ಮದ್ಯಪಾನ ಸೇವಿಸಿ ಬಂದ ಯುವಕ – ಎತ್ತಿ ಎಸೆದ ದೇವಸ್ಥಾನದ ಆನೆ – ವಿಡಿಯೋ ವೈರಲ್

https://youtube.com/shorts/AAj5VNzHCnU?si=XIHnmt7YsU0DoDUA ಯುವಕನೊಬ್ಬನನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ಎಳೆದು ಹಾಕಿದ ಘಟನೆ ನಡೆದಿದ್ದು ವೀಡಿಯೋ ವೈರಲ್ ಆಗಿದೆ.ಸುಬ್ರಹ್ಮಣ್ಯದ  ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರನ್ನು ಸ್ವಾಗತಿಸಲು ಹೋಗುವ ಸಲುವಾಗಿ ನಿಂತಿತ್ತು.  ಈ ವೇಳೆ ಒಂದಿಬ್ಬರು ಪೊಲೀಸರು ಕೂಡ ಆನೆಯ ಬಳಿಯಲ್ಲಿ ನಿಂತು ಪೋಟೋ ತೆಗೆಯಲು ಬಂದಿದ್ದರು.ಇದೇ ವೇಳೆಗೆ ಸುಬ್ರಹ್ಮಣ್ಯದ ಲಾಡ್ಜ್...

ಸುಬ್ರಹ್ಮಣ್ಯ: ಭಾರಿ ಮಳೆಗೆ ತುಂಬಿ ಹರಿಯುತ್ತಿರುವ ಕುಮಾರಧಾರ ನದಿ

ಭಾರೀ ಮಳೆಗೆ ಕುಕ್ಕೆಯ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತರಿಗೆ ಸೂಚನೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ದ.ಕ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆಘಟ್ಟ ಪ್ರದೇಶ, ಕುಮಾರಪರ್ವತ ಸೇರಿದಂತೆ ಸುಬ್ರಹ್ಮಣ್ಯ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ರಾತ್ರಿ ಸುರಿದ ನಿರಂತರ ಮಳೆಗೆಯಿಂದಾಗಿ ಕುಮಾರಧಾರ ನದಿ ತುಂಬಿ...
Ad Widget

ಜೆಜೆಎಂ ಕುಡಿಯುವ ನೀರಿನ ಕುರಿತು ಗ್ರಾ.ಪಂ ಅಧ್ಯಕ್ಷರು ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳ ಸಭೆ – ಎಂಜಿನಿಯರಿಂಗ್ ವಿಭಾಗಗಕ್ಕೆ ತೀವ್ರ ತರಾಟೆ, ಎಂಜಿನಿಯರ್ ಮತ್ತು ಪಿಡಿಒಗಳಿಗೆ ಖಡಕ್ ಆದೇಶ ನೀಡಿದ ಭಾಗೀರಥಿ ಮುರುಳ್ಯ

ಸುಳ್ಯ: ಸುಳ್ಯ ತಾಲೂಕಿನಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಜೆಜೆಎಂ ಕುಡಿಯುವ ನೀರಿನ ಕುರಿತಾದ ಸಮಸ್ಯೆಗಳು ಗಮನಕ್ಕೆ ಬರುತ್ತಿದ್ದಂತೆ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ನಡೆಸಲಾಯಿತು. ಜೆಜೆಎಂ ನಲ್ಲಿ ಸಂಪೂರ್ಣ ಅವ್ಯವಹಾರ ಆಗಿದೆ ಗ್ರಾ.ಪಂ ಅಧ್ಯಕ್ಷರು ಸದಸ್ಯರುಗಳ ಆರೊಪ:ಸಭೆ ಆರಂಭವಾಗುತ್ತಿದ್ದಂತೆ ಎಂಜಿನಿಯರ್...

ಮಿನಿ ಸಮುದಾಯ ಭವನ ನಿರ್ಮಾಣಕ್ಕೆ ಮನವಿ.

ಅಜ್ಜಾವರ: ಮೇದಿನಡ್ಕ ಸಿಆರ್ ಸಿ ಕಾಲೋನಿಯಲ್ಲಿ ಮಿನಿ ಸಮುದಾಯ ಭವನ ನಿರ್ಮಾಣ ಮತ್ತುಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ ಅಭಿವೃದ್ಧಿ, ಮೇದಿನಡ್ಕದ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆಶಾಸಕರಿಗೆ ಮನವಿ ಸಲ್ಲಿಸಲಾಯಿತು, ಈ ಸಂದರ್ಭದಲ್ಲಿ ರಮೇಶ್ ಮೇದಿನಡ್ಕ, ದಯಾಳನ್ ಉಪಸ್ಥಿತರಿದ್ದರು.

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯ ನೂತನ ಕಟ್ಟಡಕ್ಕೆ ಸ್ಥಳಾಂತರ , ಶುಭಾರಂಭ.

ಮಂಡೆಕೋಲು: ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯವು ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡು ಗಣಪತಿ ಹವನದೊಂದಿಗೆ ಪ್ರಾರಂಭಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಶಲ ಉದ್ದಂತಡ್ಕ, ಉಪಾಧ್ಯಕ್ಷರು ಪ್ರತಿಮಾ ಹೆಬ್ಬಾರ್, ಸದಸ್ಯರಾದ ಗೀತಾಮಾವಂಜಿ, ಗ್ರಾಮ ಪಂಚಾಯತ್ ಪಿಡಿಓ ರಮೇಶ್ , ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ, ಪ್ರಾಥಮಿಕ ಕೃಷಿ ಪತ್ತಿನ...

ಕೃಷಿಕರ ಬೆಳೆ ವಿಮೆ ಪಾವತಿಗೆ ಮುಂದಿನ ವಾರದಲ್ಲಿ ಪ್ರಾರಂಭ – ಭಾಗೀರಥಿ ಮುರುಳ್ಯ.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಬೆಳೆ ವಿಮೆ ಪರಿಹಾರಕ್ಕೆ ಸಂಬಂದಿಸಿ ಮುಂದಿನ ವಾರದಿಂದ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗುತ್ತದೆ ಇದಕ್ಕೆ ಸಂಬಂಧಿಸಿ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದ್ದು ಮುಂದಿನ ವಾರ ಈ ಪ್ರಕ್ರಿಯೆ ಜಾರಿಗೆ ಬರಲಿದೆ ಪಹಣಿ ಇರುವ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಭೆಯಲ್ಲಿ ಹೇಳಿದರು.

ಭಾರಿ ಮಳೆ ಹಿನ್ನೆಲೆ, ದ.ಕ. ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಜೂ.27 ಗುರುವಾರದಂದು ರಜೆ ಘೋಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ (ಜೂ.27) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ.

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಪರಿಹರಿಸಲು ಶಾಸಕರಿಗೆ ಮನವಿ

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸ್ಥಳೀಯ ನಿವಾಸಿಗಳಿಂದ ಸುಳ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಕೆ ಅಬ್ದುಲ್ ಗಫೂರ್,ಅಬ್ದುಲ್ ಕರೀಂ ಬಿ ಎಂ, ಕುಂಞಾಮು ಕೆ ಎಂ,ಮಹಮ್ಮದ್ ಮುಖದ್ದಸ್,ಮತ್ತಿತರರು ಉಪಸ್ಥಿತರಿದ್ದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ. ಜಯರಾಮರನ್ನು ಭೇಟಿ ಮಾಡಿದ ನೂತನ ತಂಡ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಸ್ವಗೃಹದಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಪಿ.ಸಿ. ಜಯರಾಮ ಇವರು ಹೊಸ ತಂಡಕ್ಕೆ ಶುಭ ಹಾರೈಸಿದರು. ಅರೆಭಾಷೆ ಸಂಸ್ಕೃತಿ...

ಎಲಿಮಲೆ : ಮಾದಕ ವಸ್ತು ವಿರೋಧಿ ದಿನಾಚರಣೆ

ಜೂ 26 ರಂದು ಎಲಿಮಲೆ ಪ್ರೌಢಶಾಲೆ ಯಲ್ಲಿ 'ಮಾದಕ ವಸ್ತು ವಿರೋಧಿ ದಿನ'ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾದಕ ವ್ಯಸನೆ ಎಂದರೇನು, ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ವ್ಯಸನ ಮುಕ್ತ ದೇಶವನ್ನಾಗಿಸಲು ವಿದ್ಯಾರ್ಥಿಗಳ ಪಾತ್ರವನ್ನು ಮನವರಿಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಿಕ್ಷೇತರ- ಸಿಬ್ಬಂದಿ ವರ್ಗದವರು...
Loading posts...

All posts loaded

No more posts

error: Content is protected !!