ರುಡ್ ಸೆಟ್ ವತಿಯಿಂದ ಕೋಳಿ ಸಾಕಾಣಿಕೆ ಬಗ್ಗೆ ಉಚಿತ ತರಬೇತಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಕೋಳಿ ಸಾಕಾಣಿಕೆ ಬಗ್ಗೆ 09-10-2023 ರಿಂದ 18-10-2023 ರವರೆಗೆ 10 ದಿನಗಳ ಕಾಲ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಸಂಸ್ಥೆಯ ಪ್ರಕಟಣೆ ತಿಳಿಸಿದೆ....

ವೆಂಕಟರಮಣ ಸೊಸೈಟಿ ವತಿಯಿಂದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

ದೇವಚಳ್ಳ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಶೈಲೇಶ್ ಅಂಬೆಕಲ್ಲುರವರಿಗೆ ಸೊಸೈಟಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ, ಉಪಾಧ್ಯಕ್ಷ ಮೋಹನ್ ರಾಮ್ ಸುಳ್ಳಿ, ನಿರ್ದೇಶಕರಾದ ಪಿ.ಎಸ್ ಗಂಗಾಧರ, ನಿತ್ಯಾನಂದ ಮುಂಡೋಡಿ, ಜಾಕೆ ಸದಾನಂದ, ಚಂದ್ರಾ ಕೋಲ್ಚಾರ್, ಕೆ.ಸಿ...
Ad Widget

ಅಡ್ಕಾರು ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಕಾರ್ತಿಕೇಯ ಯುವ ಸೇವಾ ಸಮಿತಿಯ ವತಿಯಿಂದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನವರಾತ್ರಿ ಪ್ರಯುಕ್ತ ನಡೆಯುವ ಐದನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಅ.6ರಂದು ಬೆಳಿಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್...

ಸುಬ್ರಹ್ಮಣ್ಯ: ಹೆಲ್ಮೆಟ್ ಕಡ್ಡಾಯ ಬಗ್ಗೆ ಅರಿವು ಮೂಡಿಸಿದ ವಿದ್ಯಾರ್ಥಿಗಳು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಹೆಲ್ಮೆಟ್ ಕಡ್ಡಾಯದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮವನ್ನು ಇಂದು ಗುರುವಾರ ವಿದ್ಯಾರ್ಥಿಗಳು ಮುಖ್ಯರಸ್ತೆಯಲ್ಲಿ ಸಾಗಿ ಕಾಶಿಕಟ್ಟೆ ಸರ್ಕಲ್ ಗೆ ಬಂದು ಕಾಲೇಜಿಗೆ ಹಿಂತುರುಗಿದರು .ವಿದ್ಯಾರ್ಥಿಗಳು ಘೋಷಣಾ ಫಲಕದೊಂದಿಗೆ ಮೆರವಣಿಗೆಯಲ್ಲಿ ಮೌನವಾಗಿ ಕಾಲೇಜಿನವರೆಗೆ ಸಾಗಿರುವರು. ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಕೂಡ ಸಾತ್ ನೀಡಿರುವರು.

ಕೊಲ್ಲಮೊಗ್ರು : ಅ.07 ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಡ್ರೈವಿಂಗ್ ಲೈಸನ್ಸ್ ನೋಂದಣಿ ಕಾರ್ಯಕ್ರಮ

ವರದಿ : ಉಲ್ಲಾಸ್ ಕಜ್ಜೋಡಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ಕೊಲ್ಲಮೊಗ್ರು ಗ್ರಾಮ ಗೌಡ ಸಮುದಾಯ ಸಮಿತಿ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಭಾಗಿತ್ವದಲ್ಲಿ ಅ.07 ಶನಿವಾರದಂದು ಕೊಲ್ಲಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಡ್ರೈವಿಂಗ್ ಲೈಸನ್ಸ್ ನೋಂದಣಿ...

ಇಂದು ಸಂಜೆ ಸುಳ್ಯಕ್ಕೆ ಆಗಮಿಸಲಿದೆ ಶೌರ್ಯ ಜಾಗರಣ ರಥ ಯಾತ್ರೆ

ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ದೇಶದಾದ್ಯಂತ ನಡೆಯುತ್ತಿರುವ ಶೌರ್ಯ ಜಾಗರಣ ರಥ ಯಾತ್ರೆ ಅ.6 ರಂದು ಸುಳ್ಯಕ್ಕೆ ಆಗಮಿಸಲಿದೆ. ಇದರ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸುಳ್ಯ ಪ್ರಖಂಡ ಹಾಗೂ ಕಡಬ ಪ್ರಖಂಡದ ನೇತೃತ್ವದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿಬೃಹತ್‌ ಹಿಂದೂ ಶೌರ್ಯ ಸಂಗಮ ನಡೆಯಲಿದೆ. ಸೆ.25ರಂದು ಚಿತ್ರದುರ್ಗದಿಂದ ಹೊರಟ ರಥಯಾತ್ರೆಯು...

ಚೂಂತಾರು ವೇ.ಮೂ. ಲಕ್ಷ್ಮೀನಾರಾಯಣ ಭಟ್ಟರ ಸ್ಮರಣಾರ್ಥ ವೆಂಕಟ್ರಮಣ ಭಟ್ ಮತ್ತು ಪದ್ಮನಾಭ ಭಟ್ಟರಿಗೆ ವೈದಿಕರಿಗೆ ಪುರಸ್ಕಾರ

ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್ ಚೂಂತಾರುರವರ ಸ್ಮರಣಾರ್ಥ ವೈದಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅವರ ಪುಣ್ಯತಿಥಿಯ ದಿನವಾದ ಅ. 3ರಂದು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಆಶ್ರಯದಲ್ಲಿ ಚೂಂತಾರು ಉಪಾಸನಾದಲ್ಲಿ ನಡೆಯಿತು. ಪ್ರಥಮ ವರ್ಷದ ಪುರಸ್ಕಾರವನ್ನು ಕೊಳ್ತಿಗೆ ಗ್ರಾಮದ ಚೌರ್ಕಾಡು ಮನೆತನದವರಾದ ದರ್ಭೆ ವೆಂಕಟ್ರಮಣ ಭಟ್ ಮತ್ತು ಐವರ್ನಾಡು ದೇವಸ್ಥಾನದ ಅರ್ಚಕರಾದ ಪರಕ್ಕಜೆ...

ಅ.07 ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಅ.07 ಶನಿವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಕೇರ್ಪಳ,  ಶ್ರೀರಾಂಪೇಟಿ, ಜಬಳೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00...

ಡಾ. ಅನುರಾಧಾ ಕುರುಂಜಿಯವರಿಗೆ ಎನ್ಎಸ್ಎಸ್ ಸೇವಾ ಸಂಗಮದಿಂದ ಸನ್ಮಾನ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ ಪಡೆದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರು ಆದ ಡಾ. ಅನುರಾಧಾ ಕುರುಂಜಿಯವರನ್ನು ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್. ಎಸ್. ಸೇವಾ ಸಂಗಮದ ವತಿಯಿಂದ ಸನ್ಮಾನಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾವು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಮಕೃಷ್ಣ...

ಸುಬ್ರಹ್ಮಣ್ಯ  ಲೋಕೋಪಯೋಗಿ ವಿಶೇಷ ಉಪವಿಭಾಗಕ್ಕೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನೇಮಕ

ಕುಕ್ಕೆ ಸುಬ್ರಹ್ಮಣ್ಯ  ಲೋಕೋಪಯೋಗಿ ವಿಶೇಷ ಉಪವಿಭಾಗಕ್ಕೆ ನೂತನವಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಬಿ. ಸೋಮು ಅವರು ಆಗಮಿಸಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಇವರು ಸುಮಾರು 20 ವರ್ಷಗಳ ಕಾಲ ನೀರಾವರಿ ಇಲಾಖೆಯಲ್ಲಿದ್ದು ಇದೀಗ ಸುಬ್ರಹ್ಮಣ್ಯ ವಿಶೇಷ ಉಪ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿರುವರು. ಇಲ್ಲಿಯವರೆಗೆ ಪ್ರಭಾರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್...
Loading posts...

All posts loaded

No more posts

error: Content is protected !!