- Saturday
- August 22nd, 2026
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 75 ನೇ ಗಣರಾಜ್ಯೋತ್ಸವ ಆಚರಣೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉದ್ಘಾಟನಾ ಸಮಾರಂಭ ನಡೆಯಿತು.ಧ್ವಜಾರೋಹಣ ವನ್ನು ಶಾಲಾ ಸಂಚಾಲಕ ಜಾಕೆ ಸದಾನಂದ ನೆರವೇರಿಸಿ, ಬಳಿಕ ಸ್ಕೌಟ್ಸ್- ಗೈಡ್ಸ್ ನ್ನು ದೀಪಬೆಳಗಿಸಿ ಉದ್ಘಾಟಿಸಿದರು.ಶಿಕ್ಷಕ ಕುಮಾರ್ ಲಮಾಣಿ ಗಣರಾಜ್ಯೋತ್ಸವ ಮತ್ತು ಸ್ಕೌಟ್ಸ್ ಗೈಡ್ಸ್ ಬಗ್ಗೆ ಮಾತನಾಡಿದರು.ವೇದಿಕೆಯನ್ನು ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್...
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿ ೭೫ನೇ ಗಣರಾಜ್ಯೋತ್ಸವ ಕಾರ‍್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀ ಉದಯಶಂಕರ ಹೆಚ್ ಧ್ವಜಾರೋಹಣ ಗೈದರು. ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ರವರು ಗಣರಾಜ್ಯೋತ್ಸವದ ಕುರಿತಾಗಿ ಮಾತನಾಡಿ ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಗುತ್ತಿಗಾರು ಬಸ್ ನಿಲ್ದಾಣದ ಎದುರಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅನುದಾನದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ನಿಲ್ದಾಣದ ಮೇಲ್ಚಾವಣಿ ಜ.26 ಗಣರಾಜ್ಯೋತ್ಸವದ ಸುಸಂದರ್ಭದಲ್ಲಿ ಉದ್ಘಾಟನೆ ಗೊಂಡಿತು. ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಸಂಘಟನೆಗೆ ಶುಭ ಹಾರೈಸಿದರು. ಸಂಘದ ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ ಕಡ್ತಲಕಜೆ ದೀಪ ಬೆಳಗಿಸಿ...
ಕೆವಿಜಿ : ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಗಣರಾಜ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್...
ಮೆಸ್ಕಾಂ ವತಿಯಿಂದ ಸುಳ್ಯ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಸುರಕ್ಷತಾ ಜಾಥಾ ನಡೆಯಿತು. ವಿದ್ಯುತ್ ಅಪಘಾತಗಳನ್ನು ತಪ್ಪಿಸಲು ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಬಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು. ಈ ಜಾಥಾದಲ್ಲಿ ಮೆಸ್ಕಾಂ ಸುಳ್ಯ ಉಪವಿಭಾಗದ ಎಇಇ ಹರೀಶ್ ನಾಯ್ಕ್ , ಜೂನಿಯರ್ ಇಂಜಿನಿಯರ್ ಗಳಾದ ಪ್ರಸಾದ್ ಕೆ., ಮಹೇಶ್ ಕೆ., ಶ್ರೀಮತಿ ದಿವ್ಯ, ಶ್ರೀಮತಿ ಉಷಾ, ಹಿರಿಯ...
ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಹಾಗೂ ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ 75 ನೇ ಗಣರಾಜ್ಯೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಧ್ವಜಾರೋಹಣವನ್ನು ದ. ಕ.ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಡಾ. ರೇವತಿ ನಂದನ್ ರವರು ನೆರವೇರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲದ ಶ್ರೀಮತಿ ದಯಾಮಣಿಯವರು ಸ್ವಾಗತಿಸಿ, ಮುಖ್ಯೋಪಾಧ್ಯಾಯಿನಿ ಭಾರತಿಯವರು ವಂದಿಸಿದರು....
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಪ್ರಯುಕ್ತ ದೈವ-ದೇವರುಗಳಿಗೆ ಜ.25ರಂದು ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಪ್ರಧಾನ ಅರ್ಚಕರಾದ ಪರಮೇಶ್ವರ ಭಟ್ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೇವಾ ಸಮಿತಿ ಸದಸ್ಯರು...
ಬಿಜೆಪಿ ಯುವ ಮೋರ್ಚಾದ ವತಿಯಿಂದನಮೋ ನವಮತದಾರ ಸಮ್ಮೇಳನ ದ ಕಾರ್ಯಕ್ರಮವು ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯದಲ್ಲಿ ಇಂದು ನಡೆಯಿತು.ಸಮ್ಮೇಳನದ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ನವಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ...
2023-24ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಯನ್ನು ಉತ್ತಮ ಪಡಿಸುವ ಸಲುವಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು ಈ ಸಮುದಾಯಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯಗಳನ್ನು ನೀಡಲು ಜಿಲ್ಲಾ ಮಟ್ಟದ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ಅವಶ್ಯಕತೆ ಇರುತ್ತದೆ. ನಾಮನಿರ್ದೇಶಿತ ಸದಸ್ಯರ ಕಾರ್ಯವಧಿಯು 2 ವರ್ಷಗಳಾಗಿರುತ್ತದೆ. ಅದರಂತೆ ಅಲೆಮಾರಿ ಸಮುದಾಯಗಳ...
ಶಾಫಿ ಕುತ್ತಮೊಟ್ಟೆಯವರು ಸುಳ್ಯ ವಿಧಾನಸಭಾ ಕ್ಷೇತ್ರದ ಇಂಟೆಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡನೇ ಭಾರಿ ಆಯ್ಕೆಯಾಗಿದ್ದಾರೆ. ಇಂಟೆಕ್ ಕಾಂಗ್ರೆಸ್ ನ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧ್ಯಕ್ಷರಾದ ಮನೋಹರ್ ಶೆಟ್ಟಿಯವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾದ ಶಾಫಿಯವರು ಯೂತ್ ಕಾಂಗ್ರೆಸ್ ನಲ್ಲಿ ವಿವಿಧ ಜವಾಬ್ದಾರಿ ಹೊತ್ತು ಕೆಲಸ ಕಾರ್ಯ ನಿರ್ವಹಿಸಿದ್ದರು. 2020ರಲ್ಲಿ...
Loading posts...
All posts loaded
No more posts
