- Saturday
- June 27th, 2026
ಗುತ್ತಿಗಾರಿನಲ್ಲಿ ತರಕಾರಿ ವ್ಯಾಪಾರಸ್ಥರಾಗಿರುವ ಹೊನ್ನಮೂಲೆ ಚಿನ್ನಪ್ಪ ಗೌಡ ಅವರಿಗೆ ಇತ್ತೀಚೆಗೆ ರಸ್ತೆ ಅಪಘಾತದಿಂದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ನೆರವಾಗುವ ಹಿನ್ನೆಲೆಯಲ್ಲಿ ಗುತ್ತಿಗಾರಿನ ವರ್ತಕರ ಸಂಘದ ವತಿಯಿಂದ ರೂ. 20650 ನ್ನು ನೀಡಲಾಯಿತು.
ವಿಜಯಕರ್ನಾಟಕ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಬಣ್ಣ ಹಚ್ಚಿ ಪ್ಲಾಸ್ಟಿಕ್ ಮುಕ್ತ ಪರಿಸರ ಎಂಬ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಧನ್ವಿತ್.ಎ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಆರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಮುಖ್ಯೋಪಾಧ್ಯಾಯರಾಗಿ ಪದೋನ್ನತಿಗೊಂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಚಂದ್ರಶೇಖರ್ ಪಾರೆಪ್ಪಾಡಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘ...
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 05ರಂದು ಆಚರಿಸಲಾಯಿತು. ಇದರ ಅಂಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಸಂಭ್ರಮಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಡುಗಲ್ಲು ಇಲ್ಲಿ ವಿಶ್ವನಾಥ್ ಅತ್ಯಾಡಿ ಮತ್ತು ಸಹೋದರರಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಸಮಾರಂಭ ಜೂನ್ 10ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮೊದಲಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕರಿಂದ ಸ್ವಾಗತದೊಂದಿಗೆ ಪ್ರಾಥಮಿಕ ನುಡಿಗಳು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸುಬ್ರಹ್ಮಣ್ಯ ಅತ್ಯಾಡಿ ಇವರು...
ದೇವಚಳ್ಳ ಗ್ರಾಮದ ಅಚ್ರಪ್ಪಾಡಿ ಕಿ.ಪ್ರಾ.ಶಾಲೆಗೆ ಬೆಂಗಳೂರಿನ ಎಜುಕೇರ್‌ನ ಸಂಸ್ಥಾಪಕ ಜಯಚಂದ್ರ ಮತ್ತು ನಿರ್ದೇಶಕರು ಪಠ್ಯೋಪಕರಣಗಳ ಕೊಡುಗೆ ನೀಡಿದ್ದಾರೆ. ಸುಮಾರು ₹17500 ಮೌಲ್ಯದ 35 ಶಾಲಾ ಬ್ಯಾಗ್‌ಗಳನ್ನು ತಮ್ಮ ತಂದೆ ಈಶ್ವರಯ್ಯನವರ ಸ್ಮರಣಾರ್ಥ ನೀಡಿದ್ದು, ಇದೇ ವೇಳೆ ಬೆಂಗಳೂರಿನ ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ನಟರಾಜು ಎ.ಬಿ...
ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿಗೆ ನೂತನ ರಥ ನಿರ್ಮಾಣವಾಗಲಿದ್ದು ಈ ಹಿನ್ನೆಲೆಯಲ್ಲಿ ರಥ ನಿರ್ಮಾಣ ಕಾರ್ಯಕ್ಕೆ ಕಾಷ್ಟ ಶಿಲ್ಪಿಗೆ ವೀಳ್ಯ ಮುಹೂರ್ತವು ಜೂ.05 ಸೋಮವಾರದಂದು ಬೆಳಗ್ಗೆ ಗಂಟೆ 9.30ಕ್ಕೆ ನಡೆಯಲಿದೆ. ರಥ ನಿರ್ಮಾಣದ ಬಗ್ಗೆ ದೇವಸ್ಥಾನದಲ್ಲಿ ಊರ ಭಕ್ತಾದಿಗಳ ಪೂರ್ವಭಾವಿ ಸಭೆಯು ಇತ್ತೀಚೆಗೆ ನಡೆದಿತ್ತು. ಮಾ.23 ರಂದು ಪನ್ನೆಯಲ್ಲಿ ರಥ ನಿರ್ಮಾಣಕ್ಕೆ ದಾನವಾಗಿ ನೀಡಿದ...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೇ.31ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಸಂಚಾಲಕರಾದ ಶ್ರೀ ಪಿ ಜಿ ಎಸ್ ಎನ್. ಪ್ರಸಾದ್, ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಉಪ ಕಾರ್ಯದರ್ಶಿಯವರಾದ ಭಾರತಿ ಶಂಕರ್ ಆದಾಳ,ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ಶ್ರೀಮತಿ ಹರಿಣಾಕ್ಷಿ, ಎಸ್ ಡಿ ಎಂ ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದು...
ಪುತ್ತೂರು ಹಾಗೂ ಕಡಬ ತಾಲೂಕಿನ ಉಪ್ಪಿನಂಗಡಿ, ರಾಮಕುಂಜ,ಆಲಂಕಾರು, ಕಾಣಿಯೂರು ಮತ್ತು ಸವಣೂರು ಗ್ರಾಮ ಪಂಚಾಯತಿಗಳಲ್ಲಿ ಜಲಜೀವನ್ ಮಿಷನ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡ ಬೀದಿನಾಟಕ ಯಶಸ್ವಿಯಾಗಿ ನಡೆಯಿತು. ಎಲ್ಲಾ ಪಂಚಾಯತಿಗಳಲ್ಲೂ ಬಹಳಷ್ಟು ಸಂಖ್ಯೆಯಲ್ಲಿ ಗ್ರಾಮಸ್ಥರು , ಪ್ರಯಾಣಿಕರು, ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಬೀದಿನಾಟಕ ವೀಕ್ಷಿಸಿ ಶ್ಲಾಘನೆ ವ್ಯಕ್ತಪಡಿಸಿದರಲ್ಲದೇ ಮಾಹಿತಿ...
Loading posts...
All posts loaded
No more posts
