ಸುಬ್ರಹ್ಮಣ್ಯ : ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರಗತಿ ಸಾಧಿಸಿದ ವಿದ್ಯಾರ್ಥಿಗಳಿಗೆ ಸಹಾಯಧನ ಹಸ್ತಾಂತರ

ಸುಬ್ರಹ್ಮಣ್ಯ ಮೇ 19 : ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್(ರಿ.) ಸುಬ್ರಹ್ಮಣ್ಯ ಇದರ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕಗಳಿಸಿದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯಧನವನ್ನು ವಿತರಿಸಲಾಯಿತು. ಎರಡನೇ ವರ್ಷದ ಸಹಾಯಧನ ವಿತರಣೆ ಇದಾಗಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...

ಕುಕ್ಕೆ ಸುಬ್ರಹ್ಮಣ್ಯದ ರಾಮಕೃಷ್ಣ ಕೋಡಿಂಬಾಳ ಅವರಿಗೆ ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್

ಶೋಡೋಕಾನ್ ಸ್ಕೂಲ್ ಆಫ್ ಕರಾಟೆ ಇಂಡಿಯಾ ಇದರಿಂದ ಕುಕ್ಕೆ ಸುಬ್ರಹ್ಮಣ್ಯದ ರಾಮಕೃಷ್ಣ(ಕಿಶನ್) ಪಂಜಳ ಕೋಡಿಂಬಾಳ ಅವರಿಗೆ ಕರಾಟೆಯಲ್ಲಿ ಪೋರ್ತ್‌ಡನ್ ಬ್ಲ್ಯಾಕ್ ಬೆಲ್ಟ್ ಪಡೆದು ಸಾಧನೆ ಮೆರೆದಿದ್ದಾರೆ. ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ 4ನೇ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಮಾಣಪತ್ರ ಮತ್ತು ಪಾರಿತೋಷಕ ಪಡೆದರು. ಕಳೆದ 25 ವರ್ಷಗಳಿಂದ ಮೈಸೂರಿನಲ್ಲಿ ಕರಾಟೆ ಗುರು ಯೋಗೀಶ್ ಮೈಸೂರು ಅವರಿಂದ ಕರಾಟೆ...
Ad Widget

13ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ ಚಲನಚಿತ್ರ – ಮೇ.20 ರಂದು ಸಂಜೆ 7.15 ಕ್ಕೆ ಚಿತ್ರ ವೀಕ್ಷಿಸಲು ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.20 ರಂದು ಬುಧವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ.

ಕುಲ್ಕುಂದ ಬಸವೇಶ್ವರ ದೇವಳದ ಅಭಿವೃದ್ಧಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರಿಗೆ ಮನವಿ

ಸುಬ್ರಹ್ಮಣ್ಯ ಮೇ 18 : ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಸವೇಶ್ವರ ದೇವಾಲಯ ಪ್ರಗತಿ ಪಥದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಸ್ಥಳೀಯ ಹಾಗೂ ಪರಊರ ಭಕ್ತ ಅಭಿಮಾನಿಗಳನ್ನು ಆಕರ್ಷಿಸುವಲ್ಲಿ ಹೆಜ್ಜೆ ಇಟ್ಟಿದೆ. ಈಗಾಗಲೇ ದೇವಾಲಯದ ಅಭಿವೃದ್ಧಿ ಕೆಲಸ ಕಾರ್ಯಗಳು ಬಹಳಷ್ಟು ಆಗಿದ್ದು, ಇನ್ನಷ್ಟು ಕೂಡ ಆಗಬೇಕಾಗಿದೆ. ಆ ನಿಟ್ಟಿನಲ್ಲಿ ಬಸವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಗಿರಿಧರ ಸ್ಕಂದ, ಕಾರ್ಯದರ್ಶಿಗಳಾದ, ವಿಜಯಕುಮಾರ್...

ನೆಲ್ಲೂರು ಕೆಮ್ರಾಜೆ : ಭೀಕರ ಗಾಳಿ ಮಳೆಗೆ ಮರ ಬಿದ್ದು ನೆಲಸಮಗೊಂಡ ತೋಟ – 05 ವಿದ್ಯುತ್ ಕಂಬಗಳು ಧರಾಶಾಹಿ

ಸುಳ್ಯ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಗಾಳಿ ಮಳೆಯು ಭಾರಿ ಆಸ್ತಿಪಾಸ್ತಿ ನಷ್ಟವನ್ನುಂಟುಮಾಡಿದ್ದು, ರೈತರನ್ನು ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿದೆ. ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಬಿರುಗಾಳಿಯ ಹೊಡೆತಕ್ಕೆ ಬೃಹತ್ ಮರವೊಂದು ಕೃಷಿ ತೋಟದ ಮೇಲೆ ಉರುಳಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಬೆಳೆ ಸಂಪೂರ್ಣ ನಾಶವಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೆರೆಮೂಲೆ ನಿವಾಸಿ...

ಇಂದಿನ(ಮೇ 19) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ಅಲ್ಪ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 19 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 430 ರಿಂದ...

ಮರಿಗಳಿಗಾಗಿ ಆಹಾರವ ಅರಸುತ್ತಾ ಸಾಗಿ ಮಸಣದ ಹಾದಿ ಹಿಡಿದ ಬೆಕ್ಕು…

ಕೆಲವು ವರ್ಷಗಳ ಹಿಂದೆ ಒಂದು ದಿವಸ ಜೋರಾಗಿ ಮಳೆ ಸುರಿಯುತ್ತಿದ್ದ ಮಧ್ಯರಾತ್ರಿಯ ಸಂದರ್ಭದಲ್ಲಿ ನಮ್ಮ ಮನೆಯ ಹಿಂಭಾಗದಲ್ಲಿ ಬೆಕ್ಕೊಂದು ಅಳುತ್ತಿರುವ ಸದ್ದು ಕೇಳಿಸುತ್ತಿತ್ತು. ನಾವು ಮನೆಮಂದಿಯೆಲ್ಲರೂ ಎಚ್ಚರಗೊಂಡು ಶಬ್ಧ ಬಂದತ್ತ ಸಾಗಿ ಮನೆಯ ಹಿಂಬಾಗಿಲನ್ನು ತೆರೆದು ನೋಡಿದಾಗ ಪುಟ್ಟ ಬೆಕ್ಕಿನ ಮರಿಯೊಂದು ಜೋರಾಗಿ ಸುರಿಯುತ್ತಿದ್ದ ಆ ಮಳೆಗೆ ಒದ್ದೆಯಾಗಿ ನಡುಗುತ್ತಾ ಮೂಕವಿಸ್ಮಿತವಾಗಿ ನಮ್ಮ ಮುಖವನ್ನೇ ನೋಡುತ್ತಾ...

ಇಂದು (ಮೇ.19) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 19 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಅಜ್ಜಾವರ,, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ...

12 ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ ಚಲನಚಿತ್ರ – ಮೇ.19 ರಂದು ಸಂಜೆ 7.15 ಕ್ಕೆ ಪ್ರದರ್ಶನ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.19 ಮಂಗಳವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ...

ಪೆರಾಜೆ : ಅಕ್ರಮ ಹರಳುಕಲ್ಲು ಗಣಿಗಾರಿಕೆ ಮತ್ತೆ ಆರಂಭ – ಅಧಿಕಾರಿಕಾರಿಗಳ ಭೇಟಿ

ಪೆರಾಜೆ ಗ್ರಾಮದ ತೊಕ್ಕುಳಿ ಎಂಬಲ್ಲಿ ಅಕ್ರಮವಾಗಿ ಹರಳುಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆಂದು ಗಣಿ ಇಲಾಖಾಧಿಕಾರಿಗಳು ಭೇಟಿ ನೀಡಿದ ಘಟನೆ ನಡೆದಿದೆ.‌ಕೆಲ ವರ್ಷಗಳ ಹಿಂದೆ ಕೂಡ ಇಲ್ಲಿ ಅಕ್ರಮ ಹರಳುಕಲ್ಲು ಗಣಿಗಾರಿಕೆಯ ಬಗ್ಗೆ ವರದಿಯಾಗಿತ್ತು. ಅಧಿಕಾರಿಗಳ ದಾಳಿ ಬಳಿಕ ಸ್ಥಗಿತಗೊಂಡಿದ್ದ ಗಣಿಗಾರಿಕೆ ಚಟುವಟಿಕೆ ಇದೀಗ ಮತ್ತೆ ಆರಂಭಗೊಂಡಿದೆ ಎನ್ನಲಾಗಿದೆ.‌ ಅಧಿಕಾರಿಗಳು ಭೇಟಿ ನೀಡಿದಾಗ ಮಣ್ಣು ಅಗೆದಿರುವುದು ಪತ್ತೆಯಾಗಿದ್ದು, ಆರೋಪಿಗಳು...
Loading posts...

All posts loaded

No more posts

error: Content is protected !!