ಪಾಡು ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಸುಳ್ಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿಯಾಗಿ ಕೆಲಸ ನಿರ್ವಹಿಸಿ ವರ್ಗಾವಣೆ ಗೊಂಡು ಬಳಿಕ ಇದೀಗ ಬಿಜಾಪುರದಲ್ಲಿ ಜಿಲ್ಲಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈ ಯವರು ಇಂದು ಮುಂಜಾನೆ ಹೃದಯಾಘಾತದಿಂದ ನಿದನರಾದರು ಇವರು ಮೂಲತಃ ಸವಣೂರಿನವರು ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘ ಹಾಗೂ ದಾನಿಗಳ ಸಹಕಾರದೊಂದಿಗೆ ನೂತನವಾಗಿ ಖರೀದಿಸಿದ ಅಂಬ್ಯುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಜ.02 ರಂದು ಹರಿಹರ ಪಳ್ಳತ್ತಡ್ಕದಲ್ಲಿ ನಡೆಯಿತು.ಬೆಳಿಗ್ಗೆ ಅಂಬ್ಯುಲೆನ್ಸ್ ವಾಹನವನ್ನು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ತಂದು ಪೂಜೆ ನೆರವೇರಿಸಿ ನಂತರ ಎಲ್ಲಪಡ್ಕದ ಶ್ರೀ ಗುಳಿಗರಾಜನ ಕಟ್ಟೆಯ ಬಳಿ...
ಮಂಡೆಕೋಲು ಗ್ರಾಮದ ಕಣೆಮರಡ್ಕ ಅಯ್ಯಪ್ಪ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮ ಹಾಗೂ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಲಾಗಿದೆ. ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದೆಂದು ಶಬರಿಗಿರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.
ಅರಂತೋಡು: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಹೊಸ ವರ್ಷ ಆಚರಣೆಗೆ ಸಿದ್ಧತೆ ಮಾಡುತ್ತಿದ್ದ ಆರೋಪದಲ್ಲಿ 30 ಮಂದಿ ಯುವಕರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಿ.31 ರಂದು ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ...
ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಸಂಪಾಜೆ ವಲಯ ತೊಡಿಕಾನ ಕಾರ್ಯಕ್ಷೇತ್ರದ ಆದಿಶಕ್ತಿ ಸಂಘದ ಸದಸ್ಯ ರಾದ ವಸಂತಿ ರವರ ಅತ್ತೆ ರಾಮಕ್ಕರವರಿಗೆ ವಾಟರ್ ಬೆಡ್ ನೀಡಲಾಯಿತು. ರಾಮಕ್ಕರವರು ಅನಾರೋಗ್ಯದಿಂದಿದ್ದು ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ನ್ನು ವಲಯ ಜನಜಾಗ್ರತಿ ಅಧ್ಯಕ್ಷರಾದ ಸೋಮಶೇಖರ ಪೈಕ ರವರು ವಿತರಿಸಿದರು. ವಲಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ಹಾಗೂ ಶ್ರೀ ಕ್ಷೇತ್ರ ಪೆರುವಾಜೆ ಭಕ್ತವೃಂದದಿಂದ ಜ.1 ರಂದು ರಾತ್ರಿ ಕರಸೇವೆ ನಡೆಯಿತು. ಶ್ರೀ ಕ್ಷೇತ್ರದಲ್ಲಿ ದಿನಾಂಕ 16-01-2025 ರಿಂದ 21-01-2025 ರವರೆಗೆ ವಾರ್ಷಿಕ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಡೆಯಲಿದೆ.
ಶ್ರೀ ಕ್ಷೇತ್ರ ಬ್ರಹ್ಮರಗಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ 47ನೇ ವರ್ಷದ ಅಯ್ಯಪ್ಪ ದೀಪೋತ್ಸವ ಮತ್ತು ರಂಗಪೂಜೆ ಮಹೋತ್ಸವ ಜ 01ರಂದು ವಿಜೃಂಭಣೆಯಿಂದ ನಡೆಯಿತು.ಹಳೆಗೇಟು ನಿಂದ ಕೇರಳದ ಚೆಂಡೆ ವಾದನದೊಂದಿಗೆ, ಶ್ರೀ ದುರ್ಗಾಶಕ್ತಿ ಸೇವಾ ಬಳಗ ಹೊಸಗದ್ದೆ, ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿ, ಶ್ರೀ ಗಜಾನನ ಭಜನಾ ಮಂದಿರ...
ಗುತ್ತಿಗಾರು ಮುಖ್ಯಪೇಟೆಯಲ್ಲಿರುವ ಬಸ್ ನಿಲ್ದಾಣದ ಬಳಿಯ ಚರಂಡಿಯ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಸಂಗ್ರಹವಾಗಿದೆ. ಚರಂಡಿ ತೆರೆದ ಸ್ಥಿತಿಯಲ್ಲಿರುವುದರಿಂದ ಪ್ರಾಣಿ,ಪಕ್ಷಿಗಳು ಕೊಳಚೆ ನೀರನ್ನು ಬಳಸುವಂತಾಗಿದೆ. ಇದು ಹೀಗೆ ಮುಂದುವರೆದರೇ ಸಾಂಕ್ರಾಮಿಕ ರೋಗ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಥಳಿಯಾಡಳಿತ ಹಾಗೂ ಆರೋಗ್ಯ ಇಲಾಖೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
Loading posts...
All posts loaded
No more posts
